Site icon Vistara News

Shivamogga News: ಸೊರಬದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಚಾಲನೆ

Minister Madhu Bangarappa inauguration by Beneficiaries convention of guarantee schemes in Soraba

ಸೊರಬ: ಸರ್ಕಾರದ ಗ್ಯಾರಂಟಿ ಯೋಜನೆಗಳು (Guarantee Schemes) ಬಡ ಜನರನ್ನು, ಮಹಿಳೆಯರನ್ನು, ನಿರುದ್ಯೋಗಿಗಳಿಗೆ ಆರ್ಥಿಕ ಶಕ್ತಿ ನೀಡುವ ಸದುದ್ದೇಶದಿಂದ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು (Shivamogga News) ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಬಡ ಜನರ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಿರುವ ಯೋಜನೆಗಳು ಸಂಪೂರ್ಣವಾಗಿ ಐದು ವರ್ಷಗಳವರೆಗೆ ಜಾರಿಯಲ್ಲಿರುತ್ತದೆ.

ವಿರೋಧ ಪಕ್ಷಗಳು ನಮ್ಮ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣೆ ನಂತರ ನಿಲ್ಲಿಸಲಾಗುತ್ತದೆ ಎಂದು ಟೀಕೆಗಳನ್ನು ಮಾಡುತ್ತಿದ್ದಾರೆ. ಅಂತಹ ಊಹಾಪೋಹಗಳಿಗೆ ಜನರು ಕಿವಿಗೊಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather : ಇನ್ನೆರಡು ದಿನ ಬಿಸಿಲು ರಣ ರಣ; ಜನ ಹೈರಾಣ!

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ ಕಟ್ಟಕಡೆಯ ಫಲಾನುಭವಿಗಳಿಗೆ ತಲುಪಿಸಬೇಕು ಎಂಬ ಉದ್ದೇಶದಿಂದ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: Land Registration : ಇನ್ನು ಮನೆಯಿಂದಲೇ ರಿಜಿಸ್ಟ್ರೇಷನ್‌ ಅವಕಾಶ, ನೋಂದಣಿ ಕಚೇರಿಗೆ ಹೋಗಬೇಕಾಗಿಯೇ ಇಲ್ಲ

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಡಾ. ಅರ್.ಯತೀಶ್, ತಹಸೀಲ್ದಾರ್ ಹುಸೇನ್ ಸರ್‌ಕವಸ್, ಇಓ ಡಾ.ಪ್ರದೀಪ್ ಕುಮಾರ್, ಕೃಷಿ ನಿರ್ದೇಶಕ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಟಿ.ಬಾಲಚಂದ್ರ, ಬಿಇಓ ಸತ್ಯನಾರಾಯಣ, ಸದಾಗೌಡ, ಗಣಪತಿ ಹುಲ್ತಿಕೊಪ್ಪ, ಕೆ.ಪಿ.ರುದ್ರಗೌಡ, ಸುಜಾತ ಜೋತಾಡಿ, ವಿಶಾಲಕ್ಷಮ್ಮ, ತಬಲಿ ಬಂಗಾರಪ್ಪ, ಅನ್ಸರ್ ಅಹ್ಮದ್, ಪ್ರೇಮಾ, ಶಿವಲಿಂಗೇಗೌಡ, ಹಿರಿಯಣ್ಣ, ರಾಜಶೇಖರ್, ಪುರುಷೋತ್ತಮ್, ನಾಗರಾಜ್ ಚಿಕ್ಕಸವಿ, ತಾರಾ ಶಿವಾನಂದಪ್ಪ, ಎಂ ಡಿ ಶೇಖರ್, ಸುನೀಲ್ ಗೌಡ, ಜಗದೀಶ್ ಕುಪ್ಪೆ, ನಾಗರಾಜ್ , ರಾಜೇಶ್ವರಿ, ಜಯಶೀಲಗೌಡ, ನೆಹರು ಕೊಡಕಣಿ, ಪ್ರಸನ್ನ ಸೇರಿದಂತೆ ಇತರರು ಇದ್ದರು.

Exit mobile version