ಸೊರಬ: ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿಯ (Chandragutti Shri Renukamba Devi) ಜಾತ್ರಾ ಮಹೋತ್ಸವದ ಅವಭೃಥೋತ್ಸವ ಓಕಳಿ ಉತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ (Shivamogga news) ಸಂಪನ್ನಗೊಂಡಿತು.
ಇದನ್ನೂ ಓದಿ: IPL 2024: ಐಪಿಎಲ್ ಟ್ರೋಫಿಯೊಂದಿಗೆ ಕಂಗೊಳಿಸಿದ 10 ತಂಡದ ನಾಯಕರು
ದೇವಾಲಯದಿಂದ ಶ್ರೀ ರೇಣುಕಾಂಬ ದೇವಿಯ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ಓಕಳಿ ಕಟ್ಟೆಗೆ ತೆರಳಿ ಭಕ್ತರ ಸಮೂಹದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಕುಂಕುಮದ ನೀರು ಎರಚುವುದರ ಮೂಲಕ ಓಕಳಿ ಆಡಿದರು. ಭಕ್ತರು ಚಂದ್ರಗುತ್ಯಮ್ಮ ನಿನ್ನಾಲ್ಕು ಉಧೋ.. ಉಧೋ ಎಲ್ಲಮ್ಮ ನಿನ್ನಾಲ್ಕು ಉಧೋ ಉಧೋ ಎಂಬ ಘೋಷಣೆಯೊಂದಿಗೆ ಭಕ್ತಿ ಸ್ಮರಣೆಯಲ್ಲಿ ಮಿಂದೆದ್ದರು.
ಜಾತ್ರಾ ಮಹೋತ್ಸವದ ಮೂರನೇ ದಿನದ ಅವಭೃಥೋತ್ಸವ ಓಕಳಿಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಚಾಲನೆ ನೀಡಿದರು.
ಇದನ್ನೂ ಓದಿ: Ballari News: ಬಳ್ಳಾರಿಯಲ್ಲಿ 472.01 ಲೀ. ಮದ್ಯ, 26.33 ಕೆ.ಜಿ ಬೆಳ್ಳಿ, ನಗದು ವಶ
ನಂತರ ಶ್ರೀ ರೇಣುಕಾಂಬ ದೇವಿ ಪಲ್ಲಕ್ಕಿ ಉತ್ಸವ ಮೆರವಣಿಗೆ ಗ್ರಾಮದ ಮಂಗಳಾರತಿ ಕಟ್ಟೆ, ಹರೀಶಿ ರಸ್ತೆ, ಮುಖ್ಯರಸ್ತೆ ಮಾರ್ಗವಾಗಿ ಸುಂದರವಾಗಿ ಪುಷ್ಪಗಳಿಂದ ಅಲಂಕರಿಸಿದಂತಹ ಮಂಟಪದಲ್ಲಿ ಸಿಂಹಾಸನದ ಮೇಲೆ ಶ್ರೀ ದೇವಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬುಧವಾರ ದೇವಾಲಯದಲ್ಲಿ ತುಲಾಭಾರ ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು.