Site icon Vistara News

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ; ಪೂರ್ವಭಾವಿ ಸಭೆ

Chandragutti Sri Renukamba Devi Jatra Mahotsav Preliminary meeting

ಸೊರಬ: ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿ (Chandragutti Shri Renukamba Devi) ಜಾತ್ರಾ ಮಹೋತ್ಸವವನ್ನು ಸರ್ಕಾರದ ಆದೇಶದಂತೆ ಹಿಂದಿನಿಂದ ನಡೆದು ಬಂದ ಸಂಪ್ರದಾಯದಂತೆ ಆಚರಿಸಲಾಗುವುದು ಎಂದು ಸಾಗರ ಉಪ ವಿಭಾಗಾಧಿಕಾರಿ ಆರ್.ಯತೀಶ್ (Shivamogga News) ಹೇಳಿದರು.

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಜಾತ್ರೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು.

ಮಾರ್ಚ್ 15 ರಿಂದ 20 ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಮಾರ್ಚ್ 18 ರಂದು ಮಹಾರಥೋತ್ಸವ ನಡೆಯಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

ಕ್ಷೇತ್ರದ ಅಭಿವೃದ್ಧಿಗಾಗಿ 52 ಲಕ್ಷ ವೆಚ್ಚದಲ್ಲಿ ಶೌಚಾಲಯ, ಸ್ನಾನಗೃಹ, ಕಾಂಪೌಂಡ್ ಸೇರಿದಂತೆ ಮೂಲ ಸೌಲಭ್ಯಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಆಗಿದ್ದು, ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತರಿಗೆ ಸೌಲಭ್ಯ ಹಾಗೂ ಮೊಬೈಲ್ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಭಕ್ತರಿಗೆ ಉಳಿದುಕೊಳ್ಳುಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಕ್ಷೇತ್ರವು ಅಭಿವೃದ್ಧಿಯಿಂದ ಕುಂಠಿತವಾಗಿದೆ. ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ ಆದರೆ ಭಕ್ತರಿಗೆ ಯಾವುದೇ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ ಎಂದು ಸಾರ್ವಜನಿಕರು ಸಭೆಯಲ್ಲಿ ದೂರಿದರು. ರಥಬೀದಿ ಅಂಗಡಿಗಳಲ್ಲಿ ರಾಸಾಯನಿಕ ಕುಂಕುಮ ಮಾರಾಟ ಮಾಡದಂತೆ ಸೂಚನೆ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಇದನ್ನೂ ಓದಿ: Karnataka Budget Session 2024: ಆಸ್ತಿ ತೆರಿಗೆ ವಸೂಲಿ 3ಡಿ ಡ್ರೋನ್‌ ಐಡಿಯಾ! ಮಹಿಳಾ ಸ್ವಸಹಾಯ ಗುಂಪಿಗೂ ಕೆಲಸ

ಗ್ರಾಪಂ ಉಪಾಧ್ಯಕ್ಷ ರೇಣುಕಾ ಪ್ರಸಾದ್ ಮಾತನಾಡಿ, ದೇವಸ್ಥಾನದಲ್ಲಿ ಸೇವೆ ಸಲ್ಲಿಸುವಂತಹ ವಾದ್ಯ ಬಾರಿಸುವವರು, ತೇರು ಕಟ್ಟುವವರು, ಪಲ್ಲಕ್ಕಿ ಹೊರುವ ಕಾರ್ಮಿಕರಿಗೆ ಹಿಂದಿನಿಂದಲೂ ಗೌರವ ಧನ ನೀಡಲಾಗುತ್ತಿದ್ದು, ಅದನ್ನು ಹೆಚ್ಚಳ ಮಾಡಬೇಕು ಎಂದು ತಿಳಿಸಿದರು.

ಜಾತ್ರೆಗೆ ಸೀಮಿತವಾಗಿ ಅಭಿವೃದ್ಧಿಪಡಿಸದೆ ನಿರಂತರವಾಗಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಭಕ್ತರಿಗೆ ಅನುಕೂಲವಾಗುವಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Uttara Kannada News: ಭಾಶಿ ಗ್ರಾಮದಲ್ಲಿ ಅಡಿಕೆ ತೋಟಕ್ಕೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ಹಾನಿ

ತಹಸೀಲ್ದಾರ್ ಹುಸೇನ್ ಸರಕಾವಸ್, ಪುರಾತತ್ವ ಇಲಾಖೆ ಸಿ.ಒ ನಂದಕುಮಾರ್, ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್ ಶಿವಪ್ರಸಾದ್, ಇ.ಒ ಪ್ರದೀಪ್ ಕುಮಾರ್, ಪುರಸಭೆ ಮುಖ್ಯ ಅಧಿಕಾರಿ ಬಾಲಚಂದ್ರಪ್ಪ, ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ಉಪಾಧ್ಯಕ್ಷ ಎಂ.ಬಿರೇಣುಕಾ ಪ್ರಸಾದ್, ಮಾಜಿ ತಾಪಂ ಸದಸ್ಯ ಎನ್‍ಜಿ ನಾಗರಾಜ್, ಗ್ರಾಪಂ ಸದಸ್ಯರಾದ ಎಂ.ಪಿ ರತ್ನಾಕರ್, ರಾಜಶೇಖರ್, ಲಕ್ಷ್ಮಿ ಚಂದ್ರಪ್ಪ, ಸೇರಿದಂತೆ, ವಿವಿಧ ಇಲಾಖೆಗಳ ಅಧಿಕಾರಿಗಳು ಆರಕ್ಷಕ ಇಲಾಖೆಯವರು, ಸಾರ್ವಜನಿಕರು ಉಪಸ್ಥಿತರಿದ್ದರು.

Exit mobile version