ಶಿವಮೊಗ್ಗ
Shivamogga News: ಅರೆಮಲ್ಲಾಪುರದ ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿಕೆಗೆ ಬಿಎಸ್‌ಎನ್‌ಡಿಪಿ ಖಂಡನೆ
ರಾಜ್ಯದಲ್ಲಿ ಈಡಿಗ ಸಮಾಜವನ್ನು ಮುನ್ನೆಲೆಗೆ ತರುವಲ್ಲಿ ಅನೇಕ ನಾಯಕರ ಕೊಡುಗೆ ಮತ್ತು ಹೋರಾಟಗಳಿವೆ. ಆದರೆ, ಅರೆಮಲ್ಲಾಪುರದ ಶ್ರೀ ಪ್ರಣವಾನಂದ ಸ್ವಾಮೀಜಿ ಸಮಾಜದ ನಾಯಕರ ವಿರುದ್ಧ ನೀಡಿರುವ ಹೇಳಿಕೆಗೆ ಸೊರಬದಲ್ಲಿ ಬಿಎಸ್‌ಎನ್‌ಡಿಪಿ ಸಂಘಟನೆಯ ಜಿಲ್ಲಾಧ್ಯಕ್ಷ ಕಲ್ಲಪ್ಪ ಚಿತ್ರಟ್ಟೆಹಳ್ಳಿ ಖಂಡಿಸಿದ್ದಾರೆ.
ಸೊರಬ: ರಾಜ್ಯದಲ್ಲಿ ಈಡಿಗ ಸಮಾಜವನ್ನು (ediga community) ಮುನ್ನೆಲೆಗೆ ತರುವಲ್ಲಿ ಅನೇಕ ನಾಯಕರ (Leaders) ಕೊಡುಗೆ ಮತ್ತು ಹೋರಾಟಗಳಿವೆ. ಆದರೆ, ಅರೆಮಲ್ಲಾಪುರದ ಶ್ರೀ ಪ್ರಣವಾನಂದ ಸ್ವಾಮೀಜಿ ಸಮಾಜದ ನಾಯಕರ ವಿರುದ್ಧ ನೀಡಿರುವ ಹೇಳಿಕೆಗೆ ಬಿಎಸ್‌ಎನ್‌ಡಿಪಿ ಸಂಘಟನೆ ಜಿಲ್ಲಾಧ್ಯಕ್ಷ ಕಲ್ಲಪ್ಪ ಚಿತ್ರಟ್ಟೆಹಳ್ಳಿ ಖಂಡನೆ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಡಿಗ ಸಮಾಜಕ್ಕೆ ಪೀಠ ಹಾಗೂ ಸ್ವಾಮೀಜಿಗಳು ಇಲ್ಲದಂತಹ ಸಂದರ್ಭದಲ್ಲಿಯೇ ರಾಜ್ಯಕ್ಕೆ ಎಸ್. ಬಂಗಾರಪ್ಪ ಅವರಂತಹ ಮುಖ್ಯಮಂತ್ರಿಯನ್ನು ಕೊಡುಗೆಯಾಗಿ ನೀಡಿದ್ದೇವೆ. ಕಾಗೋಡು ತಿಮ್ಮಪ್ಪ ಮತ್ತು ಮಧು ಬಂಗಾರಪ್ಪ ಸೇರಿದಂತೆ ಅನೇಕ ನಾಯಕರ ಹೋರಾಟಗಳಿಂದ ಈಡಿಗ ಸಮಾಜ ಸ್ವಾಭಿಮಾನಿ ಬದುಕು ಕಂಡುಕೊಂಡಿದೆ. ಇಂತಹ ನಾಯಕರ ವಿರುದ್ಧವಾಗಿ ಹೇಳಿಕೆ ನೀಡುವಾಗ ಪ್ರಣವಾನಂದ ಶ್ರೀಗಳು ಎಚ್ಚರಿಕೆಯಿಂದ ಮಾತನಾಡಬೇಕು ಎಂದರು.
ಮಧು ಬಂಗಾರಪ್ಪ ಅವರು ರೈತರ ಪರವಾಗಿ ಪಾದಯಾತ್ರೆಯಂತಹ ಹೋರಾಟ ನಡೆಸಿದರು. ಕಾಗೋಡು ತಿಮ್ಮಪ್ಪ, ಎಸ್. ಬಂಗಾರಪ್ಪ ಅವರಂತಹ ನಾಯಕರು ಉಳುವ ರೈತರಿಗೆ ಭೂಮಿಯ ಹಕ್ಕನ್ನು ಕೊಡಿಸಿದರು. ಅಂತಹ ನಾಯಕರನ್ನು ನೋಡಿ ಪ್ರಣವಾನಂದ ಸ್ವಾಮೀಜಿ ಅರಿಯಬೇಕೇ ವಿನಃ, ಇಂತಹ ಸ್ವಾಮೀಜಿಗಳಿಂದ ಸಮಾಜಕ್ಕೆ ತಿಳಿಯುವ ವಿಚಾರವಿಲ್ಲ. ಕಳೆದ ಮೂರು ವರ್ಷಗಳಿಂದ ಸ್ವಯಂ ಘೋಷಿತ ಈಡಿಗ ಸಮಾಜದ ಸ್ವಾಮೀಜಿ ಎಂದು ಬಿಂಬಿಸಿಕೊಳ್ಳುವ ಯತ್ನದಲ್ಲಿ ಮತ್ತು ಆತುರದಲ್ಲಿ ಸಮಾಜದ ನಾಯಕರ ವಿರುದ್ಧವೇ ಹೇಳಿಕೆ ನೀಡುವುದನ್ನು ಸಮಾಜವು ಸಹಿಸುವುದಿಲ್ಲ. ಇಂತಹ ಸ್ವಾಮೀಜಿಯಿಂದ ಒಗ್ಗಟ್ಟಿನಿಂದ ಇರುವ ಈಡಿಗ ಸಮಾಜದಲ್ಲಿ ಒಡಕು ಮೂಡಿಸುವ ದುಷ್ಕೃತ್ಯ ನಡೆಯುತ್ತಿದೆ ಎಂದು ಆರೋಪಿಸಿದರು.
ಇದನ್ನೂ ಓದಿ: Krishna ByreGowda : ಅಕ್ಟೋಬರ್ 1ರಿಂದ ಶೇ. 30ರಷ್ಟು ಆಸ್ತಿ ಮಾರ್ಗಸೂಚಿ ದರ ಹೆಚ್ಚಳ!
ಶಿಕ್ಷಣದ ಮೂಲಕ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹಿಂದುಳಿದ ವರ್ಗಗಳಿಗೆ ಶಿಕ್ಷಣ ನೀಡಿದ ನಾರಾಯಣ ಗುರುಗಳ ಜಯಂತಿಯನ್ನು ಸರ್ಕಾರದಿಂದ ಆಚರಿಸಲು ಸದನದಲ್ಲಿ ಪ್ರಸ್ತಾಪ ಮಾಡಿದವರು ಮಧು ಬಂಗಾರಪ್ಪ ನವರು. ಜತೆಗೆ ತಾಲೂಕಿನಲ್ಲಿ ಸಮಾಜದ ಶೈಕ್ಷಣಿಕ ಮತ್ತು ಧಾರ್ಮಿಕ ಚಟುವಟಿಕೆ ನಡೆಸಲು 4 ಎಕರೆ ನಿವೇಶನವನ್ನು ಮಂಜೂರು ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.
ಸಮಾಜದ ಸ್ವಾಮೀಜಿ ಎಂದು ಕೆಲ ದಿನಗಳಿಂದ ಬಿಂಬಿಸಿಕೊಳ್ಳುತ್ತಿರುವ ಪ್ರಣವಾನಂದ ಸ್ವಾಮೀಜಿ ಅವರಿಂದ ಸಮಾಜಕ್ಕೆ ಕೊಡುಗೆ ಏನು ಪ್ರಶ್ನಿಸಿದ ಅವರು, ಬಿ.ಕೆ. ಹರಿಪ್ರಸಾದ್ ಅವರಿಗೆ ನ್ಯಾಯ ಕೊಡಿಸಲು ಸಮಾಜ ಅವರ ಜತೆಗೆ ಇದೆ. ಇನ್ನು ಅವರ ಪಕ್ಷದ ಹೈಕಮಾಂಡ್ ಇದೆ. ಈ ನಡುವೆ ಸಮಾಜದಲ್ಲಿ ಭಿನ್ನಾಭಿಪ್ರಾಯ ಹುಟ್ಟುಹಾಕುವಂತಹ ಹೇಳಿಕೆಗಳು ಸಲ್ಲದು ಎಂದು ಹೇಳಿದರು.
ಇತರೆ ಸಮಾಜದ ಗೌರವಾನ್ವಿತ ಸ್ವಾಮೀಜಿಗಳ ಎದುರು ಈಡಿಗ ಸಮಾಜವು ಇರಿಸುಮುರಿಸು ಅನುಭವಿಸುವಂತಾಗಿದೆ. ಹೇಳಿಕೆಗಳನ್ನು ನೀಡುವಾಗ ಪ್ರಣಾವಾನಂದ ಸ್ವಾಮೀಜಿ ಅವರು ರಾಜ್ಯದ ಇತಿಹಾಸ ಮತ್ತು ಈಡಿಗ ಸಮಾಜ ನಾಯಕರ ಹೋರಾಟದ ಜತೆಗೆ ಸಂಸ್ಕೃತಿ ಸಂಸ್ಕಾರಗಳನ್ನು ಮೊದಲು ಅರಿಯಬೇಕು. ಇಲ್ಲವಾದಲ್ಲಿ ಸಮಾಜದ ವಿವಿಧ ಸಂಘಟನೆಗಳ ಜತೆಗೂಡಿ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: Drought in Karnataka : ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ಹಾನಿ; 6 ಸಾವಿರ ಕೋಟಿಗಾಗಿ ಕೇಂದ್ರಕ್ಕೆ ಮೊರೆ
ಸುದ್ದಿಗೋಷ್ಠಿಯಲ್ಲಿ ಬಿಎಸ್‌ಎನ್‌ಡಿಪಿ ಜಿಲ್ಲಾ ಉಪಾಧ್ಯಕ್ಷ ತ್ಯಾಗರಾಜ್, ಪ್ರಮುಖರಾದ ಪರಸಪ್ಪ, ಬಂಗಾರಪ್ಪ ಕೆರೆಕೊಪ್ಪ, ಲಕ್ಷ್ಮಣಪ್ಪ, ಚಂದ್ರಪ್ಪ ಓಟೂರು ಸೇರಿದಂತೆ ಇತರರಿದ್ದರು.
ಶಿವಮೊಗ್ಗ
Shivamogga News: ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು
Shivamogga News: ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ್ದು, ಒಟ್ಟು 11 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು (Government PU College) ವಿದ್ಯಾರ್ಥಿಗಳು ಮತ್ತೊಮ್ಮೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ (Sports) ಮೇಲುಗೈ ಸಾಧಿಸುವುದರೊಂದಿಗೆ 12 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ (State Level) ಆಯ್ಕೆಯಾಗಿದ್ದಾರೆ.
ಸೆಪ್ಟೆಂಬರ್ 23 ಮತ್ತು 24ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ.
ಬಾಲಕರ ವಿಭಾಗದಲ್ಲಿ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ,ಹಾಗೂ ಖೋ -ಖೋ ದಲ್ಲಿ ಒಬ್ಬ ವಿದ್ಯಾರ್ಥಿ ಸೇರಿದಂತೆ ಒಟ್ಟು 11 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು, ಪ್ರಾಚಾರ್ಯ ಎ. ಮಂಜುನಾಥ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಿ. ಆರ್ ಕೃಷ್ಣಮೂರ್ತಿ, ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಉಪನ್ಯಾಸಕರು, ಗ್ರಾಮಸ್ಥರು, ಪೋಷಕರುಗಳು ಅಭಿನಂದಿಸಿದ್ದಾರೆ.
ಶಿವಮೊಗ್ಗ
Shivamogga News: ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯುತ್ಸವ
Shivamogga News: ಸೊರಬ ತಾಲೂಕಿನ ಜಡೆ ಹೋಬಳಿಯ ಆಲಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ ಕಾರ್ಯಕ್ರಮ ಜರುಗಿತು.
ಸೊರಬ: ತಾಲೂಕಿನ ಜಡೆ ಹೋಬಳಿಯ ಆಲಹಳ್ಳಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ವೀರಭದ್ರೇಶ್ವರ ಸ್ವಾಮಿ ಜಯಂತ್ಯೋತ್ಸವ (Sri Veerabhadreswara Swami Jayantyotsava) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಜಡೆ ಸಂಸ್ಥಾನ ಮಠ ಹಾಗೂ ಸೊರಬ ಮುರುಘಾಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿ, ಮಾತನಾಡಿ, ಶಿವನ ಮಾನಸಪುತ್ರನೆಂದು ಕರೆಯಲ್ಪಡುವ ಶ್ರೀ ವೀರಭದ್ರ ಸ್ವಾಮಿಗೆ ದೇಶಾದ್ಯಂತ ಕೋಟ್ಯಂತರ ಭಕ್ತರಿದ್ದು, ಮನೆ ದೇವರಾಗಿ ಆರಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಭಕ್ತರ ಇಷ್ಟಾರ್ಥವನ್ನು ಸಿದ್ಧಿಸುವ ಶಕ್ತಿಯನ್ನು ಶ್ರೀ ವೀರಭದ್ರ ಸ್ವಾಮಿ ಹೊಂದಿದ್ದಾರೆ. ವೀರಭದ್ರನ ವೀರಗುಣಗಳನ್ನು ಪ್ರತಿಬಿಂಬಿಸುವ ಆರಾಧನೆಯು ಕಟ್ಟು ನಿಟ್ಟಿನ ಆಚರಣೆಗಳು ಬಹು ಪ್ರಾಚೀನವಾದವು. ವೀರಭದ್ರ ಸ್ವಾಮಿಯನ್ನು ವೀರಶೈವ ಸಮಾಜದವರು ಮಾತ್ರವಲ್ಲದೇ ಎಲ್ಲಾ ಸಮಾಜದವರು ಆರಾಧನೆ ಮತ್ತು ಮನೆ ದೇವರಾಗಿ ಪೂಜಿಸುತ್ತಿದ್ದಾರೆ. ಇಂದಿಗೂ ಸಹ ವೀರಭದ್ರ ಸ್ವಾಮಿಯಲ್ಲಿ ಗಾಢಭಕ್ತಿ ಮತ್ತು ಅಚಲ ವಿಶ್ವಾಸ ನಡೆದುಕೊಂಡು ಬಂದಿದೆ ಎಂದರು.
ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾರ್ಯಕ್ರಮದಲ್ಲಿ ಜಡೆ ಹಿರೇಮಠ ಹಾಗೂ ಕಾನುಕೇರಿ ಮಠದ ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ ಮಾತನಾಡಿದರು.
ಇದಕ್ಕೂ ಮೊದಲು ಶ್ರೀ ದೇವರ ಸನ್ನಿಧಿಯಲ್ಲಿ ರುದ್ರಾಭಿಷೇಕ, ಬಿಲ್ವಾರ್ಚನೆ, ರುದ್ರ ಹೋಮ, ಪಾರ್ಣಹುತಿ, ಮಹಾಮಂಗಳಾರತಿ ಭಕ್ತರಿಗೆ ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು. ಗ್ರಾಮದಲ್ಲಿ ಶ್ರೀ ವೀರಭದ್ರ ದೇವರ ಭಾವಚಿತ್ರದ ಮೆರವಣಿಯನ್ನು ವಿವಿಧ ವಾದ್ಯಘೋಷಗಳೊಂದಿಗೆ ವಿಜೃಂಭಣೆಯಿಂದ ಮಾಡಲಾಯಿತು. ತಲಗಡ್ಡೆ ಶಿವಕುಮಾರ ಶಾಸ್ತ್ರಿ ಹಾಗೂ ಸಂಗಡಿಗರು ಪೂಜಾ ಕೈಂಕರ್ಯಗಳ ನೇತೃತ್ವ ವಹಿಸಿದ್ದರು.
ಇದನ್ನೂ ಓದಿ: Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
ಶಾಂತಪುರ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಜಡೆ ಹಿರೇಮಠದ ಶ್ರೀ ರುದ್ರ ದೇವರು, ಪ್ರಮುಖರಾದ ಉದ್ಯಮಿ ವೆಂಕಟೇಶ ಕಾಮತ್, ಡಾ. ವಿಶ್ವನಾಥ ನಾಡಿಗೇರ್, ಸದಾನಂದ ಗೌಡ ಬಿಳಗಲಿ, ಬಂಗಾರಪ್ಪ ಗೌಡ ಕುಪ್ಪೆ, ವಿಜಯ ಗೌಡ, ವೀರಪ್ಪ ಗೌಡ ಪಾಟೀಲ್ ಆಲಹಳ್ಳಿ, ಮಂಜಣ್ಣ ಅರ್ಕಸಾಲಿ, ವೀರೇಂದ್ರ ಪಾಟೀಲ್ ಸೇರಿದಂತೆ ಇತರರಿದ್ದರು.
ಉಡುಪಿ
Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Rain News : ಉತ್ತರ ಕರ್ನಾಟಕದ ಹಲವು ಕಡೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಸೆ. 26ರಂದು ಉತ್ತರ ಒಳನಾಡಿನ ಹಲವು ಕಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆ ಇದೆ. ಬೆಂಗಳೂರಲ್ಲಿ ಸಂಜೆ ವೇಳೆಗೆ ಸಾಧಾರಣ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು ಸಹಿತ ಮಳೆಯಾಗುವ (weather report) ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ
ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಬೆಂಗಳೂರಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮೈಸೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರದಲ್ಲಿ ಅತಿ ಕಡಿಮೆ ಮಳೆಯಾಗಲಿದೆ.
ಉತ್ತರ ಒಳನಾಡಿನ ರಾಯಚೂರು, ಬೀದರ್, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡದ ಹಲವೆಡೆ ಅಲ್ಲಲ್ಲಿ ಹಗುರ ಮಳೆಯಾಗಲಿದೆ. ಕೊಪ್ಪಳದಲ್ಲಿ ಅಲ್ಲಲ್ಲಿ ಅತಿ ಕಡಿಮೆ ಮಳೆ ಬೀಳಲಿದೆ. ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಟಿ ಜಿಟಿ ಮಳೆ ಸುರಿಯಲಿದೆ.
ಇದನ್ನೂ ಓದಿ:Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ
ರಾಜ್ಯದಲ್ಲಿ ಭಾನುವಾರದಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ಶಹಪುರದಲ್ಲಿ 7 ಸೆಂ.ಮೀ ವರದಿ ಆಗಿದೆ. ಅಂಕೋಲಾ, ಹೆಬ್ಬೂರಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕುಮಟಾ, ಗೇರ್ಸೊಪ್ಪ, ಗೋಕರ್ಣ, ಮಂಕಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಕುಂದಾಪುರ, ಕೋಟ, ಸಿದ್ದಾಪುರ, ಬೇಲಿಕೇರಿ, ಹೊನ್ನಾವರ, ಖಜೂರಿ, ಮೈಸೂರು, ರಾಯಲ್ಪಾಡದಲ್ಲಿ ತಲಾ 3 ಸೆಂ.ಮೀ, ಉಡುಪಿ, ಕಾರ್ಕಳ , ಮಂಗಳೂರು, ಉಪ್ಪಿನಂಗಡಿ, ಮೂಲ್ಕಿ, ಕದ್ರಾ, ಕೆಂಭಾವಿ, ಮುನಿರಾಬಾದ್ , ಗಬ್ಬೂರು ಹಾಗೂ ಆಳಂದ, ಸೇಡಂ, ಕಳಸ, ಗುಬ್ಬಿ, ತಿಪಟೂರು, ಚಿತ್ರದುರ್ಗ, ಕುಡತಿನಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಕಾರವಾರ, ಮಂಗಳೂರು, ಧರ್ಮಸ್ಥಳ, ಬೆಳ್ತಂಗಡಿ, ಕಿರವತ್ತಿ, ಮುಂಡಗೋಡ ಯಲ್ಲಾಪುರ, ಮಂಚಿಕೆರೆ, ಜಾಲಹಳ್ಳಿ, ಮಹಾಗೋಣ, ಮುಧೋಳೆ, ಗುಂಡಗುರ್ತಿ, ಆಡಕಿ, ಕವಡಿಮಟ್ಟಿ ಅರ್ಗ, ಭಾಲ್ಕಿ , ಮಂಠಾಳ, ಹಾವೇರಿ, ಚಿಕ್ಕಬಳ್ಳಾಪುರ, ಕಡೂರು, ಕೋಲಾರ, ಲಿಂಗನಮಕ್ಕಿ ಎಚ್‌ಎಂಎಸ್, ತಾಳಗುಪ್ಪ, ತ್ಯಾಗರ್ತಿ, ಯಗಟಿ , ಹೊಸಕೋಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Weather Report : ಬೆಂಗಳೂರಲ್ಲಿ ಕವಿದ ಮೋಡ; ಅಲ್ಲಲ್ಲಿ ಧಾರಾಕಾರ ಮಳೆ
Rain News : ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. 4 ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಐಎಂಡಿ ಯೆಲ್ಲೊ ಅಲರ್ಟ್ (Weather report) ನೀಡಿದೆ.
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಹಲವೆಡೆ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ. ದಕ್ಷಿಣ ಕನ್ನಡ, ಬೀದರ್, ಕಲಬುರಗಿ ಮತ್ತು ರಾಮನಗರದಲ್ಲಿ ಪ್ರತ್ಯೇಕ ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ.
ದಕ್ಷಿಣ ಒಳನಾಡಿನ ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ರಾಯಚೂರಲ್ಲೂ ಲಘು ಮಳೆಯಾಗಲಿದೆ. ಮಲೆನಾಡಿನ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ತಕ್ಕಮಟ್ಟಿಗೆ ಹಗುರ ಮಳೆಯಾಗಲಿದೆ. ಹಾಸನ ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆ ಇರಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಈ ಜಿಲ್ಲೆಗಳಲ್ಲಿ ಎಡಬಿಡದೆ ಸುರಿಯುವ ಮಳೆ
ಕರಾವಳಿಯ ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಮುಂದಿನ 48 ಗಂಟೆಯಲ್ಲಿ ಉತ್ತರ ಒಳನಾಡಿನ ವಿಜಯನಗರದಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಗುಡುಗು, ಬಿರುಗಾಳಿಯ ಮುನ್ನೆಚ್ಚರಿಕೆ
ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.
ಇದನ್ನೂ ಓದಿ:Farmers problem : ಸೇವಂತಿಗೆ ಹೂವಿನ ದರ ಕುಸಿತ ಹಿನ್ನೆಲೆ; ಟ್ರ್ಯಾಕ್ಟರ್ ಓಡಿಸಿ ಬೆಳೆಯನ್ನೇ ನಾಶ ಮಾಡಿದ ಹತಾಶ ರೈತ
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 31 ಡಿ.ಸೆ – 23 ಡಿ.ಸೆ
ಬೆಳಗಾವಿ: 28 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ಸೆಪ್ಟೆಂಬರ್ 25ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್‌ಎಸ್ ಜಲಾಶಯ (KRS Dam) | 38.04 | 20.61 | 6016 | 5735 |
ಆಲಮಟ್ಟಿ ಜಲಾಶಯ (Almatti Dam) | 519.6 | 114.73 | 405 | 405 |
ಮಲಪ್ರಭಾ ಜಲಾಶಯ (Malaprabha Dam) | 633.80 | 21.44 | 0 | 194 |
ಘಟಪ್ರಭಾ ಜಲಾಶಯ (Ghataprabha Dam) | 662.91 | 42.40 | 2311 | 181 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 62.92 | 4378 | 10316 |
ಭದ್ರಾ ಜಲಾಶಯ (Bhadra Dam) | 657.73 | 43.23 | 290 | 290 |
ಕಬಿನಿ ಜಲಾಶಯ (Kabini Dam) | 696.13 | 14.80 | 3166 | 4390 |
ಹಾರಂಗಿ (Harangi Dam) | 871.38 | 8.06 | 1335 | 2791 |
ಲಿಂಗನಮಕ್ಕಿ (Linganamakki Dam) | 554.44 | 68.30 | 5493 | 5393 |
ಹೇಮಾವತಿ (Hemavathi Dam) | 890.58 | 17.66 | 4986 | 1300 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
Live News3 hours ago
Bangalore Bandh Live: ಬೆಂಗಳೂರು ಬಂದ್ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?
-
ವಿದೇಶ20 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ18 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ13 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ14 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema16 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ದೇಶ10 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ
-
ಅಂಕಣ20 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?