ಸೊರಬ: ಕಳೆದ 15 ವರ್ಷಗಳಿಂದ ದಸರಾ ಉತ್ಸವವನ್ನು (Dasara Utsava) ಸರ್ವ ಸಮುದಾಯದವರು ಒಗ್ಗೂಡಿ ಆಚರಣೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಪಿಎಸ್‌ಐ ನಾಗರಾಜ್ ತಿಳಿಸಿದರು.
ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆವರಣದಲ್ಲಿ ದಸರಾ ಉತ್ಸವ ಸಮಿತಿ, ತಾಲೂಕು ಆಡಳಿತ, ಪುರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕ ದಸರಾ ಉತ್ಸವದ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಸ್ತುತ ದಿನಮಾನದಲ್ಲಿ ಸಮಾಜದಲ್ಲಿನ ಕಾನೂನು ಬಾಹಿರ ಚಟುವಟಿಕೆಗಳನ್ನು ತೊಡೆದು ಹಾಕುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರು ಸಂಚಾರಿ ನಿಯಮಗಳನ್ನು ಪಾಲನೆ ಮಾಡಬೇಕು ಎಂದ ಅವರು, ಕಳೆದ 15 ವರ್ಷಗಳಿಂದ ದಸರಾ ಉತ್ಸವವನ್ನು ಸರ್ವ ಸಮುದಾಯದವರು ಒಗ್ಗೂಡಿ ಆಚರಣೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.
ಇದನ್ನೂ ಓದಿ: Sirsi News: ನ.1ರಿಂದ 7 ತಿಂಗಳು ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ ಬಂದ್!
ಪತ್ರಕರ್ತರ ಶ್ರೀಪಾದ ಬಿಚ್ಚುಗತ್ತಿ ಮಾತನಾಡಿ, ಪಟ್ಟಣದಲ್ಲಿ ದಸರಾ ಆಚರಣೆ ಮಾಡುವ ಮೂಲಕ ಅನೇಕ ಸ್ಥಳೀಯ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಈರೇಶ್ ಮೇಸ್ತ್ರಿ ಮಾತನಾಡಿ, ದಸರಾ ಆಚರಣೆಯ ಸಂದರ್ಭದಲ್ಲಿ ನಮ್ಮಲ್ಲಿನ ಕೆಟ್ಟ ಆಲೋಚನೆಗಳನ್ನು ತೊಲಗಿಸಿ, ಸನ್ಮಾರ್ಗದಡೆಗೆ ತೆರಳುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.
ದಸರ ಉತ್ಸವ ಸಮಿತಿ ಅಧ್ಯಕ್ಷ ಜಿ. ಪ್ರಶಾಂತ್ ಮೇಸ್ತ್ರಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಯು.ಎನ್. ಲಕ್ಷ್ಮೀಕಾಂತ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ರಾಜು ಹಿರಿಯಾವಲಿ, ಎಚ್‌ಪಿಆರ್ ನರ್ಸಿಂಗ್ ಪ್ಯಾರಾಮೆಡಿಕಲ್ ಕಾಲೇಜ್ ಪ್ರಾಂಶುಪಾಲ ಎಸ್. ಮಂಜುನಾಥ್, ಎಲ್‌ಎಸ್‌ಜೆ ಐಯ್ಯಂಗಾರ್ ಬೇಕರಿ ಮಾಲಿಕ ಅನಿಲ್ ಸೇರಿದಂತೆ ಇತರರಿದ್ದರು.
ಇದನ್ನೂ ಓದಿ: Navaratri: ಉದ್ಯಾನನಗರಿಯಲ್ಲಿ ಎಲ್ಲೆಡೆ ದಾಂಡಿಯಾ ಮೇನಿಯಾ!
ಸಿರಿಗೌರಿ ಪ್ರಾರ್ಥಿಸಿದರು. ಸಂತೋಷ್ ಸೊಪ್ಪಿನಕೇರಿ ಸ್ವಾಗತಿಸಿದರು. ರಮೇಶ್ ನಿರೂಪಿಸಿದರು. ವಿನೋದ್ ವಾಲ್ಮೀಕಿ ವಂದಿಸಿದರು.