ರಿಪ್ಪನ್ಪೇಟೆ: ಶಾಲಾ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಪಟ್ಟಣದ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಜರುಗಿದೆ.
ಪಟ್ಟಣದ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ಓದುತಿದ್ದ 15 ವರ್ಷದ ವಿದ್ಯಾರ್ಥಿನಿಯೋರ್ವಳು ಮಂಗಳವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂದು ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ರಿಪ್ಪನ್ಪೇಟೆ ಠಾಣೆಯ ಪಿಎಸ್ಐ ಪ್ರವೀಣ್ ಎಸ್.ಪಿ. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.