ಸೊರಬ: ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿಯ (Chandragutti Shri Renukamba Devi) ಜಾತ್ರಾ ಮಹೋತ್ಸವ ಸಂಪನ್ನಗೊಂಡಿದ್ದು, ದೇವಸ್ಥಾನದ ಆಡಳಿತ ಮಂಡಳಿಯಿಂದ ದೇಗುಲದಲ್ಲಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಪ್ರಸಾದ (Shivamogga News) ವಿತರಿಸಲಾಯಿತು.
ಈ ಬಾರಿಯ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವವು ಸಂಪನ್ನಗೊಂಡಿದ್ದು, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಅವರ ನೇತೃತ್ವದಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಭಕ್ತರಿಗೆ ಮತ್ತು ಚಂದ್ರಗುತ್ತಿ ಗ್ರಾಮದ ಪ್ರತಿಯೊಂದು ಮನೆಗಳಿಗೂ ಸಹ ಪ್ರಸಾದ ವಿತರಿಸಲಾಯಿತು.
ಇದನ್ನೂ ಓದಿ: Job Alert: ಇಸ್ರೋದಲ್ಲಿ ಉದ್ಯೋಗ ನಿರ್ವಹಿಸಬೇಕೆ? ಇಲ್ಲಿದೆ ಸುವರ್ಣಾವಕಾಶ
ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಮಾತನಾಡಿ, ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವ ವೈಭವದಿಂದ ಸಂಪನ್ನಗೊಂಡಿದ್ದು, ಈ ಹಿನ್ನಲೆಯಲ್ಲಿ ನಾಡಿನ ಸಮಸ್ತ ಜನತೆಗೆ ಶೀ ರೇಣುಕಾಂಬ ದೇವಿಯು ಸುಖ, ಶಾಂತಿ, ನೆಮ್ಮದಿ, ಮತ್ತು ಆರೋಗ್ಯ, ಆಯಸ್ಸು, ಜೀವನದಲ್ಲಿ ನೀಡಲಿ ಹಾಗೂ ಕಾಲಕ್ಕೆ ತಕ್ಕಂತೆ ಮಳೆ, ಬೆಳೆ, ಆಗಲಿ ಎಂದು ಶ್ರೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ: Shivamogga News: ಜಲಮೂಲದ ಸನಿಹ ಆಚರಿಸುವ ಜಲದಿನ ಹೆಚ್ಚು ಅರ್ಥಪೂರ್ಣ: ಎಂ.ಆರ್.ಪಾಟೀಲ್
ದೇವಸ್ಥಾನದ ಪ್ರಧಾನ ಅರ್ಚಕ ಅರವಿಂದ್ ಭಟ್ ಅವರು ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ದೇವಸ್ಥಾನದ ಸಿಬ್ಬಂದಿಗಳು ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಪ್ರಸಾದ ವಿತರಿಸಿದರು.