Site icon Vistara News

Self Harming: ರಿಪ್ಪನ್‌ಪೇಟೆಯಲ್ಲಿ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ

Housewife Kavana commits suicide by hanging herself in Ripponpet

ರಿಪ್ಪನ್‌ಪೇಟೆ: ಗೃಹಿಣಿಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್‌ ಠಾಣಾ (Ripponpete Police Station) ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಜರುಗಿದೆ.

ಕವನ (24) ಮೃತಪಟ್ಟ ಗೃಹಿಣಿ. ತೀರ್ಥಹಳ್ಳಿ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಕೊಳವಳ್ಳಿ ಮೂಲದ ಮೃತ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್‌ನಲ್ಲಿ ಕೆಲಸ ನಿರ್ವಹಿಸುತಿದ್ದರು.

ಇದನ್ನೂ ಓದಿ: Yuva Nidhi Scheme: 5ನೇ ಗ್ಯಾರಂಟಿ ಯುವನಿಧಿ ನೋಂದಣಿಗೆ ನಾಳೆ ಡೇಟ್‌ ಫಿಕ್ಸ್!‌ ಯಾವೆಲ್ಲ ದಾಖಲೆ ಬೇಕು?

ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಮೃತ ಕವನ ಅವರಿಗೆ ಐದು ವರ್ಷದ ಮಗನಿದ್ದು, ತಾಯಿ ಮನೆಯಲ್ಲಿ ಬಿಟ್ಟಿದ್ದಾರೆ. ಮಂಗಳವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ. ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version