ರಿಪ್ಪನ್‌ಪೇಟೆ: ರಕ್ತದಾನದಿಂದ (Blood Donation) ಇನ್ನೊಬ್ಬರ ಜೀವ ಉಳಿಸಬಹುದು, ರಕ್ತಕ್ಕೆ ಪರ್ಯಾಯ ಯಾವುದೇ ವಸ್ತು ಇಲ್ಲ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಹೇಳಿದರು.
ಪಟ್ಟಣದ ಸಮೀಪದ ಕೆಂಚನಾಲ ಗ್ರಾಮದ ಜಾಮೀಯಾ ಮಸೀದಿ ಆವರಣದಲ್ಲಿ ಈದ್ ಮಿಲಾದ್ ಸಮಿತಿ ಹಾಗೂ ರಿಪ್ಪನ್‌ಪೇಟೆ ರೋಟರಿ ಕ್ಲಬ್ ಸಹಯೋಗದಲ್ಲಿ ಈದ್ ಮಿಲಾದ್ ಪ್ರಯುಕ್ತ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಕ್ತದಾನ ಮಾಡುವುದರಿಂದ ರಕ್ತದಾನಿಗಳ ಆರೋಗ್ಯವೂ ಸುಧಾರಿಸುತ್ತದೆ ಹಾಗಾಗಿ ಆರೋಗ್ಯವಂತ ಎಲ್ಲರೂ ನಿಯಮಿತವಾಗಿ ರಕ್ತದಾನ ಮಾಡಿ ಎಂದು ಅವರು ತಿಳಿಸಿದರು.
ಇದನ್ನೂ ಓದಿ: Dasara Tour: ದಸರಾ ರಜೆಯಲ್ಲಿ ಪ್ರವಾಸ ಮಾಡ್ತೀರಾ? ಕೆಎಸ್‌ಟಿಡಿಸಿ ಟೂರ್ ಪ್ಯಾಕೇಜ್ ಹೀಗಿದೆ
ರೋಟರಿ ಕ್ಲಬ್ ಅಧ್ಯಕ್ಷ ಆರ್.ಎಚ್. ದೇವದಾಸ್ ಮಾತನಾಡಿ, ಆರೋಗ್ಯವಂತರು 60 ವರ್ಷಗಳ ತನಕ ರಕ್ತದಾನ ಮಾಡಬಹುದು. ರಕ್ತದಾನದಿಂದ ಆರೋಗ್ಯ ಉತ್ತಮವಾಗಿರುತ್ತದೆ. ಅನೇಕ ರೋಗಗಳಿಂದಲೂ ಮುಕ್ತವಾಗಬಹುದು. ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗಲಿದೆ ಎಂದು ಹೇಳಿದರು.
ಈ ಸಂಧರ್ಭದಲ್ಲಿ ರೋಟರಿ ಸಂಸ್ಥಾಪಕ ಅಧ್ಯಕ್ಷ ಎಂ ಬಿ ಲಕ್ಷ್ಮಣಗೌಡ , ಜಾಮೀಯಾ ಮಸೀದಿ ಅಧ್ಯಕ್ಷ ಅಬ್ದುಲ್ ಘನಿಸಾಬ್ ,ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ, ರೋಟರಿ ಸಂಸ್ಥೆಯ ಕಾರ್ಯದರ್ಶಿ ರಾಮಚಂದ್ರ ರಾಧಾಕೃಷ್ಣ ,ಗಣೇಶ್ ಕಾಮತ್, ಡಾಕಪ್ಪ, ಈದ್ ಮಿಲಾದ್ ಸಮಿತಿ ಅಧ್ಯಕ್ಷ ಫಾಜಿಲ್ , ಮಖಂಡರಾದ ವಜೀರ್ ಸಾಬ್, ಖಲೀಲ್ ಷರೀಫ್, ಅಕ್ಬರ್, ತಬ್ರೇಜ್ ಹಾಗೂ ಗಾಳಿ ಬೈಲು ಖಲಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.