Site icon Vistara News

Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ಕೋಟೆ ಪ್ರದೇಶಕ್ಕೆ ಡಿಸಿ ಡಾ. ಸೆಲ್ವಮಣಿ ಭೇಟಿ

DC dr Selvamani visit the fort area of Sri Renukamba Temple in Chandragutti

ಸೊರಬ: ಚಂದ್ರಗುತ್ತಿಯ (Chandragutti) ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ (Sri Renukamba Temple) ಕೋಟೆಯನ್ನು ಅಭಿವೃದ್ಧಿಪಡಿಸುವಂತೆ ಕೇಂದ್ರ ಪುರಾತತ್ವ ಇಲಾಖೆಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದರು.

ಚಂದ್ರಗುತ್ತಿಯ ಇತಿಹಾಸ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ ಗುಡ್ಡದ ಮೇಲಿರುವ ಏಳು ಸುತ್ತಿನ ಕೋಟೆ ಪ್ರದೇಶಕ್ಕೆ ಭೇಟಿ ನೀಡಿ, ನಂತರ ಅಧಿಕಾರಿಗಳೊಂದಿಗೆ ಮಾತನಾಡಿದರು.

ಇದನ್ನೂ ಓದಿ: Education Department: ಶಾಲಾ ಆವರಣದಲ್ಲಿ ಶಿಕ್ಷಣೇತರ ಚಟುವಟಿಕೆಗೆ ಬ್ರೇಕ್‌; ಶಿಕ್ಷಣ ಇಲಾಖೆ ಸುತ್ತೋಲೆ

ಲಕ್ಷಾಂತರ ಭಕ್ತರನ್ನು ಹೊಂದಿರುವ ಶ್ರೀ ರೇಣುಕಾಂಬ ದೇವಿಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಗಮನ ನೀಡುವ ಜತೆಗೆ ಕೋಟೆಯ ಪ್ರಕೃತಿಗೆ ಧಕ್ಕೆಯಾಗದಂತೆ ಕ್ರಮಕೈಗೊಳ್ಳುವ ಅವಶ್ಯಕತೆ ಇದೆ. ಕದಂಬರ ಕಾಲದಲ್ಲಿ ಪ್ರಸಿದ್ಧಿ ಪಡೆದಂತಹ ಐತಿಹಾಸಿಕ ಕೋಟೆಯ ಸಂರಕ್ಷಣೆಗೆ ಸ್ಥಳೀಯವಾಗಿ ಮುಂದಾಗಲು ಪುರಾತತ್ವ ಇಲಾಖೆಯ ನಿಯಮಗಳು ಅಡ್ಡಿಯಾಗುವುದರಿಂದ ಇಲಾಖೆಯ ಒಪ್ಪಿಗೆ ಪಡೆಯುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪುರಾತತ್ವ ಇಲಾಖೆಗೆ ಮಾಹಿತಿ ನೀಡುವಂತೆ ತಾಲೂಕು ಆಡಳಿತಕ್ಕೆ ಸೂಚಿಸಿದರು.

ಇದನ್ನೂ ಓದಿ: IND vs SA 2nd T20: ಮಳೆ ಭೀತಿಯಲ್ಲಿ ಆಡಲು ಸಜ್ಜಾದ ಭಾರತ-ದಕ್ಷಿಣ ಆಫ್ರಿಕಾ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಡಿವೈಎಸ್ ಪಿ ಶಿವಾನಂದ ಮದರಕಂಡಿ, ಪಿಎಸ್ಐ ನಾಗರಾಜ್, ರಾಜು ರೆಡ್ಡಿ ಅಗಸೆ, ವಲಯ ಸಂರಕ್ಷಣಾಧಿಕಾರಿ ಯೋಗೇಶ್, ಶ್ರೀ ರೇಣುಕಾಂಬ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್ ಶಿವಪ್ರಸಾದ್ ಸೇರಿದಂತೆ ಕಂದಾಯ ಅಧಿಕಾರಿಗಳು ಇದ್ದರು.

Exit mobile version