Site icon Vistara News

Shivamogga News: ಸೊರಬ ಪಟ್ಟಣದಲ್ಲಿ ಗಾಂಧಿ ಜಯಂತಿ ಆಚರಣೆ; ಸ್ವಚ್ಛತಾ ಕಾರ್ಯಕ್ರಮ

Gandhi Jayanti celebration at Soraba JMFC court premises

ಸೊರಬ: ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ (Gandhi Jayanti) ಆಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಭಾಕರ ರಾವ್, ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಮುಖ ಮುಂಚೂಣಿ ವಹಿಸುವುದರ ಜತೆಗೆ ತಮ್ಮ ಜೀವನದ ಮೂಲಕವೇ ಉತ್ತಮ ಸಮಾಜ ನಿರ್ಮಾಣಕ್ಕೆ ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Weather Forecast : ನಾಳೆ ದಕ್ಷಿಣದಲ್ಲಿ ದುರ್ಬಲ; ಉತ್ತರ, ಕರಾವಳಿಯಲ್ಲಿ ಸಾಮಾನ್ಯ ಮಳೆ

ಸಂವಿಧಾನದ ಆಶಯಗಳನ್ನು ಈಡೇರಿಸುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಿದೆ. ನಮ್ಮ ಕರ್ತವ್ಯಗಳನ್ನು ನಿಷ್ಠೆಯಿಂದ ಮಾಡಿದಾಗ ದೇಶವು ಮುನ್ನೆಡೆ ಸಾಧಿಸಲು ಸಾಧ್ಯವಿದೆ ಎಂದರು.

ಹಿರಿಯ ವಕೀಲ ಎಂ.ಆರ್. ಪಾಟೀಲ್ ಮಾತನಾಡಿ, ಸತ್ಯ ಮತ್ತು ಅಹಿಂಸೆಯ ಮೂಲಕ ಪ್ರಾಮಾಣಿಕವಾಗಿ ಕರ್ತವ್ಯವನ್ನು ನಿಭಾಯಿಸಬೇಕು. ಮಹಾತ್ಮ ಗಾಂಧೀಜಿ ಅವರು ಕಂಡ ರಾಮ ರಾಜ್ಯದ ಕನಸು ನನಸಾಗಲು ಅವರ ಸರಳ ಜೀವನ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ನಂತರ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಧೀಶರು ಹಾಗೂ ಸಿಬ್ಬಂದಿ, ವಕೀಲರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಇದನ್ನೂ ಓದಿ: ICC World Cup 2023 : ವಿಶ್ವ ಕಪ್​ ಉದ್ಘಾಟನಾ ಸಮಾರಂಭದಲ್ಲಿ ಏನೇನಿರುತ್ತವೆ? ಇಲ್ಲಿದೆ ಎಲ್ಲ ವಿವರ

ಈ ಸಂದರ್ಭದಲ್ಲಿ ಜೆಎಂಎಫ್‌ಸಿ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಉಪಾಧ್ಯಾಯ, ವಕೀಲರ ಸಂಘದ ಅಧ್ಯಕ್ಷ ಸಿ.ವೈ. ಆಶೋಕ್, ಉಪಾಧ್ಯಕ್ಷೆ ಮಂಜುಳಾ, ಕಾರ್ಯದರ್ಶಿ ಅರುಣ್ ಕುಮಾರ್, ಖಜಾಂಚಿ ಗೋಪಾಲ, ವಕೀಲರಾದ ಎಂ.ಆರ್. ಪಾಟೀಲ್, ಎಂ. ನಾಗಪ್ಪ, ರುಕ್ಮಾಂಗಧರಪ್ಪ, ಸುಧಾಕರ ನಾಯ್ಕ್, ರಾಮಪ್ಪ, ಆನಂದ, ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಹಾಗೂ ವಕೀಲರು ಉಪಸ್ಥಿತರರಿದ್ದರು.

Exit mobile version