Shivamogga News: 200 ಕೋಟಿ ರೂ. ಅನುದಾನದಿಂದ ಶಿವಮೊಗ್ಗದ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ: ಬಿ.ವೈ.ರಾಘವೇಂದ್ರ - Vistara News

ಶಿವಮೊಗ್ಗ

Shivamogga News: 200 ಕೋಟಿ ರೂ. ಅನುದಾನದಿಂದ ಶಿವಮೊಗ್ಗದ ಗ್ರಾಮೀಣ ಪ್ರದೇಶದ ರಸ್ತೆಗಳ ಅಭಿವೃದ್ಧಿ: ಬಿ.ವೈ.ರಾಘವೇಂದ್ರ

Shivamogga News: ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಹೆದ್ದಾರಿಪುರ ಕಗ್ಗಲಿಜಡ್ಡು ಕುಮದ್ವತಿ ಸಂಪರ್ಕದ ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದ ಬಿ.ವೈ.ರಾಘವೇಂದ್ರ ಶಂಕುಸ್ಥಾಪನೆ ನೆರವೇರಿಸಿದರು.

VISTARANEWS.COM


on

Bhumi Pooja for the Bridge construction by MP B Y Raghavendra at shivamogga
ಹೆದ್ದಾರಿಪುರ ಕಗ್ಗಲಿಜಡ್ಡು ಕುಮದ್ವತಿ ಸಂಪರ್ಕದ ಸೇತುವೆ ನಿರ್ಮಾಣ ಕಾಮಗಾರಿಗೆ ಸಂಸದ ಬಿ.ವೈ.ರಾಘವೇಂದ್ರ ಶಂಕುಸ್ಥಾಪನೆ ನೆರವೇರಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ (Roads) ಅಭಿವೃದ್ಧಿಗಾಗಿ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ (Central Government) ಪಿಎಂಜಿಎಸ್‌ವೈ ಯೋಜನೆಯ ಮೂಲಕ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ ಅನುದಾನವನ್ನು ತರುವುದರ ಮೂಲಕ ಗ್ರಾಮೀಣ ಪ್ರದೇಶದ (Rural Area) ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆದ್ದಾರಿಪುರ ಕಗ್ಗಲಿಜಡ್ಡು ಕುಮದ್ವತಿ ಸಂಪರ್ಕದ ಸೇತುವೆ ನಿರ್ಮಾಣಕ್ಕೆ ಪಿಎಂಜಿಎಸ್‌ವೈ ಯೋಜನೆಯಡಿ 3.48 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಅವರು ಮಾತನಾಡಿದರು.

ಜಲಜೀವನ ಯೋಜನೆಯಡಿ ಪ್ರತಿಮನೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರ ಜಿಲ್ಲೆಯ 5 ಲಕ್ಷ ಮನೆಗಳಲ್ಲಿ ಈಗಾಗಲೇ 2 ಲಕ್ಷ ಮನೆಗಳಿಗೆ ಈ ಯೋಜನೆಯಡಿ ಶುದ್ದ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ. ಆಯುಷ್ಮಾನ್‌ ಕಾರ್ಡ್‌ನಿಂದಾಗಿ ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ 5 ಲಕ್ಷ ರೂ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ 2 ಲಕ್ಷ ರೂ ಈ ಯೋಜನೆಯನ್ವಯ ಜಿಲ್ಲೆಯ 174 ಕೋಟಿ ರೂ ವೆಚ್ಚದಲ್ಲಿ ಬಡಕುಟುಂಬದವರು ಆರೋಗ್ಯದ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ರೈತರ ನೆರವಿಗೆ ಧಾವಿಸಿದ ಕೇಂದ್ರ! ಹಿಂಗಾರು ಹಂಗಾಮಿನಲ್ಲಿ ರಸಗೊಬ್ಬರಗಳಿಗೆ 22,303 ಕೋಟಿ ರೂ. ಸಬ್ಸಿಡಿ!

ಹೊಸನಗರ ತಾಲೂಕಿಗೆ ಈಗಾಗಲೇ 44 ಬಿಎಸ್‌ಎನ್ಎಲ್ ಟವರ್‌ಗಳನ್ನು ಮಂಜೂರು ಮಾಡಿಸಲಾಗಿದ್ದು ಸದ್ಯದಲ್ಲಿಯೇ ಟವರ್ ನಿರ್ಮಾಣ ಕಾಮಗಾರಿ ಅರಂಭವಾಗಲಿದೆ ಎಂದು ಹೇಳಿದರು.

ಸರ್ಕಾರದ ಗ್ಯಾರಂಟಿ ಯೋಜನೆಯ ಫಲ ಪಡೆಯಲು ಅಭಿವೃದ್ಧಿ ತ್ಯಾಗ

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ರಾಜ್ಯದ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯ ಫಲ ಪಡೆಯಲು ಅಭಿವೃದ್ಧಿ ತ್ಯಾಗ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ, ಸಕಾಲದಲ್ಲಿ ಮಳೆಬಾರದೇ ಹಾಕಿದ ಬೆಳೆಗಳು ಒಣಗುತ್ತಿದ್ದು, ಮಲೆನಾಡು ಸಂಪೂರ್ಣವಾಗಿ ಬರಗಾಲ ಪ್ರದೇಶವಾಗಿದೆ,

ಇನ್ನು ನವಂಬರ್-ಡಿಸೆಂಬರ್ ಅಂತ್ಯದಲ್ಲಿಯೇ ಕುಡಿಯುವ ನೀರಿನ ಅಭಾವ ಎದುರಿಸುವಂತಾಗಿದ್ದು, ವಿದ್ಯುತ್ ಸಮಸ್ಯೆ ಸಹ ಕಾಣುವಂತಾಗಿದೆ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ನೀರಾವರಿ ಸಚಿವರಾಗಿದ್ದು ಅವರೇ ಅಭಿವೃದ್ದಿಗೆ ಹಣವಿಲ್ಲ ಎನ್ನುತ್ತಿದ್ದಾರೆ ಹಾಗಾದರೆ ಮುಂದೆ ಏನು ಎಂಬ ಚಿಂತೆ ಕಾಡುವಂತಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Tiger Nail : ಹುಲಿ ಉಗುರು ಪತ್ತೆಯಾದರೆ ಏನು ಮಾಡೋಣ? ಶಿಫಾರಸು ಮಾಡಲು ಸಮಿತಿ ರಚನೆ

ಈ ವೇಳೆ ಹೆದ್ದಾರಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿನಂತಿ ರಾಘವೇಂದ್ರ, ಉಪಾಧ್ಯಕ್ಷೆ ವನಿತಾ ಗಂಗಾಧರ, ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರತ್ನ, ಸುಮಿತ್ರಮ್ಮ, ವಿಶುಕುಮಾರ್, ಬಿಜೆಪಿ ತಾಲೂಕು ಅಧ್ಯಕ್ಷ ಗಣಪತಿ ಬೆಳಗೋಡು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎಂ.ಬಿ.ಮಂಜುನಾಥ್, ನಾಗೇದ್ರ ಕಲ್ಲೂರು, ಲಿಂಗಪ್ಪ ಕಗ್ಗಲಿ ಸೇರಿದಂತೆ ಇನ್ನಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Karnataka Weather Forecast : ಕರಾವಳಿ ಭಾಗದಲ್ಲಿ ಮಳೆ ಅಬ್ಬರ (Rain News) ಮುಂದುವರಿದಿದೆ. ವೀಕೆಂಡ್‌ನಲ್ಲೂ ವ್ಯಾಪಕ ಮಳೆಯಾಗುವ ಎಚ್ಚರಿಕೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ (Yellow alert) ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯೊಂದಿಗೆ (Rain News) ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯೊಂದಿಗೆ ಕೆಲವೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಒಳನಾಡಿನ ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಸುತ್ತಮುತ್ತ ಹಗುರದಿಂದ ಕೂಡಿದ ಮಳೆಯಾದರೆ, ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ಬೆಂಗಳೂರಲ್ಲಿ ತುಂತುರು ಮಳೆ

ಶನಿವಾರ ಬೆಂಗಳೂರು ಸುತ್ತಮುತ್ತ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜುಲೈ 2 ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

Rain News : ಮುಲ್ಕಿ, ಉಡುಪಿ, ಭಾಗಮಂಡಲದಲ್ಲಿ ಭಾರಿ ಮಳೆಯಾಗಿದೆ. ವಾರಾಂತ್ಯದಲ್ಲೂ ಭಾರಿ ವರ್ಷಧಾರೆಯ (Heavy rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಮ್ಮೆ ಬಾರಿ ಜೋರಾಗಿ ಮಳೆ (Heavy Rain) ಬಂದರೂ ಜನರಿಗೆ ಕಷ್ಟ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಈ ನಡುವೆ ಎಂದಿಗಿಂತ ತುಸು ಜೋರಾಗಿ ಹಾಗೂ ಹೆಚ್ಚಾಗಿಯೇ ಮಳೆಯಾಗುತ್ತಿರುವುದು (Rain News) ಜನರನ್ನು ಹೈರಣಾಗಿಸಿದೆ. ಸದ್ಯ ಇನ್ನೊಂದು ವಾರಕ್ಕೂ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ವಾರಾಂತ್ಯದಲ್ಲಿ ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ನಿರಂತರ ಗಾಳಿ ಬೀಸಲಿದ್ದು ಗಂಟೆಗೆ 40-50 ಕಿ.ಮೀನಲ್ಲಿ ವೇಗ ಇರಲಿದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ-ಮಲೆನಾಡಿನಲ್ಲಿ ವಿಪರೀತ ಮಳೆ

ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇನ್ನೂ ಅತಿ ಹೆಚ್ಚು ಮಳೆಯು ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 30 ಸೆಂ.ಮೀ, ಉಡುಪಿ ಹಾಗೂ ಕೊಡಗಿನ ಭಾಗಮಂಡಲದಲ್ಲಿ ತಲಾ 21 ಸೆಂ.ಮೀ ಮಳೆಯಾಗಿದೆ.

ಮಂಗಳೂರು ವಿಮಾನ ನಿಲ್ದಾಣ , ಮಣಿ , ಕಾರ್ಕಳ, ಆಗುಂಬೆಯಲ್ಲಿ ತಲಾ 17 ಸೆಂ.ಮೀ, ಪಣಂಬೂರು , ಬೆಳ್ತಂಗಡಿ, ಹೊನ್ನಾವರ, ಧರ್ಮಸ್ಥಳದಲ್ಲಿ ತಲಾ 15 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಕೋಟ, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ತಲಾ 14 ಸೆಂ.ಮೀ, ನಾಪೋಕ್ಲು13, ಪೊನ್ನಂಪೇಟೆ 12 ಸೆಂ.ಮೀ ಮಳೆಯಾಗಿದೆ. ಪುತ್ತೂರು , ಕೊಲ್ಲೂರು, ಸುಳ್ಯ, ಮೂರ್ನಾಡು, ವಿರಾಜಪೇಟೆಯಲ್ಲಿ 11 ಸೆಂ.ಮೀ, ಮಂಗಳೂರು 10 ಸೆಂ.ಮೀ, ಮಂಕಿ, ಕಳಸ, ಶೃಂಗೇರಿಯಲ್ಲಿ 9 ಸೆಂ.ಮೀ, ಕುಂದಾಪುರ, ಕುಮಟಾ, ಅಂಕೋಲಾದಲ್ಲಿ 8 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಗೋಕರ್ಣ, ಕೊಪ್ಪ6 ಸೆಂ.ಮೀ, ಸಿದ್ದಾಪುರ , ಜಯಪುರ 5 ಸೆಂ.ಮೀ, ಕದ್ರಾ , ತಾಳಗುಪ್ಪ , ಬಂಡೀಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ. ಲೋಂಡಾ, ಕುಶಾಲನಗರ, ಸೋಮವಾರಪೇಟೆ, ಹಾರಂಗಿ, ಹುಣಸೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ. ಜೋಯಿಡಾ, ಯಲ್ಲಾಪುರ, ಬಾಳೆಹೊನ್ನೂರು, ಹುಂಚದಕಟ್ಟೆ , ಸರಗೂರು 2 ಸೆಂ.ಮೀ, ಮುಂಡಗೋಡ , ಕಾರವಾರ , ಬನವಾಸಿ, ಹಳಿಯಾಳ, ಕಿರವತ್ತಿ , ತ್ಯಾಗರ್ತಿ, ಹಾಸನ , ಕೃಷ್ಣರಾಜಸಾಗರ, ಆನವಟ್ಟಿ, ಎನ್ ಆರ್ ಪುರ, ಗುಂಡ್ಲುಪೇಟೆ, ನಂಜನಗೂಡು, ಕೆ ಆರ್ ನಗರದಲ್ಲಿ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

Haveri Accident: ಅಂಧತ್ವಕ್ಕೆ ಸೆಡ್ಡು ಹೊಡೆದು ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದ ಮಾನಸ, ಭಾರತ ತಂಡದ ಅಂಧರ ಪುಟ್ ಬಾಲ್ ತಂಡ ಕ್ಯಾಪ್ಟನ್ ಆಗಿದ್ದರು. ಅವರು ಬ್ಯಾಡಗಿ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

Haveri Accident
Koo

ಶಿವಮೊಗ್ಗ: ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ನಡೆದ ಭೀಕರ ಅಪಘಾತದಲ್ಲಿ (Haveri Accident) ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ 13 ಮೃತಪಟ್ಟಿದ್ದು, ಇದರಿಂದ ಗ್ರಾಮದಲ್ಲಿ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮೃತರ ಪೈಕಿ 24 ವರ್ಷದ ಯುವತಿ ಮಾನಸ ಕೂಡ ಇದ್ದು, ಇವರು ಭಾರತ ಅಂಧರ ಪುಟ್ ಬಾಲ್ ತಂಡ ಕ್ಯಾಪ್ಟನ್ ಆಗಿದ್ದರು.

ಅಂಧತ್ವಕ್ಕೆ ಸೆಡ್ಡು ಹೊಡೆದು ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದ ಮಾನಸ, ಭಾರತ ತಂಡದ ಅಂಧರ ಪುಟ್ ಬಾಲ್ ತಂಡ ಕ್ಯಾಪ್ಟನ್ ಆಗಿದ್ದರು. ಐಎಎಸ್ ಕನಸು ಕಂಡಿದ್ದ ಮಾನಸ ಬೆಂಗಳೂರಿನಲ್ಲಿ ಓದುತ್ತಿದ್ದರು. ದೇವಸ್ಥಾನ ತೆರಳಲು ಭಾನುವಾರ ಗ್ರಾಮಕ್ಕೆ ಆಗಮಿಸಿದ್ದಳು. ಕುಟುಂಬಸ್ಥರೊಂದಿಗೆ ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಕಾಣದೆ ಟಿಟಿ ಡಿಕ್ಕಿಯಾಗಿದ್ದರಿಂದ ಮಾನಸ ಸೇರಿ 13 ಮಂದಿ ಮೃತಪಟ್ಟಿದ್ದರು. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದ 17 ಜನ ಪ್ರಯಾಣ ಟಿಟಿ ವಾಹನದಲ್ಲಿ ಮಾಡುತ್ತಿದ್ದರು. ಈ ಪೈಕಿ 13 ಜನರ ಸಾವಿಗೀಡಾಗಿದ್ದು, 4 ಜನ ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾಬಾಯಿ (57), ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸಹ ಮೃತಪಟ್ಟಿದ್ದಾರೆ. ಗಾಯಾಳುಗಳಾದ ಅರ್ಪಿತಾ, ಅರುಣಾ, ಅನ್ನಪೂರ್ಣ ಆಸ್ಪತ್ರೆಯಲ್ಲಿದ್ದಾರೆ.

ಇದನ್ನೂ ಓದಿ | Viral Video: ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Haveri Accident) ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಶವಗಳನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಸಂಬಂಧಿಕರು, ಗ್ರಾಮಸ್ಥರು ಆಗ್ರಹಿಸಿದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

ಶುಕ್ರವಾರ ಮುಂಜಾನೆ ಭೀಕರ ಅಪಘಾತ ನಡೆದು 13 ಮಂದಿ ಸಾವನ್ನಪ್ಪಿದ್ದರೂ ಜಿಲ್ಲಾಸ್ಪತ್ರೆಗೆ ಯಾರೂ ಜನಪ್ರತಿನಿಧಿಗಳು ಬಾರದ ಹಿನ್ನೆಲೆಯಲ್ಲಿ ಸಂಬಂಧಿಕರು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಸರ್ಕಾರದಿಂದ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಪರಿಹಾರ ನೀಡದಿದ್ದರೆ ಶವಾಗಾರದಿಂದ ಶವ ತೆಗೆದುಕೊಂಡು ಹೋಗಲ್ಲ ಎಂದು ಕಿಡಿಕಾರಿ, ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಮೊದಲಿಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪವನ್ನಷ್ಟೇ ತಿಳಿಸಿದ್ದರು. ಬಳಿಕ ಪರಿಹಾರ ಘೋಷಣೆ ಮಾಡಿದ್ದಾರೆ.

ಸಿಎಂ ಸಂತಾಪ

ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

Continue Reading

ಕ್ರೈಂ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Valmiki Corporation Scam: ಮಾಜಿ ಸಚಿವ ನಾಗೇಂದ್ರ ಮತ್ತು ಟೀಮ್, ಪ್ರಕರಣದಲ್ಲಿ ತಮ್ಮ ಹೆಸರು ಹೇಳದಂತೆ ಆರೋಪಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ನ್ಯಾಯಾಧೀಶರ ಮುಂದೆಯೇ ಆರೋಪಿಯೊಬ್ಬ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ಸಾಕ್ಷಿ ನಾಶ ಹಾಗೂ ಆರೋಪಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ (Valmiki Corporation Scam) ಪ್ರಕರಣದಲ್ಲಿ ರಾಜೀನಾಮೆ (Resignation) ನೀಡಿರುವ ಮಾಜಿ ಸಚಿವ ನಾಗೇಂದ್ರ (Ex Minister Nagendra) ಸಿಬಿಐ (CBI) ತನಿಖಾ ಸಂಸ್ಥೆಯಿಂದ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇದೇ ಕಾರಣವಾಗಿ ನಾಗೇಂದ್ರ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ.

ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆಯ ಬಳಿಕ ನಿಗಮದ ಹಗರಣ ಬೆಳಕಿಗೆ ಬಂದಿತ್ತು. ನಿಗಮದ 186 ಕೋಟಿ ರೂ. ಹಣವನ್ನು ಅಕ್ರಮವಾಗಿ ಅನ್ಯ ರಾಜ್ಯದ ಖಾತೆಗಳಿಗೆ ವರ್ಗಾವಣೆ ಮಾಡಿಸಿದ್ದನ್ನು ಚಂದ್ರಶೇಖರ್‌ ಡೆತ್‌ನೋಟ್‌ ಬೆಳಕಿಗೆ ಬಂದಿತ್ತು. ನಂತರ ಈ ವಿಚಾರದಲ್ಲಿ ಬಿಜೆಪಿ ರಾಜ್ಯವ್ಯಾಪಿ ತೀವ್ರ ಪ್ರತಿಭಟನೆಗೆ ಇಳಿದಿತ್ತು. ಇದರಿಂದ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದ ಅಧಿಕಾರಿಗಳ ಮೇಲೆ ಸರಕಾರ ಕ್ರಮ ಕೈಗೊಂಡು ತನಿಖೆಗೆ ಎಸ್‌ಐಟಿ ರಚಿಸಿತ್ತು. ಒತ್ತಡ ಹೆಚ್ಚಿದ ಪರಿಣಾಮ ಸಚಿವ ನಾಗೇಂದ್ರ ತಲೆದಂಡವೂ ಆಗಿತ್ತು.

ಈ ನಡುವೆ, ಮಾಜಿ ಸಚಿವ ನಾಗೇಂದ್ರ ಮತ್ತು ಟೀಮ್, ಪ್ರಕರಣದಲ್ಲಿ ತಮ್ಮ ಹೆಸರು ಹೇಳದಂತೆ ಆರೋಪಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ನ್ಯಾಯಾಧೀಶರ ಮುಂದೆಯೇ ಆರೋಪಿಯೊಬ್ಬ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ಸಾಕ್ಷಿ ನಾಶ ಹಾಗೂ ಆರೋಪಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.

ಈ ಪ್ರಕರಣದಲ್ಲಿ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಆದರೆ ಹಗರಣದಲ್ಲಿ ಸಿಬಿಐ ಸಹ ಎಂಟ್ರಿ ಆಗಿದೆ. ನೂರು ಕೋಟಿಗೂ ಮಿಕ್ಕಿದ ಹಣದ ಅವ್ಯವಹಾರ ಆಗಿರುವುದರಿಂದ ಸಿಬಿಐ ತನ್ನದೇ ರೀತಿಯಲ್ಲಿ ತನಿಖೆ ಆರಂಭಿಸಿದೆ. ಹೀಗಾಗಿ ನಾಗೇಂದ್ರಗೆ ಬಂಧನದ ಭೀತಿ ಶುರುವಾಗಿದೆ. ರಾಜೀನಾಮೆ ಕೊಟ್ಟ ಬಳಿಕ ನಾಗೇಂದ್ರ ಎಲ್ಲೂ ಕಾಣಿಸಿಕೊಂಡಿಲ್ಲ. ಅತ್ತ ಪಕ್ಷದ ಕೆಲಸದಲ್ಲೂ ಕಾಣಿಸಿಕೊಳ್ಳುತ್ತಿಲ್ಲ; ಇತ್ತ ಕ್ಷೇತ್ರದಲ್ಲೂ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ, ಬಂಧನದ ಭೀತಿಯಿಂದ ಹಿನ್ನೆಲೆಯಲ್ಲಿ ಉಳಿದಿರಬಹುದು ಎಂದು ಭಾವಿಸಲಾಗಿದೆ.

ತನಿಖೆಗೆ ಇಡಿ ಎಂಟ್ರಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದ ತನಿಖೆಗೆ ಜಾರಿ ನಿರ್ದೇಶನಾಲಯ ಕೂಡ ಎಂಟ್ರಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ತನಿಖೆ ಪ್ರಾರಂಭಿಸಿದ ಇಡಿ, ಜೈಲಿನಲ್ಲಿ ಇರುವ ಆರೋಪಿಗಳ ವಿಚಾರಣೆ ನಡೆಸಿದೆ. ಪದ್ಮನಾಭ್ ಮತ್ತು ಪರುಶರಾಮ್ ಹೇಳಿಕೆ ದಾಖಲಿಸಿದೆ. ಈಗಾಗಲೇ ಸಿಬಿಐ ಕೂಡ ಇವರ ಹೇಳಿಕೆ ದಾಖಲಿಸಿದೆ.

ಮತ್ತೊಬ್ಬನ ಬಂಧನ

ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್‌ಐಟಿ ಈ ವಾರ ವಶಕ್ಕೆ ಪಡೆದಿದೆ. ಅಧೀಕ್ಷಕ ಚಂದ್ರಶೇಖರ ಡೆತ್ ನೋಟ್‌ನಲ್ಲಿ ಹೆಸರು ಬರೆದಿದ್ದ ಸಾಯಿತೇಜ ಎಂಬ ಆರೋಪಿಯನ್ನು ಎಸ್ಐಟಿ ಅಧಿಕಾರಿಗಳು ಚೆನ್ನಗಿರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಸಾಯಿತೇಜ ಸೇರಿ ಇಬ್ಬರ ಬಂಧನ ಮಾಡಲಾಗಿದ್ದು, ಸದ್ಯ ಸಿಐಡಿ ಕಚೇರಿಯಲ್ಲಿ ವಶಕ್ಕೆ ಪಡೆದಿರುವ ಆರೋಪಿ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದ ಆರ್‌.ಅಶೋಕ್‌

Continue Reading
Advertisement
karnataka weather Forecast
ಮಳೆ21 mins ago

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Bridge Collapse
ದೇಶ24 mins ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Muhammad Usman
ಪ್ರಮುಖ ಸುದ್ದಿ2 hours ago

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Dina Bhavishya
ಭವಿಷ್ಯ2 hours ago

Dina Bhavishya : ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ

UGC NET Exam
ದೇಶ7 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ7 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ7 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ7 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ9 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ9 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ12 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌