Site icon Vistara News

Road Accident : ಬಸ್ ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆ; ಚಕ್ರಕ್ಕೆ ಸಿಲುಕಿ ಸಾವು

Road Accident

ಶಿವಮೊಗ್ಗ: ಬಸ್ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ (Road Accident) ಮೃತಪಟ್ಟಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ಮೂಲದ ಮಹಿಳೆ (37) ಎನ್ನಲಾಗಿದೆ.

ಸಿಗಂದೂರು ಚೌಡೇಶ್ವರಿ ದರ್ಶನ ಪಡೆದು ಬರುವಾಗ ಆತುರದಲ್ಲಿ ಕೆಎಸ್ಆರ್‌ಟಿಸಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್‌ ಮುಂದೆ ಚಲಿಸಿದ್ದು, ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾರೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

ವಿಜಯನಗರದಲ್ಲಿ ಬೈಕ್‌ಗಳ ಮುಖಾಮುಖಿ ಡಿಕ್ಕಿ; ಎಗರಿ ಬಿದ್ದ ಬಾಲಕ ಸಾವು

ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬೈಕ್ ಹಿಂದೆ ಕುಳಿತಿದ್ದ ಬಾಲಕ ಎಗರಿ ಬಿದ್ದು ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ವಿಜಯನಗರದ ಹರಪನಹಳ್ಳಿ – ಕೂಡ್ಲಿಗಿ ರಸ್ತೆಯ ಹರಾಳು ಕ್ರಾಸ್ ಬಳಿ ಘಟನೆ ನಡೆದಿದೆ. ಕೂಡ್ಲಿಗಿ ತಾಲೂಕಿನ ನಿವಾಸಿ ಮಹಮದ್ (13) ಮೃತ ದುರ್ದೈವಿ.

ಮಹಮದ್‌ ತಂದೆ ಅಸ್ಲಾಂ ಭಾಷಾ ಅವರು ಕೆಎಸ್‌ಆರ್‌ಸಿಟಿ ಬಸ್‌ ಓವರ್ ಟೆಕ್ ಮಾಡಲು ಹೋಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಬರುತ್ತಿದ್ದ ರೇವಣಸಿದ್ದಪ್ಪ ಎಂಬುವವರ ಬೈಕ್‌ಗೆ ಗುದ್ದಿದ್ದಾರೆ. ಪರಿಣಾಮ ಡಿಕ್ಕಿ ರಭಸಕ್ಕೆ ಹಿಂಬದಿ ಕುಳಿತಿದ್ದ ಮಹಮದ್‌ ಹಾರಿ ಬಿದ್ದು ಮೃತಪಟ್ಟಿದ್ದಾನೆ. ಅಸ್ಲಾಂ ಭಾಷಾ, ಮತ್ತೊಬ್ಬ ಪುತ್ರ ಮಹಮದ್ ಫರಾನ್ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆದರೆ ಮಹಮದ್‌ ತಾಯಿ ಬಸ್ ಚಾಲಕನನ್ನು ದೂರಿದ್ದಾರೆ. ಬಸ್ ಸ್ಪೀಡ್ ಆಗಿ ಬಂದಾಗ ಬೈಕ್ ಬ್ಯಾಲೆನ್ಸ್ ತಪ್ಪಿ ಮತ್ತೊಂದು ಬೈಕ್‌ಗೆ ಡಿಕ್ಕಿಯಾಗಿದೆ. ಬಸ್‌ ಮಗನಿಗೂ ಡಿಕ್ಕಿ ಹೊಡೆದಿದೆ. ನನ್ನ ಮಗನ ಸಾವಿಗೆ ಬಸ್ ಚಾಲಕ ಶಿವಕುಮಾರ್ ಕೂಡಾ ಕಾರಣ ಎಂದು ದೂರು ದಾಖಲಿಸಿದ್ದಾರೆ. ಸದ್ಯ ಈ ಸಂಬಂಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version