ಶಿವಮೊಗ್ಗ
Shivamogga News: ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು
Shivamogga News: ಕಾಲುಜಾರಿ ಕೆರೆಗೆ ಬಿದ್ದು ರೈತ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಆನಂದಪುರದ ತಾವರೆಹಳ್ಳಿಯಲ್ಲಿ ಸೋಮವಾರ ಜರುಗಿದೆ.
ಸಾಗರ: ಕಾಲುಜಾರಿ ಕೆರೆಗೆ (Lake) ಬಿದ್ದು ರೈತ (Farmer) ಮೃತಪಟ್ಟಿರುವ ಘಟನೆ ತಾಲೂಕಿನ ಆನಂದಪುರದ ತಾವರೆಹಳ್ಳಿಯಲ್ಲಿ ಸೋಮವಾರ ಜರುಗಿದೆ.
ಸತೀಶ್ ಗೌಡ (51) ಮೃತ ರೈತ. ಇವರು ತಮ್ಮ ಮಗ ಚೇತನ್ ಜತೆ ಎಮ್ಮೆಯನ್ನು ಹುಡುಕಿಕೊಂಡು ಕೆರೆ ದಂಡೆಯ ಮೇಲೆ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿದ್ದಾರೆ.
ತಕ್ಷಣ ಚೇತನ್ ಅಕ್ಕಪಕ್ಕದವರ ಸಹಾಯ ಕೋರಿದ್ದಾನೆ. ಸ್ಥಳೀಯರು ಬಂದು ರಕ್ಷಣೆ ಮಾಡಿ ಸತೀಶ್ ಗೌಡ ಅವರನ್ನು ಮೇಲೆತ್ತಿ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಆಸ್ಪತ್ರೆಗೆ ಕರೆತರುವಷ್ಟರಲ್ಲಿ ರೈತ ಸತೀಶ್ ಗೌಡ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಈ ಕುರಿತು ಚೇತನ್ ನೀಡಿದ ದೂರನ್ನು ದಾಖಲಿಸಿಕೊಂಡ ಆನಂದಪುರ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಉಡುಪಿ
Weather report : ಇನ್ನೆರಡು ದಿನ ಉತ್ತರ ಕರ್ನಾಟಕದ 7 ಜಿಲ್ಲೆ ಸೇರಿ ಕರಾವಳಿಯಲ್ಲಿ ಭಾರಿ ಮಳೆ
Weather report : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರು: ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಈ ಭಾಗದಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ನೀಡಿದೆ. ಇದಲ್ಲದೆ, ಕರಾವಳಿ ಜಿಲ್ಲೆಗಳಲ್ಲಿ ಸಹ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Weather report) ಹೇಳಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ಇದನ್ನೂ ಓದಿ: Mandya Accident: ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಕಾರು; ನಾಲ್ವರು ಸ್ಥಳದಲ್ಲೇ ದುರ್ಮರಣ
ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ
ಬುಧವಾರ (ಸೆ. 27) ಮತ್ತು ಗುರುವಾರ (ಸೆ. 28) ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಹೇಳಿದೆ. ಉಳಿದ ಭಾಗಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಬೀಳಬಹುದು ಎಂದು ಅಂದಾಜಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ. ಹೆಚ್ಚಿನ ಸಮಯ ಮೋಡ ಕವಿದ ವಾತಾವರಣ ಇರಲಿದೆ.
ಮಲೆನಾಡಲ್ಲೂ ಸಣ್ಣ ಮಳೆ
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಬಾರಿ ಭಾರಿ ಪ್ರಮಾಣದ ಮಳೆಯ ನಿರೀಕ್ಷೆ ಮಾಡುವಂತಿಲ್ಲ. ಇಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನೂ ಓದಿ: Elephant Attack : ಹಾಲು ತರಲು ಹೋಗುತ್ತಿದ್ದ ವೃದ್ಧನ ಬೆನ್ನಟ್ಟಿ ದಾಳಿ ಮಾಡಿದ ಕಾಡಾನೆ ಹಿಂಡು, ಗಂಭೀರ ಗಾಯ
ಬೆಂಗಳೂರಿನಲ್ಲಿ ರಾತ್ರಿ ಮಳೆ ಭರ್ಜರಿ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮತ್ತು ಗುರುವಾರ ಬೆಳಗ್ಗೆ ಹೆಚ್ಚಿನ ಸಮಯ ಬಿಸಿಲಿದ್ದರೂ ನಂತರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಸಂಜೆ ಅಥವಾ ರಾತ್ರಿಯಂದು ಭಾರಿ ಪ್ರಮಾಣದ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಹೀಗಾಗಿ ಸಂಜೆ ವೇಳೆಗೆ ಪ್ರಯಾಣ ಮಾಡುವವರು ಸೂಕ್ತ ತಯಾರಿ ಮಾಡಿಕೊಂಡಿರಲು ಸೂಚಿಸಲಾಗಿದೆ. ಇನ್ನು ಮಳೆ ವೇಳೆ ಸಂಚಾರ ದಟ್ಟಣೆ ಹೆಚ್ಚುವ ಸಂಭವವೂ ಇದೆ. ಗರಿಷ್ಠ ಉಷ್ಣಾಂಶ 30 ಡಿಗ್ರ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಶಿವಮೊಗ್ಗ
Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ
Death News: ಸೊರಬ ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ(80) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಸೊರಬ: ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ (80) ಮಂಗಳವಾರ ಬೆಳಿಗ್ಗೆ ನಿಧನರಾದರು. (Death News)
ಕೇವಲ ನಾಲ್ಕನೇ ತರಗತಿ ಓದಿ, ಸಂಸ್ಕೃತ, ಇಂಗ್ಲೀಷ್, ಕನ್ನಡ ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದ ಅವರು ತಮ್ಮ ಇಳಿ ವಯಸ್ಸಿನಲ್ಲಿ ಮೂರು ಕೃತಿಗಳನ್ನು ರಚಿಸಿದ್ದರು.
ಕಾವ್ಯಗಳನ್ನು ರಾಗದ ಮೂಲಕ ರಚಿಸಿ ಮನ್ನಣೆ ಪಡೆದ ಅವರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ದಕ್ಷಿಣ ಭಾರತ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತ್ತು.
ಇವರ ವಯೋಸಹಜ ನಿಧನಕ್ಕೆ ಅಭಾಸಾಪ ಸೇರಿದಂತೆ ತಾಲ್ಲೂಕು ಕನ್ನಡ ಸಾಂಸ್ಕೃತಿಕ ಜಗಲಿ, ಕಸಾಪ, ಕಜಾಪ, ಕಸಾಸಾಂವೇ ಸಾಹಿತ್ಯ ಘಟಕಗಳು ಕಂಬನಿ ಮಿಡಿದಿವೆ.
ಶಿವಮೊಗ್ಗ
Shivamogga News: ಹೊಸ ಕಲ್ಲುಕ್ವಾರಿಗೆ ಅವಕಾಶ ನೀಡದಂತೆ ಒತ್ತಾಯ; ಶಾಸಕ, ಉಪವಿಭಾಗಾಧಿಕಾರಿಗೆ ಮನವಿ
Shivamogga News: ಸಾಗರ ತಾಲೂಕಿನ ಇರುವಕ್ಕಿ ಆಸುಪಾಸು ಹೊಸ ಕಲ್ಲುಕ್ವಾರಿಗೆ ಅವಕಾಶ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸಾಗರ: ತಾಲೂಕಿನ ಇರುವಕ್ಕಿ ಆಸುಪಾಸು ಹೊಸ ಕಲ್ಲುಕ್ವಾರಿಗೆ ಅವಕಾಶ ನೀಡದಂತೆ ಗ್ರಾಮಸ್ಥರು (Villagers) ಶಾಸಕ ಗೋಪಾಲಕೃಷ್ಣ ಬೇಳೂರು (MLA Gopalakrishna Belur) ಅವರಿಗೆ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಇರುವಕ್ಕಿ ಗ್ರಾಮದ ಸ.ನಂ. 30 ಮತ್ತು 31ರಲ್ಲಿ ಹೊಸ ಕಲ್ಲುಕ್ವಾರೆ ಪ್ರಾರಂಭಿಸುವ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಕಲ್ಲುಕ್ವಾರಿಗೆ ಪ್ರಸ್ತಾಪಿಸಿರುವ ಜಾಗದ ವ್ಯಾಪ್ತಿಯಲ್ಲಿಯೇ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಬರುತ್ತದೆ. ಶರಾವತಿ ನದಿಯ ಉಪನದಿಯ ದಂಡೆ ಇದಾಗಿದ್ದು, ಕೃಷಿಗೆ ನೀರು ಪೂರೈಕೆ ಈ ಉಪ ನದಿಯಿಂದ ಆಗುತ್ತಿರುತ್ತದೆ. ಇಂತಹ ಜಾಗದ 500 ಮೀಟರ್ ಅಂತರದಲ್ಲಿ ಮನೆ, ಕೃಷಿ ಜಮೀನು, ತೋಟ ಇರುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Benefits Of Ajwain: ಅಜವಾನವೆಂಬ ಘಾಟುಮದ್ದಿನ ಬಗ್ಗೆ ನಿಮಗೆ ಗೊತ್ತಿದೆಯೆ?
ಈ ಜಾಗದಲ್ಲಿ ಕಲ್ಲುಕ್ವಾರಿ ಮಾಡಿದರೆ ಪರಿಸರ ನಾಶದ ಜತೆಗೆ ನೀರು ಮಲಿನವಾಗುತ್ತದೆ. ಅಕ್ಕಪಕ್ಕದ ನಿವಾಸಿಗಳಿಗೆ ಸಹ ವಾಯು ಮಾಲಿನ್ಯದಿಂದ ಬದುಕಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗುತ್ತದೆ. ಆದ್ದರಿಂದ ಯಾವುದೇ ಕಾರಣಕ್ಕೂ ಇಲ್ಲಿ ಹೊಸದಾಗಿ ಕಲ್ಲುಕ್ವಾರಿ ಮಾಡಲು ಅವಕಾಶ ನೀಡಬಾರದು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಇದನ್ನೂ ಓದಿ: Namma Metro : ಮೆಟ್ರೋಗೆ ಚೀನಾದಿಂದ ಬರಲಿದೆ 12 ಬೋಗಿ; 2024ಕ್ಕೆ ಚಾಲಕ ರಹಿತ ಓಡಾಟ
ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಮೇಘರಾಜ ಎಸ್., ಮೆಡಿಕಲ್ ಮಂಜುನಾಥ್, ಜಗದೀಶ್, ಪ್ರಶಾಂತ್, ಸತೀಶ್, ಲೋಕೇಶ್, ಗಣಪತಿ, ಜ್ಞಾನೇಶ್, ಸೋಮಶೇಖರ್, ಸಂತೋಷ್ ಇನ್ನಿತರರು ಹಾಜರಿದ್ದರು.
ಉಡುಪಿ
Weather report : ಉತ್ತರ, ಕರಾವಳಿಯಲ್ಲಿ ಮಳೆಗೆ ಬಲ; ದಕ್ಷಿಣದಲ್ಲಿ ದುರ್ಬಲ
Rain News : ರಾಜ್ಯದಲ್ಲಿ ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಐಎಂಡಿ ಯೆಲ್ಲೋ ಅಲರ್ಟ್ (Weather report) ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಜತೆಗೆ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ.
ದಕ್ಷಿಣ ಒಳನಾಡಲ್ಲಿ ತಗ್ಗಿದ ಮಳೆ
ಸೆ. 27ರಂದು ದಕ್ಷಿಣ ಒಳನಾಡಿನ ಕೋಲಾರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಸಣ್ಣ ಮಳೆ ಬೀಳಬಹುದು. ಉತ್ತರ ಒಳನಾಡಿನ ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆ ಇರಿಲಿದೆ.
ಮಲೆನಾಡಲ್ಲೂ ಸಣ್ಣ ಮಳೆ
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದರೆ, ಮಧ್ಯಾಹ್ನ ಬಿಸಿಲಿನಿಂದ ಕೂಡಿರುತ್ತದೆ. ಸಂಜೆ ಅಥವಾ ರಾತ್ರಿಯಂದು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Cauvery water dispute : ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ
ರಾಜ್ಯದಲ್ಲಿ ಸೆ. 25ರಂದು ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದ್ದು, ಉತ್ತರ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ತೊಂಡೇಭಾವಿ 5 ಸೆಂ.ಮೀ, ಗೋಕರ್ಣ, ಸಿಂದಗಿ, ಬೀದರ್, ಕಂಪ್ಲಿಯಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.
ಹೊನಾವರ, ಆಳಂದ, ಕುಕನೂರು, ಮಾನ್ವಿ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಹೆಬ್ಬೂರಲ್ಲಿ ತಲಾ 3, ಕುಮಟಾ, ತಾಳಿಕೋಟೆ , ಫರಹತಾಬಾದ್, ಚಿಂಚೋಳಿ , ಕೆಂಭಾವಿ, ಬೆಂಗಳೂರು ಸಿಟಿ ಗೌರಿಬಿದನೂರು , ಕುರುಗೋಡು ಸೇರಿದಂತೆ ದೊಡ್ಡಬಳ್ಳಾಪುರದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಪುತ್ತೂರು, ಮಂಗಳೂರು , ಮಂಗಳೂರು ವಿಮಾನ ನಿಲ್ದಾಣ, ಅಂಕೋಲಾ, ಇಳಕಲ್, ನಿರ್ಣಾ , ಕಲಬುರ್ಗಿ, ಮಹಾಗೋನ್, ಗುಂಡಗುರ್ತಿ , ಶಹಪುರ, ಶೋರಾಪುರ ಕಕ್ಕೇರಿ, ಗಂಗಾವತಿ, ದೇವರಹಿಪ್ಪರಗಿ, ಇಂಡಿ , ಕುಡತಿನಿ, ಹೊಸಪೇಟೆ, ಬೆಂಗಳೂರು ಕೆಐಎಎಲ್ ತಲಾ 1 ಸೆಂ.ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
-
ದೇಶ13 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ21 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ15 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್20 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ21 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್18 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್