ಸಾಗರ: ಸ್ಪರ್ಧೆಗಳು (Competitions) ವಿದ್ಯಾರ್ಥಿಗಳನ್ನು ಹೊಸ ಸಾಧನೆಗೆ (Achievement) ಪ್ರೇರೇಪಿಸುತ್ತವೆ ಎಂದು ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ಬಿ.ಪುಟ್ಟಸ್ವಾಮಿ ಅಭಿಪ್ರಾಯಪಟ್ಟರು.
ತಾಲೂಕಿನ ಎಡಜಿಗಳೇಮನೆ ಇಕ್ಕೇರಿ ವಿದ್ಯಾಸಂಸ್ಥೆಯಲ್ಲಿ ನಡೆಸಿದ ಎಂ. ಎನ್. ದೇವದತ್ ಸ್ಮಾರಕ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಿ ಮಾತನಾಡಿದ ಅವರು, ಈ ರೀತಿ ಸ್ಪರ್ಧೆಗಳನ್ನು ಏರ್ಪಡಿಸಿ, ಬಹುಮಾನ ವಿತರಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಸಮಾಜದ ಪ್ರತಿ ಸಂಘಟನೆ ನಡೆಸಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: ಕನ್ನಡದ ಸಂಗೀತಗಾರ್ತಿ ಡಾ.ಜ್ಯೋತ್ಸ್ನಾ ಶ್ರೀಕಾಂತ್‌ಗೆ ಬ್ರಿಟನ್‌ನ ಅತ್ಯುನ್ನತ ಪ್ರಶಸ್ತಿ
ಕಾರ್ಯಕ್ರಮದಲ್ಲಿ ಸ್ಪರ್ಧೆಯ ಪ್ರಾಯೋಜಕ ಎಂ.ನಾಗರಾಜ್ ಮಾತನಾಡಿದರು. ಇಕ್ಕೇರಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಟಿ. ರತ್ನಾಕರ್ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: Bengaluru Film Festival: ಫೆ.29 ರಿಂದ ಮಾ.7 ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಈ ಸಂದರ್ಭದಲ್ಲಿ ಸರಸ್ವತಿ ನಾಗರಾಜ್, ಇಕ್ಕೇರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ರಜನೀಶ್ ಸಿ, ಜೆ.ಆರ್.ವೆಂಕಟೇಶ್ ಸೇರಿದಂತೆ ಇತರರು ಇದ್ದರು. ದೀಪಕ್ ಪ್ರಾರ್ಥಿಸಿದರು. ಎಸ್.ಜಿ.ಶ್ರೀಕಾಂತ್ ಸ್ವಾಗತಿಸಿದರು. ರಾಮಚಂದ್ರ ಹೆಗಡೆ ನಿರೂಪಿಸಿದರು. ಸಂಕೇತ್ ಹುಲಿಮನೆ ವಂದಿಸಿದರು.