Site icon Vistara News

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

Agee hunnime Thousands of devotees have darshan of Shri Renukamba Devi of Chandragutti

ಸೊರಬ: ತಾಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ (Chandragutti Shri Renukamba Devi temple) ಆಗೀ ಹುಣ್ಣಿಮೆಯ ಪ್ರಯುಕ್ತ ಗುರುವಾರ ಸಾವಿರಾರು ಭಕ್ತರು ಆಗಮಿಸಿ, ವಿಶೇಷ ಪೂಜೆ (Shivamogga News) ಸಲ್ಲಿಸಿದರು.

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಹರಿಹರ, ಶಿಕಾರಿಪುರ, ಹಾನಗಲ್, ವಿಜಯಪುರ, ಚಿತ್ರದುರ್ಗ, ಹಾವೇರಿ, ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಶ್ರೀ ರೇಣುಕಾದೇವಿಯ ದರ್ಶನ ಪಡೆದು ಉಧೋ ಉಧೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಹುಣ್ಣಿಮೆ ಹಿನ್ನೆಲೆ ದೇವಸ್ಥಾನದ ಆವರಣದಲ್ಲಿರುವ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವಿಯ ಹೆಸರಿನಲ್ಲಿ ಭಕ್ತರು ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸಿದರು. ಧಾರ್ಮಿಕ ಸೇವೆ, ಹರಕೆ ಸಲ್ಲಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಭಕ್ತರು ಕುಟುಂಬ ಸಮೇತರಾಗಿ ಸಹ ಭೋಜನ ಮಾಡುವ ದೃಶ್ಯವೂ ಕಂಡುಬಂದಿತು.

ಇದನ್ನೂ ಓದಿ: Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

ಪ್ರತಿ ಹುಣ್ಣಿಮೆ ಮತ್ತು ವಿಶೇಷ ದಿನಗಳಲ್ಲಿ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಶೀ ರೇಣುಕಾಂಬ ದೇವಸ್ಥಾನಕ್ಕೆ ಆಗಮಿಸುತ್ತಾರೆ. ಆದರೆ ರಸ್ತೆ ಕಿರಿದಾದ ಕಾರಣ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸುಮಾರು 1 ಗಂಟೆ ಕಾಲ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಸ್ಥಳೀಯ ಜನಪ್ರತಿನಿಧಿಗಳು ಚಂದ್ರಗುತ್ತಿ ಮುಖ್ಯ ರಸ್ತೆಯನ್ನು ಅಗಲಿಕರಿಸಿ ವ್ಯವಸ್ಥಿತವಾದ ರಸ್ತೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Exit mobile version