Shivamogga News: ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ - Vistara News

ಶಿವಮೊಗ್ಗ

Shivamogga News: ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು; ರಿಪ್ಪನ್‌ಪೇಟೆಯಲ್ಲಿ ಸಂಭ್ರಮಾಚರಣೆ

Shivamogga News: ವಿಧಾನ ಪರಿಷತ್‌ನ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಎಸ್‌.ಎಲ್‌. ಭೋಜೇಗೌಡ, ಡಾ. ಧನಂಜಯ ಸರ್ಜಿ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು.

VISTARANEWS.COM


on

Alliance Candidates Win in MLC South West Constituency Celebration at Ripponpet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ವಿಧಾನ ಪರಿಷತ್‌ನ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಎಸ್‌. ಎಲ್‌. ಭೋಜೇಗೌಡ, ಡಾ. ಧನಂಜಯ ಸರ್ಜಿ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ (Shivamogga News) ನಡೆಸಿದರು.

ಇದನ್ನೂ ಓದಿ: Pesticides in Spices: MDH, Everest ಬೆನ್ನಲ್ಲೇ ರಾಜ್ಯದ ಮಸಾಲೆ ಪದಾರ್ಥಗಳಿಗೂ ತಟ್ಟಿದ ಬ್ಯಾನ್‌ ಬಿಸಿ

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್‌.ಎಲ್‌.ಭೋಜೇಗೌಡ ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಮಾತನಾಡಿದರು.

ಇದನ್ನೂ ಓದಿ: Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಈ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರುಗಳಾದ ಎನ್. ಸತೀಶ್, ಎಂ.ಬಿ.‌ ಮಂಜುನಾಥ್, ಸುರೇಶ್ ಸಿಂಗ್, ಸೋಮಶೇಖರ್ ದೂನ, ಪಿ. ರಮೇಶ್, ರಾಮಚಂದ್ರ, ಸುಧೀರ್ ಪಿ., ಮುರುಳಿ ಕೆರೆಹಳ್ಳಿ, ಈಶ್ವರ್ ಮಳಕೊಪ್ಪ, ಮಹೇಶ್ ಮಾನಿಕೆರೆ, ಮಂಜುಳಾ ಕೇತರ್ಜಿರಾವ್‌, ದೀಪಾ ಸುಧೀರ್‌, ಪದ್ಮಾ ಸುರೇಶ್, ಲೀಲಾಶಂಕರ್‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Electric shock : ನಿದ್ದೆಗಣ್ಣಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ಯುವಕ ಸ್ಥಳದಲ್ಲೇ ಸಾವು

Electric shock : ಮನೆ ಮುಂದಿದ್ದ ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡಲು ಹೋದ ಯುವಕನಿಗೆ ಕರೆಂಟ್‌ ಶಾಕ್‌ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

VISTARANEWS.COM


on

By

electric Shock Youth dies on the spot after being hit by a broken electric wire
Koo

ಶಿವಮೊಗ್ಗ: ವಿದ್ಯುತ್ ತಗುಲಿ (Electric shock) ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕಾರ್ತಿಕ್‌ .ಎಸ್ (19) ಮೃತ ದುರ್ದೈವಿ.

ಶುಕ್ರವಾರ ಬೆಳಗಿನ ಜಾವ ಮನೆ ಮುಂಭಾಗದ IBEX ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಏಕಾಏಕಿ ವಿದ್ಯುತ್ ಪ್ರವಹಿಸಿದ್ದು ಕಾರ್ತಿಕ್‌ ಬೇಲಿಯ ಮೇಲೆ ಬಿದ್ದಿದ್ದಾನೆ. ತಕ್ಷಣ ಆತನ ಕೂಗಾಟ ಕೇಳಿ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ, ಆದರೆ ಕಾರ್ತಿಕ್‌ ಬದುಕುಳಿಯಲಿಲ್ಲ.

ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತ್ತಿದ್ದ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Tumkur News : ಸಾಲ ತೀರಿಸಲಾಗದೆ ಅಕ್ಕನ ಮಗಳನ್ನೇ ಮಾರಾಟ ಮಾಡಿದ್ದಳು ಚಿಕ್ಕಮ್ಮ!

“ಅರ್ಧ ಕಿಲೋ ಮೀಟರ್​ ಓಡಿದರೂ ಪತ್ನಿ ದೇಹ ಸಿಗಲೇ ಇಲ್ಲ”- ಮುಂಬೈ ಹಿಟ್‌ ಆ್ಯಂಡ್‌ ರನ್‌ ಬಗ್ಗೆ ಸಂತ್ರಸ್ತ ಹೇಳಿದಿಷ್ಟು

ಮುಂಬೈ: ಶಿವಸೇನೆ ಮುಖಂಡನ ಪುತ್ರನ BMW ಕಾರು ಡಿಕ್ಕಿ(Mumbai Hit And Run) ಹೊಡೆದು ಪತ್ನಿಯನ್ನು ಕಳೆದುಕೊಂಡಿರುವ ಮೀನು ಮಾರಾಟಗಾರ ಪ್ರದೀಪ್‌ ನಖ್ವಾ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಭಾನುವಾರ ಬೆಳಗ್ಗೆ ಪ್ರದೀಪ್‌ ಪತ್ನಿ ಜೊತೆಗೆ ಕೋಳಿವಾಡಕ್ಕೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ BMW ಕಾರು ಡಿಕ್ಕಿ ಹೊಡೆದಿದೆ. ಪ್ರದೀಪ್‌ ರಸ್ತೆಗೆ ಬಿದ್ದಿದ್ದು, ಅವರ ಪತ್ನಿ ಕಾವೇರಿ ನಖ್ವಾರನ್ನು ಬಹುದೂರ ಎಳೆದೊಯ್ದಿತ್ತು. ಅರ್ಧ ಕಿಲೋಮೀಟರ್‌ ದೂರ ಪ್ರದೀಪ್‌ ಕಾರಿ ಹಿಂದೆ ಓಡಿದರಾದರೂ ತಮಗೆ ಪತ್ನಿಯ ದೇಹ ಕಾಣಲೇ ಇಲ್ಲ ಎಂದು ಪ್ರದೀಪ್‌ ಹೇಳಿದ್ದಾರೆ.

ನಾನು ಕಾರಿನ ಹಿಂದೆಯೇ ಅರ್ಧ ಕಿಲೋ ಮೀಟರ್‌ ಓಡಿದ್ದೇನೆ. ನಾನು ಅಳುತ್ತಿದ್ದೆ. ಕಿರುಚುತ್ತಿದ್ದೆ. ಅವರು ಕಾರನ್ನು ಒಂದು ಕ್ಷಣ ನಿಲ್ಲಿಸಿದ್ದರೂ ಇಂತಹ ದುರ್ಘಟನೆ ನಡೆಯುತ್ತಿರಲಿಲ್ಲ. ನನ್ನ ಮಗಳು ತಾಯಿ ಎಲ್ಲಿ ತಾಯಿ ಎಲ್ಲಿ ಎಂದು ಕೇಳುತ್ತಿದ್ದಾಳೆ. ನಾನು ಅವಳನ್ನು ಎಲ್ಲಿಂದ ಕರೆ ತರಲಿ ಎಂದು ಪ್ರದೀಪ್‌ ಬಹಳ ಬೇಸರದಿಂದ ಹೇಳುತ್ತಾರೆ.

ಮುಂಬೈನ ವೊರ್ಲಿಯಲ್ಲಿ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah) ಕುಡಿದು ವಾಹನ ಚಲಾಸುವಾಗ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಆಕೆಯ ಪತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ 24 ವರ್ಷದ ಮಿಹಿರ್‌ ಶಾ ಪರಾರಿಯಾಗಿದ್ದ, ಬಳಿಕ ಪೊಲೀಸರು ಅವನ ತಂದೆಯನ್ನು ವಶಪಡಿಸಿಕೊಂಡಿದ್ದಾರೆ.

ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದಿದ್ದು, ಕೂಡಲೇ ಮಿಹಿರ್‌ ಶಾ ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಾಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಪ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದರು. ಮಿಹಿರ್‌ ಪೊಲೀಸರಿಗೆ ಹೆದರಿ ತನ್ನ ಪ್ರೇಯಸಿ ಮನೆಯಲ್ಲಿ ಅವಿತಿದ್ದ. ಪೊಲೀಸರು ಆತನನ್ನು ಅರೆಸ್ಟ್‌ ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಇನ್ನು ಘಟನೆಗೂ ಮುನ್ನ ಆರೋಪಿ ಮಿಹಿರ್‌ ಶಾಮತ್ತು ಆತನ ಸ್ನೇಹಿತರು ಬಾರ್‌ಗೆ ತೆರಳಿದ್ದು, ಬರೋಬ್ಬರಿ 18 ಸಾವಿರಕ್ಕೂ ಅಧಿಕ ಬಿಲ್‌ ಆಗಿತ್ತು ಎಂಬ ವಿಚಾರ ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ. ಮಿಹಿರ್‌ ಹಾಗೂ ಆತನ ಸೇಹಿತರು ಜೂಹೂನಲ್ಲಿರುವ ಗ್ಲೋಬಲ್‌ ತಾಪಸ್‌ ಬಾರ್‌ಗೆ ತೆರಳಿದ್ದರು ಎನ್ನಲಾಗಿದೆ.

Continue Reading

ಮಳೆ

Karnataka Weather : ಒಳನಾಡಿನಲ್ಲಿ ತಗ್ಗಿದ ಮಳೆ; ಕರಾವಳಿ, ಮಲೆನಾಡಲ್ಲಿ ಭಾರಿ ವರ್ಷಧಾರೆ

Karnataka Weather Forecast : ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ (Rain News) ಸಾಧಾರಣವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿರಲಿದೆ. ರಾಜ್ಯಾದ್ಯಂತ ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ (Yellow alert) ಮಾಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Karnataka Rain) ಅಬ್ಬರ ಕಡಿಮೆ ಆಗಿದೆ. ಇಂದು ಕರ್ನಾಟಕದ ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದ್ದರೆ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಹುಬ್ಬಳ್ಳಿ, ರಾಯಚೂರು, ಧಾರವಾಡ, ಚಿಕ್ಕೋಡಿ, ಗದಗ, ಕೊಪ್ಪಳದಲ್ಲಿ ಚದುರಿದಂತೆ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರಲ್ಲಿ ಮಧ್ಯಮ ಮಳೆಯಾದರೆ, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಲಘು ಮಳೆಯಾಗಲಿದೆ.

ಇದನ್ನೂ ಓದಿ: Kolar News : ಕೋಲಾರದ ಒಂಟಿ ಮನೆಯಲ್ಲಿ ವೇಶ್ಯಾವಾಟಿಕೆ; ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಳು ರೈತ ಸಂಘದ ಮುಖ್ಯಸ್ಥೆ!

ಬೆಂಗಳೂರಲ್ಲಿ ಮರೆಯಾಗುವ ಸೂರ್ಯ

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರಿ ಮಳೆಗೆ ಗುಡುಗು ಸಾಥ್‌ ನೀಡಲಿದ್ದು, ಗಾಳಿಯು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Karnataka Weather Forecast : ಕರ್ನಾಟಕ ಕರಾವಳಿ ಭಾಗದಲ್ಲಿ ಮಳೆಯು (Karnataka Rain Effect ) ಅಬ್ಬರಿಸುತ್ತಿದ್ದು, ನಾನಾ ಅವಾಂತರವೇ ಸೃಷ್ಟಿಯಾಗಿದೆ. ಮೊಟಕಾಲಿನಷ್ಟು ನಿಂತಿದ್ದ ನೀರಲ್ಲಿ ಗಾಡಿ ಚಲಾಯಿಸಲು ಹೋಗಿ ಸವಾರರು ಮುಗ್ಗರಿಸಿ ಬಿದ್ದಿದ್ದಾರೆ. ಮತ್ತೊಂದೆಡೆ ಕರ್ನಾಟಕ-ಗೋವಾ ಗಡಿ ಅನಮೋಡ್ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾದರೆ, ಶಿರಸಿ-ಕುಮಟಾ ರಸ್ತೆಯಲ್ಲಿ ಗುಡ್ಡ ಕುಸಿತ ಪ್ರಕರಣ ಮುಂದುವರಿದಿದೆ.

VISTARANEWS.COM


on

By

karnataka Rain Effect
Koo

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ (Karnataka weather Forecast) ಮುಂದುವರಿದಿದ್ದು, ಗೋವಾ ಲೋಂಡಾ ಬೆಳಗಾವಿ ಸಂಪರ್ಕಿಸುವ ರಸ್ತೆ (Karnataka Rain Effect) ಮುಳುಗಡೆಯಾಗಿದೆ. ಕಾಡಿನಿಂದ ಏಕಾಏಕಿ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. ಇದರಿಂದಾಗಿ ರಸ್ತೆ ಮೇಲೆ ಮೂರ್ನಾಲ್ಕು ಅಡಿ ನೀರು ನಿಂತಿದೆ. ಇನ್ನೂ ಅಪಾಯ ಲೆಕ್ಕಿಸದೇ ಕೆರೆಯಂತಾಗಿದ್ದ ರಸ್ತೆಯಲ್ಲಿ ಬೈಕ್ ಚಲಾಯಿಸಿಕೊಂಡು ಬಂದ ಸವಾರರು ನೀರಲ್ಲಿ ಬಿದ್ದಿದ್ದರು. ಬಳಿಕ ಬೈಕ್‌ನಿಂದ ಇಳಿದು ನೀರಿನಲ್ಲೇ ಬೈಕ್‌ ತಳ್ಳಿಕೊಂಡು ರಸ್ತೆ ದಾಟ್ಟಿದ್ದಾರೆ. ಇತ್ತ ತುಂಬಿದ್ದ ನೀರಲ್ಲಿ ಬಂದ ಟ್ರ್ಯಾಕ್ಟರ್ ಪಲ್ಟಿ ಹೊಡೆದಿದೆ. ಸದ್ಯ ನೀರು ಹೋಗುವಂತೆ ಜೆಸಿಬಿಯಿಂದ ಸ್ಥಳೀಯರಿಂದ ಕಾಮಗಾರಿ ನಡೆಯುತ್ತಿದೆ.

ಕರ್ನಾಟಕ-ಗೋವಾ ಗಡಿ ಅನಮೋಡ್ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿ

ಕರಾವಳಿಯ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಕರ್ನಾಟಕ-ಗೋವಾ ಗಡಿ ಅನಮೋಡ್ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ ಅನಮೋಡ್-ಗೋವಾ ರಸ್ತೆಯಲ್ಲಿ ನೀರು ನಿಂತ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.

ರಾಮನಗರದ ಅನಮೋಡ್ ರಸ್ತೆಯ ಎಲಿಫೆಂಟ್ ಬ್ರಿಡ್ಜ್ ಬಳಿ ನೀರು ತುಂಬಿ ನಿಂತಿದೆ. ಓವರ್ ಬ್ರಿಡ್ಜ್ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ಸಂಚಾರಕ್ಕೆ ತೊಡಕಾಗಿದೆ. ನೀರು ತುಂಬಿದ್ದ ರಸ್ತೆಯಲ್ಲಿ ಕಂಟೇನರ್ ಪಲ್ಟಿ ಹೊಡೆದ ಪರಿಣಾಮ ಬೆಳಗಾವಿ-ರಾಮನಗರ-ಗೋವಾ ಮಾರ್ಗದ ಸಂಚಾರ ಅಸ್ತವ್ಯಸ್ತವಾಗಿದೆ.

ನಿನ್ನೆ ಬುಧವಾರ ಸಂಜೆಯಿಂದಲೂ ರಸ್ತೆಯಲ್ಲೇ ಲಾರಿ, ಬಸ್‌ಗಳು ಸಾಲುಗಟ್ಟಿ ನಿಂತಿವೆ. ಇತ್ತ ಪ್ರಯಾಣಿಕರು ರಾತ್ರಿಯಿಡೀ ಬಸ್‌ನಲ್ಲೇ ಕಾಲಕಳೆದಿದ್ದಾರೆ. ಸಾಲುಗಟ್ಟಿ ವಾಹನಗಳು ನಿಂತ ಪರಿಣಾಮ ವಾಪಸ್ ಹೋಗಲಾಗದೇ ಪರದಾಟ ಅನುಭವಿಸಿದರು. ಸ್ಥಳೀಯಾಡಳಿತ ಜೆಸಿಬಿ ಬಳಸಿ ನೀರು ಹರಿದುಹೋಗಲು ವ್ಯವಸ್ಥೆ ಮಾಡುತ್ತಿದ್ದಾರೆ. ರಾಮನಗರ-ಅನಮೋಡ್-ಗೋವಾ ರಸ್ತೆಯಲ್ಲಿ ವಾಹನ ಸವಾರರ ಪರದಾಟ ಹೇಳತೀರದಾಗಿದೆ.

ಇದನ್ನೂ ಓದಿ: UGCET 2024: ಅರ್ಹತಾ ಅಂಕ ಶೇ 45ಕ್ಕೆ ಇಳಿಕೆ ; ಆರ್ಕಿಟೆಕ್ಚರ್ ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಜು. 13ರವರೆಗೆ ಅವಕಾಶ

ಶಿರಸಿ-ಕುಮಟಾ ರಸ್ತೆಯಲ್ಲಿ ಗುಡ್ಡ ಕುಸಿತ

ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766EEಯ ಕತಗಾಲ ಗ್ರಾಮದ ಬಳಿ ಗುಡ್ಡ ಕುಸಿದಿದೆ. ಭಾರತ್‌ಮಾಲಾ ಯೋಜನೆಯಡಿ ನಡೆಯುತ್ತಿರುವ ಶಿರಸಿ ಕುಮಟಾ ಹೆದ್ದಾರಿ ಅಗಲೀಕರಣಕ್ಕಾಗಿ ಮಣ್ಣು ಕೊರೆಯಲಾಗಿದೆ. ಇದರಿಂದಲೇ ಗುಡ್ಡ ಕುಸಿದಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಮಳೆಯಿಂದಾಗಿ ಮಣ್ಣು ಸಡಿಲಗೊಂಡು ಗುಡ್ಡ ಕುಸಿಯುತ್ತಲೇ ಇದೆ. ರಸ್ತೆಗೆ ಮಣ್ಣು ಬಿದ್ದ ಪರಿಣಾಮ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ.

ಮುಳುಗಡೆಯಾಗಿದ್ದ ಸೇತುವೆಗಳು ಸಂಚಾರಕ್ಕೆ ಮುಕ್ತ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆ ಪ್ರಮಾಣ ತಗ್ಗಿದೆ. ಕೃಷ್ಣಾ, ದೂದಗಂಗಾ ಹಾಗೂ ವೇದಗಂಗಾ ನದಿ ನೀರಿನ ಒಳ ಹರಿವಿನಲ್ಲಿ ಗಣನೀಯ ಇಳಿಕೆ ಆಗಿದೆ. ಒಂದೆ ದಿನದಲ್ಲಿ 20 ಸಾವಿರ ಕ್ಯೂಸೇಕ್ ಒಳ ಹರಿವಿನಲ್ಲಿ ಇಳಿಕೆ ಆಗಿದೆ. ಇನ್ನೂ ಚಿಕ್ಕೋಡಿ ವ್ಯಾಪ್ತಿಯ ಮುಳುಗಡೆಯಾಗಿದ್ದ 3 ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ನಿಪ್ಪಾಣಿ ತಾಲೂಕಿನ ಕಾರದಗಾ-ಭೋಜ ಭೋಜವಾಡಿ-ಕುಣ್ಣೂರ ಸೇತುವೆಗಳು ಹಾಗೂ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ ಸೇತುವೆ ಸಂಚಾರಕ್ಕೆ ಮುಕ್ತವಾಗಿವೆ. ಇನ್ನು ಒಳ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗುವ ಸಾದ್ಯತೆ ಇದೆ.

ಇತ್ತ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಭಾಗದಲ್ಲಿ ನಿರಂತರ ಮಳೆಯಿಂದಾಗಿ ಕೃಷ್ಣಾ ನದಿಗೆ ಅಡ್ಡವಾಗಿ ಕಟ್ಟಲಾಗಿರುವ ಆಲಮಟ್ಟಿ ಜಲಾಶಯಕ್ಕೆ ದಿನೆದಿನೇ ಒಳಹರಿವು ಹೆಚ್ಚಾಗುತ್ತಿದೆ. ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ನದಿಪಾತ್ರದ ಜನರಿಗೆ ಸುರಕ್ಷಿತವಾಗಿರಲು ಕೆಬಿಜೆಎನ್ಎಲ್ ಅಧಿಕಾರಿಗಳು ಮುನ್ಸೂಚನೆ ಜತೆಗೆ ಎಚ್ಚರಿಕೆಯನ್ನು ನೀಡಿದೆ. 3,500 ಕ್ಯೂಸೆಕ್ ನೀರು ಹೊರಹರಿವಿನ ಸೂಚನೆ ನೀಡಿದ್ದು, ಕ್ರಮೇಣ ಅದನ್ನು 7,500 ಕ್ಯೂಸೆಕ್‌ಗೆ ಹೆಚ್ಚಿಸಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರ‌ ಕನ್ನಡಕ್ಕೆ ಭಾರಿ ಮಳೆ ಮುನ್ಸೂಚನೆ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast: ಮಳೆಯಾಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಉತ್ತರ ಕನ್ನಡದಲ್ಲಿ ಮಳೆಯು (rain news) ಅಬ್ಬರಿಸುತ್ತಿದ್ದು, ಬುಧವಾರವೂ ವ್ಯಾಪಕವಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜತೆಗೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕಳೆದೊಂದು ವಾರದಿಂದ ಅಬ್ಬರಿಸುತ್ತಿದ್ದ ವರುಣ ಕೊಂಚ ತಣ್ಣಗಾಗಿದ್ದಾನೆ. ಈ ದಿನ ಕರ್ನಾಟಕದ ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ (Heavy rain News) ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಸೇರಿ ವಿಜಯನಗರದಲ್ಲಿ ಕಡಿಮೆ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಬೀದರ್ ಸೇರಿ ರಾಯಚೂರು, ಧಾರವಾಡ ಮತ್ತು ಹಾವೇರಿ, ಗದಗ, ಕೊಪ್ಪಳದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಆದರೆ ಯಾದಗಿರಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಕರಾವಳಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲೂ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಉತ್ತರಕನ್ನಡದಲ್ಲಿ ಅಬ್ಬರಿಸಲಿದೆ ಮಳೆ

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಿಲಿದೆ. ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಗದಗ ಮತ್ತು ಹಾಸನ ಜಿಲ್ಲೆಗಳಲ್ಲೂ ವಿಪರೀತ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರು/ಕಾರವಾರ: ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯೊಂದಿಗೆ (Karnataka Rain) ಮೊನ್ನೆ ರಸ್ತೆ ಮಧ್ಯೆ ಡ್ಯಾನ್ಸ್, ನಿನ್ನೆ ಪ್ರವಾಸಿ ತಾಣದಲ್ಲಿ ಎಣ್ಣೆ ಪಾರ್ಟಿ ಮಾಡಿ ಪ್ರವಾಸಿಗರು ಹುಚ್ಚಾಟ ತೋರಿದ್ದರು. ಮೂಡಿಗೆರೆ ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ದೇವರಮನೆಗುಡ್ಡದಲ್ಲಿ ಪೊಲೀಸರು ಯುವಕರಿಗೆ ಚಳಿ ಬಿಡಿಸಿದ್ದಾರೆ.

ಹೊಯ್ಸಳರ ಕಾಲದ ಕಾಲಭೈರವೇಶ್ವರನ ಸನ್ನಿದಿ ಆಗಿರುವ ದೇವರಮನೆ ಗುಡ್ಡದಲ್ಲಿ 2 ದಿನದ ಹಿಂದೆ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿ ಮದ್ಯ ಸೇವಿಸಿ ಯುವಕರು ಡ್ಯಾನ್ಸ್ ಮಾಡಿದ್ದರು. ಜತೆಗೆ ದೇವರಮನೆಗುಡ್ಡದ ಎಲ್ಲೆಂದರಲ್ಲಿ ಕಾರು ನಿಲ್ಲಿಸಿಕೊಂಡು ಲೈಟ್ ಮ್ಯೂಸಿಕ್ ಹಾಕಿಕೊಂಡು ಎಣ್ಣೆ ಪಾರ್ಟಿ ಮಾಡಿದ್ದರು.

karnataka Rain

ಬಣಕಲ್ ಪಿಎಸ್ಐ ರೇಣುಕಾ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಮದ್ಯ ಸೇವಿಸಿ, ಧೂಮಪಾನ ಮಾಡಿದ್ದಕ್ಕೆ ಕೆಪಿ ಆಕ್ಟ್‌ನಲ್ಲಿ 20 ಜನರ ಮೇಲೆ ಕೇಸ್ ದಾಖಲಾಗಿದೆ. ಕೋಟ್ಪಾ ಕಾಯ್ದೆಯಡಿ 9 ಜನರ ಮೇಲೆ ಕೇಸ್ ಹಾಕಲಾಗಿದೆ.

ಸಂಪರ್ಕ ಸೇತುವೆ ಮುಳುಗಡೆ

ಉತ್ತರಕನ್ನಡ ಜಿಲ್ಲೆಯ ಕಾರವಾರದ ಗೋಯರ್ ಗ್ರಾಮದಲ್ಲಿ ಭಾರೀ ಮಳೆಗೆ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಮುಳುಗಡೆಯಾಗಿದ್ದು, ಗ್ರಾಮಸ್ಥರು ಪರದಾಡಿದ್ದರು. ಕಾಡಿನ ಹಾದಿಯಲ್ಲೇ ಸಾಗಬೇಕಿರುವ ಗ್ರಾಮದ ರಸ್ತೆ ಇದಾಗಿದ್ದು, ಬಾರಗದ್ದೆ, ಗೋಯರ್ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಜಲಾವೃತಗೊಂಡಿದೆ.

karnataka Rain

ಸುಮಾರು 25ಕ್ಕೂ ಅಧಿಕ ಮನೆಗಳಿರುವ ಗೋಯರ್ ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಮೇಲೆ‌ ಹಳ್ಳದ ನೀರು ಹರಿಯುತ್ತಿದೆ. ನೀರು ತುಂಬಿ ನಿಂತ ರಸ್ತೆಯಲ್ಲೇ ಹರಸಾಹಸಪಟ್ಟು ಗ್ರಾಮಸ್ಥರು ಓಡಾಡುವಂತಾಗಿದೆ. ಸೂಕ್ತ ರಸ್ತೆ ವ್ಯವಸ್ಥೆ ಇಲ್ಲದೇ ಇರುವುದಕ್ಕೆ ಹಿಡಿಶಾಪ ಹಾಕಿದ್ದಾರೆ.

ಇತ್ತ ಹೊನ್ನಾವರ ತಾಲ್ಲೂಕಿನ 12 ಕಾಳಜಿ ಕೇಂದ್ರಗಳಲ್ಲಿ 437 ಮಂದಿಗೆ ಆಶ್ರಯ ನೀಡಲಾಗಿದೆ. ಭಾರೀ ಮಳೆಯಿಂದಾಗಿ ಜಲಾವೃತಗೊಂಡಿದ್ದ ಗುದ್ನಕಟ್ಟು ಗ್ರಾಮದಿಂದ 60 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎನ್‌ಡಿಆರ್‌ಎಫ್ ತಂಡದಿಂದ ನೆರೆ ಅಪಾಯದಲ್ಲಿದ್ದವರ ರಕ್ಷಣೆ ಮಾಡಲಾಗಿದೆ. ಮಳೆಯ ಅಬ್ಬರಕ್ಕೆ ಇದುವರೆಗೆ ನೂರಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಒಂದು ಸಾವು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
ಬೆಂಗಳೂರು13 mins ago

KEA : ಜು.13,14ಕ್ಕೆ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ; ಅಕ್ರಮ ತಡೆಯಲು ಮೊದಲ ಬಾರಿಗೆ ವೆಬ್ ಕಾಸ್ಟಿಂಗ್

Prajwal Revanna Case
ಕರ್ನಾಟಕ23 mins ago

Prajwal Revanna Case: ರೇವಣ್ಣ ಜಾಮೀನು ರದ್ದು ಕೋರಿದ್ದ ಎಸ್‌ಐಟಿ ಅರ್ಜಿ ವಿಚಾರಣೆ 3 ವಾರ ಮುಂದೂಡಿಕೆ

Saina Nehwal
ಕ್ರೀಡೆ25 mins ago

Saina Nehwal: ಬ್ಯಾಡ್ಮಿಂಟನ್ ಬಿಟ್ಟು ಟೆನಿಸ್‌ ಆಡಿದ್ದರೆ ಹೆಚ್ಚಿನ ಯಶಸ್ಸು ಸಿಗುತ್ತಿತ್ತು ಎಂದ ಸೈನಾ ನೆಹ್ವಾಲ್‌

Kangana Ranaut
ದೇಶ37 mins ago

Kangana Ranaut: ನನ್ನನ್ನು ಭೇಟಿಯಾಗಲು ಬರುವವರು ಆಧಾರ್‌ ಕಾರ್ಡ್‌ ತನ್ನಿ ಎಂದ ಕಂಗನಾ ರಣಾವತ್;‌ ಏನ್‌ ದೌಲತ್ತು ನೋಡಿ!

Shiva Rajkumar Starrer 45 Movie Poster Released By Rishab Shetty
ಸ್ಯಾಂಡಲ್ ವುಡ್37 mins ago

Shiva Rajkumar: ಶಿವರಾಜ್‌ಕುಮಾರ್‌ ಅಭಿನಯದ ʻ45ʼ ಸಿನಿಮಾದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿದ ರಿಷಬ್ ಶೆಟ್ಟಿ!

Anant Radhika Wedding
ವಾಣಿಜ್ಯ40 mins ago

Anant Radhika Wedding: ನಿಶ್ಚಿತಾರ್ಥದಿಂದ ಮದುವೆಯವರೆಗೆ; ಹೀಗಿತ್ತು ಅಂಬಾನಿ ಮಗನ ಮದುವೆಯ ಗತ್ತು!

Fraud Case CCB police arrest fraudster
ಕರ್ನಾಟಕ41 mins ago

Fraud Case : ‌ಸಿಸಿಬಿ ಬಲೆಗೆ ಬಿದ್ದ ಖತರ್ನಾಕ್‌ ನಯ ವಂಚಕ; ಡಿಸಿ, ಜಡ್ಜ್‌ ಹೆಸರು ಬಳಸಿ ಲಕ್ಷ ಲಕ್ಷ ಲೂಟಿ

Akshay Kumar tests positive for COVID-19 will miss Anant Ambani wedding
ಬಾಲಿವುಡ್60 mins ago

Akshay Kumar:  ಅಕ್ಷಯ್ ಕುಮಾರ್‌ಗೆ ಕೋವಿಡ್‌ ಪಾಸಿಟಿವ್; ಅನಂತ್ ಅಂಬಾನಿ ಮದುವೆಗೆ ಗೈರು!

Anant Radhika Wedding
ವಾಣಿಜ್ಯ1 hour ago

Anant Radhika Wedding: ಮಗನ ಮದುವೆ ಸಂದರ್ಭದಲ್ಲಿ ಕಾಶಿಗೆ ಗೌರವ; ನೀತಾ ಅಂಬಾನಿಯ ಈ ವಿಡಿಯೊ ನೋಡಿ

Arvind Kejriwal
ದೇಶ1 hour ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಶಾಕ್‌! ಜು.25ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effect
ಮಳೆ23 hours ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ3 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ3 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ3 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ4 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ4 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ4 days ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Murder case
ಬೆಂಗಳೂರು4 days ago

Murder case : ಕುಡಿದ ಅಮಲಿನಲ್ಲಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

karnataka weather Forecast
ಮಳೆ5 days ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

ಟ್ರೆಂಡಿಂಗ್‌