ಸೊರಬ: ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಪೋಷಕರು ಸ್ವಚ್ಛತೆಯತ್ತ ಹೆಚ್ಚು ಹೆಚ್ಚು ಗಮನ ಕೊಡಬೇಕು ಎಂದು ಮಲೆನಾಡ ಸಿರಿ ಸೇವಾ ಬಳಗದ ರಾಜು ಹಿರಿಯಾವಲಿ (Shivamogga News) ತಿಳಿಸಿದರು.
ತಾಲೂಕಿನ ಕುಂದಗಸವಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಶುಕ್ರವಾರ ವಾಟರ್ ಫಿಲ್ಟರ್ ಕೊಡುಗೆಯಾಗಿ ನೀಡಿ, ಬಳಿಕ ಅವರು ಮಾತನಾಡಿದರು.
ಮಕ್ಕಳಿಗೆ ಮೂಲಭೂತ ಸೌಕರ್ಯಗಳಲ್ಲಿ ಶುದ್ಧ ಕುಡಿಯುವ ನೀರು ಸಹ ಒಂದಾಗಿದೆ. ಶುದ್ಧ ನೀರು ಕುಡಿಯುವುದರಿಂದ ಬಹಳಷ್ಟು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು, ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ತಾಲೂಕಿನ ಸುಮಾರು 50 ಶಾಲೆಗಳಿಗೆ ವಾಟರ್ ಫಿಲ್ಟರ್ ಒದಗಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದರು.
ಇದನ್ನೂ ಓದಿ: Uttara Kannada News: ರೈತ ಯುವಕರು, ವಿಕಲಚೇತನರ ವಿವಾಹಕ್ಕೆ ಉ.ಕ ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ!
ಮಕ್ಕಳು ಮತ್ತು ಶಿಕ್ಷಕರು ಶಾಲಾ ಆವರಣದಲ್ಲಿ ಪ್ಲಾಸ್ಟಿಕ್ ಇನ್ನಿತರೆ ಪೊಟರೆಗಳಲ್ಲಿ ಸಂಗ್ರಹವಾಗದಂತೆ ನೋಡಿಕೊಂಡಲ್ಲಿ ಮಳೆಗಾಲದಂತಹ ಈ ದಿನಗಳಲ್ಲಿ ಸೊಳ್ಳೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು ಎಂದ ಅವರು, ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳಿಗೆ ಸ್ವಚ್ಛತೆಯ ಬಗ್ಗೆ ಶೈಕ್ಷಣಿಕ ಪ್ರಜ್ಞೆ ಬೆಳೆಸಿದಲ್ಲಿ ಸ್ವಚ್ಛ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದಂತಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಎಂ.ಎಲ್. ನೋಪಿ ಶಂಕರ್ ಅಧ್ಯಕ್ಷತೆ ವಹಿಸಿ, ಮಾತನಾಡಿದರು.
ಇದನ್ನೂ ಓದಿ: HDFC Life: ‘ಕೆಲಸ ಮಾಡಲು ಅತ್ಯುತ್ತಮವಾಗಿರುವ ಭಾರತದ ಕಂಪನಿ’ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಲೈಫ್
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ವೈ. ಗೌರಮ್ಮ, ಸಹ ಶಿಕ್ಷಕ ಅಶೋಕ್, ಪ್ರಮುಖರಾದ ಎಂ.ಎಚ್. ಗಣೇಶ್, ಸಂತೋಷ್, ಶ್ರೀಕಾಂತ್, ಸೃಜನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.