ಸಾಗರ: ಸಾಗರ ಕ್ಷೇತ್ರ ಮಾತ್ರವಲ್ಲದೇ ರಾಜ್ಯವ್ಯಾಪಿ ಕಾಂಗ್ರೆಸ್ (Congress) ಸೇಡಿನ ರಾಜಕಾರಣಕ್ಕೆ ಇಳಿದಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಚ್.ಹಾಲಪ್ಪ ಹರತಾಳು ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಮಂಗಳವಾರ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಹಿನ್ನಲೆಯಲ್ಲಿ ಬಿಜೆಪಿ ವತಿಯಿಂದ ಅಭಿನಂದನೆ ಸ್ವೀಕರಿಸಿ ಬಳಿಕ ಮಾತನಾಡಿದ ಅವರು, ಕ್ಷೇತ್ರವ್ಯಾಪ್ತಿಯಲ್ಲಿ ಬಗರ್‌ಹುಕುಂ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ಕೊಡುವುದು ಸೇರಿದಂತೆ ಅನೇಕ ಜ್ವಲಂತ ಸಮಸ್ಯೆಗಳಿವೆ ಆದರೆ ಶಾಸಕರು ಶಾಲಾ ವಾರ್ಷಿಕೋತ್ಸವದಲ್ಲಿ ಮುಳುಗಿ ಹೋಗಿದ್ದಾರೆ. ಈ ಬಗ್ಗೆ ಜನಜಾಗೃತಿ ಮೂಡಿಸುವ ಜತೆಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿ ಒಟ್ಟಾಗಿ ಪ್ರಯತ್ನ ಮಾಡೋಣ ಎಂದು ಕರೆ ನೀಡಿದರು.
ಇದನ್ನೂ ಓದಿ: ಕನ್ನಡದ ಸಂಗೀತಗಾರ್ತಿ ಡಾ.ಜ್ಯೋತ್ಸ್ನಾ ಶ್ರೀಕಾಂತ್‌ಗೆ ಬ್ರಿಟನ್‌ನ ಅತ್ಯುನ್ನತ ಪ್ರಶಸ್ತಿ
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಕ್ಷೇತ್ರದಲ್ಲಿ ಹೊಸ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ರಾಜ್ಯದಲ್ಲಿ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಹರತಾಳು ಹಾಲಪ್ಪ ಅವರಿಗೆ ಉಪಾಧ್ಯಕ್ಷರಂತಹ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಪಕ್ಷವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಲಾಗುತ್ತದೆ ಎಂದು ಹೇಳಿದರು.
ಬಿಜೆಪಿ ಮಹಿಳಾ ಪ್ರಮುಖರಾದ ಡಾ. ರಾಜನಂದಿನಿ ಕಾಗೋಡು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರತ್ನಾಕರ ಹೊನಗೋಡು ಮಾತನಾಡಿದರು.
ಇದನ್ನೂ ಓದಿ: Bengaluru Film Festival: ಫೆ.29 ರಿಂದ ಮಾ.7 ರವರೆಗೆ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಈ ವೇಳೆ ಮುಖಂಡರಾದ ಲೋಕನಾಥ ಬಿಳಿಸಿರಿ, ಗಣೇಶಪ್ರಸಾದ್, ಮಧುರಾ ಶಿವಾನಂದ್, ಆರ್.ಶ್ರೀನಿವಾಸ್ ಮೇಸ್ತ್ರಿ, ವಿ.ಮಹೇಶ್, ಅರುಣ ಕುಗ್ವೆ, ಸಂತೋಷ್ ಶೇಟ್, ಸತೀಶ್ ಕೆ. ಸೇರಿದಂತೆ ಇನ್ನಿತರರು ಹಾಜರಿದ್ದರು.