ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ಶನಿವಾರ (Shivamogga News) ಜರುಗಿತು.
ಕಾರ್ಯಕ್ರಮವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರೊಂದಿಗೆ ಶಿಸ್ತು ಸಂಯಮವನ್ನು ಕಲಿಸುವ ಮೂಲಕ ಉಪನ್ಯಾಸಕರು ಮತ್ತು ಪೋಷಕರು ಗಮನಹರಿಸಬೇಕು. ಭವಿಷ್ಯದಲ್ಲಿ ದೇಶದ ನಾಯಕರಾಗುವಂತೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Australian Open 2024: ಐತಿಹಾಸಿಕ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಗೆದ್ದ ಕನ್ನಡಿಗ ರೋಹನ್ ಬೋಪಣ್ಣ
ಇದೇ ಸಂದರ್ಭದಲ್ಲಿ ಕಳೆದ ವರ್ಷದಲ್ಲಿ ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಗೌರವಿಸಿ, ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎ. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: Curd In Winter: ಚಳಿಗಾಲದಲ್ಲಿ ಮೊಸರು ಬಳಸಬಹುದೇ?
ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜಿನ ಜಿಲ್ಲಾ ಉಪನಿರ್ದೇಶಕ ಬಿ.ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷ ಸುದೀಂದ್ರ ಪೂಜಾರಿ, ಸಿಡಿಸಿ ಸಮಿತಿಯ ಉಪಾಧ್ಯಕ್ಷ ಜಿ.ಆರ್.ಗೋಪಾಲಕೃಷ್ಣ, ಗ್ರಾಮ ಪಂಚಾಯಿತಿ ಸದಸ್ಯರಾದ ಗಣಪತಿ, ವಿನೋದ, ಅಶ್ವಿನಿ, ಸುಂದರೇಶ್, ಆಶೀಫ್, ಡಿ.ಈ. ಮಧುಸೂದನ್, ಪ್ರಕಾಶ ಪಾಲೇಕರ್ ಹಾಗೂ ರಫಿ, ನಾಗಪ್ಪಕಟ್ಟೆ, ಬೂದ್ಯಪ್ಪ, ಷಣ್ಮುಖ, ಲೇಖನ ಸೇರಿದಂತೆ ಇತರರು ಉಪಸ್ಥಿತರಿದ್ದರು.