ರಿಪ್ಪನ್‌ಪೇಟೆ: ವಿದ್ಯಾರ್ಥಿಗಳ (Students) ಶೈಕ್ಷಣಿಕ ಪ್ರಗತಿಗೆ (Educational Progress) ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅದರ ಸದುಪಯೋಗವನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವುದರ ಮೂಲಕ ಅವರುಗಳು ಶೈಕ್ಷಣಿಕ ಅಭಿವೃದ್ಧಿಗೆ ಪ್ರೇರೇಪಣೆ ನೀಡಬೇಕು. ಆಗ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದು ಉನ್ನತ ಉದ್ಯೋಗಗಳನ್ನು ಅಲಂಕರಿಸಿ ಸಮಾಜದ ಮುಖ್ಯ ವಾಹಿನಿಗೆ ಬರಲು ಸಹಕಾರಿಯಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ: Asian Games 2023: ಕೇವಲ ಒಂದು ಅಂಕದ ಅಂತರದಲ್ಲಿ ವಿಷ್ಣುಗೆ ಕೈತಪ್ಪಿದ ಬೆಳ್ಳಿ ಪದಕ
ನಾನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು, ಕಾಲೇಜಿಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿಯನ್ನು ಕೊಡಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಾಲಿಬಾಲ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೌರವಿಸಿ, ಅಭಿನಂದಿಸಿದರು.
ಸಭೆಯಲ್ಲಿ ಕಾಲೇಜಿನ ಪ್ರಾಚಾರ್ಯ ಎ. ಮಂಜುನಾಥ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಿ.ಆರ್. ಗೋಪಾಲಕೃಷ್ಣ, ಸದಸ್ಯರುಗಳಾದ ಮಹಮ್ಮದ್ ರಫಿ, ನಾಗಪ್ಪ ಕಟ್ಟೆ,ಲೇಖನ, ಬೋರಪ್ಪ, ಷಣ್ಮುಖ, ಕಾಲೇಜಿನ ಹಿರಿಯ ಉಪನ್ಯಾಸಕಿ ಗೋಪಿಕಾ ಇನ್ನಿತರರಿದ್ದರು.
ಇದನ್ನೂ ಓದಿ: BYJU’s Layoffs: ಮತ್ತೆ 5500 ಉದ್ಯೋಗ ಕಡಿತಕ್ಕೆ ಮುಂದಾದ ಬೈಜೂಸ್ ಕಂಪನಿ
ಉಪನ್ಯಾಸಕರಾದ ಸಭಾಸ್ಟಿನ್ ಸ್ವಾಗತಿಸಿದರು. ಅಂಬಿಕಾ ಸಾಗರ್ ನಿರೂಪಿಸಿದರು. ಜನಾರ್ಧನ್ . ಬಿ.ನಾಯಕ್ ವಂದಿಸಿದರು.