ಶಿವಮೊಗ್ಗ
Shivamogga News: ರಿಪ್ಪನ್‌ಪೇಟೆಯಲ್ಲಿ ಸಡಗರ ಸಂಭ್ರಮದಿಂದ ಗೌರಿ-ಗಣೇಶ ಹಬ್ಬ ಆಚರಣೆ
Shivamogga News: ರಿಪ್ಪನ್‌ಪೇಟೆ ಪಟ್ಟಣದಲ್ಲಿ ಸೋಮವಾರ ಗೌರಿ-ಗಣೇಶ ಹಬ್ಬವನ್ನು ಶ್ರದ್ಧಾ ಭಕ್ತಿ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ರಿಪ್ಪನ್‌ಪೇಟೆ: ಪಟ್ಟಣದಲ್ಲಿ ಸೋಮವಾರ ಗೌರಿ-ಗಣೇಶ ಹಬ್ಬವನ್ನು (Gowri-Ganesha festival) ಶ್ರದ್ಧಾ ಭಕ್ತಿ ಹಾಗೂ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಗೌರಿ ಹಾಗೂ ಗಣೇಶ ಹಬ್ಬಗಳು ಒಂದೇ ದಿನ ಬಂದ ಹಿನ್ನೆಲೆಯಲ್ಲಿ ಗೌರಿಯನ್ನು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಚಂದ್ರಶೇಖರ್ ಭಟ್ ಮತ್ತು ಗುರುರಾಜ ಭಟ್ ನೇತೃತ್ವದಲ್ಲಿ ಮುತ್ತೈದೆಯರು ಗೌರಿಯನ್ನು ಶ್ರದ್ದಾಭಕ್ತಿಯಿಂದ ತರುವುದರೊಂದಿಗೆ ಪ್ರತಿಷ್ಠಾಪನಾ ಪೂಜೆಯೊಂದಿಗೆ ಸಂಭ್ರಮದೊಂದಿಗೆ ಜರುಗಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಸಮಿತಿಯ ಅಧ್ಯಕ್ಷ ಈಶ್ವರ ಶೆಟ್ಟಿ ಮತ್ತು ಪದಾಧಿಕಾರಿಗಳಾದ ಎನ್. ಸತೀಶ್, ಎಂ.ಡಿ. ಇಂದ್ರಮ್ಮ, ಸರಸ್ವತಿ, ವನಮಾಲ, ಜಯಲಕ್ಷ್ಮಿ, ಗಣೇಶ್ ಕಾಮತ್ , ಇನ್ನಿತರರು ಪಾಲ್ಗೊಂಡು ಗೌರಿ ಪೂಜೆಯಲ್ಲಿ ಮುತ್ತೈದೆಯರಿಗೆ ಉಡಿ ತುಂಬಿ ಸಂಭ್ರಮಿಸಿದರು.
ಇದನ್ನೂ ಓದಿ: Gold Rate Today: ಹಬ್ಬದ ದಿನವೇ ಬೆಂಗಳೂರಿನಲ್ಲಿ ಚಿನ್ನದ ಬೆಲೆ ಏರಿಕೆ; ಇಂದಿನ ಬೆಲೆ ಇಷ್ಟು
ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 56 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಗಣೇಶ ಮೂರ್ತಿಯನ್ನು ಸಮಿತಿಯವರು ಮೆರವಣಿಗೆ ಮೂಲಕ ಕರೆತರುವ ಮೂಲಕ ವಿನಾಯಕ ವೃತ್ತದಲ್ಲಿ ಹಿಂದೂ ಭಗವಧ್ವಜವನ್ನು ಹಾರಿಸಿ ಗಣಪತಿ ದೇವಸ್ಥಾನದ ಹಿಂಭಾಗದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ ಮಂಟಪದಲ್ಲಿ ಪ್ರತಿಷ್ಟಾಪನಾ ಪೂಜೆ ನೆರವೇರಿಸಲಾಯಿತು.
ಹಿಂದೂ ಭಗವಧ್ವಜವನ್ನು ನಿವೃತ್ತ ಸೇನಾನಿ ವೀರಭದ್ರಪ್ಪ ದ್ವಜಾರೋಹಣ ಮಾಡಿದರು.
ಇದನ್ನೂ ಓದಿ: Narendra Modi: ಜನ್ಮದಿನದಂದು ಮೆಟ್ರೋದಲ್ಲಿ ಮೋದಿ ಸಂಚಾರ; ಸಂಸ್ಕೃತದಲ್ಲಿ ಶುಭಕೋರಿದ ಯುವತಿ
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ನಾಗರಾಜ ಪವಾರ್, ಎನ್.ಸತೀಶ್, ಎಂ.ಬಿ. ಮಂಜುನಾಥ್, ಮಂಜುನಾಥ, ಎಂ .ಸುರೇಶ್‌ಸಿಂಗ್, ಆರ್. ರಾಘವೇಂದ್ರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುದೀಂದ್ರಪೂಜಾರಿ, ಹಿಂದೂ ಮಹಾಸಭಾದ ರಾಘು, ಯೋಗೇಶ್, ಡಿ.ಈ. ನಾಗಭೂಷಣ, ವೀರಭದ್ರಪ್ಪಗೌಡ, ವೈ.ಜೆ.ಕೃಷ್ಣ, ಭಾಸ್ಕರ್ ಶೆಟ್ಟಿ, ಬೇಕರಿ ನಾರಾಯಣ, ವೈ.ಜೆ.ಭಾಸ್ಕರ್, ಕೃಷ್ಣೋಜಿರಾವ್, ಶ್ರೀನಿವಾಸ್ ಅಚಾರ್, ಆರ್.ಎನ್. ಮಂಜುನಾಥ್ ಆಶೋಕಹಾಲುಗುಡ್ಡೆ ಮತ್ತು ಇತರರು ಪಾಲ್ಗೊಂಡಿದ್ದರು.
ಶಿವಮೊಗ್ಗ
Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ
Shivamogga News: ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೊರಬ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ 2ನೇ ವರ್ಷದ ಹಿಂದೂ ಮಹಾಸಭಾ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿದ್ದು, ಈ ಹಿನ್ನಲೆ ಸೆ.23 ರಿಂದ 30 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉತ್ಸವ ಸಮಿತಿಯ ಗೌರವಾಧ್ಯಕ್ಷ ಸಂಜೀವ ಆಚಾರ್ ತಿಳಿಸಿದ್ದಾರೆ.
ಸೊರಬ: ವಿಶ್ವ ಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ 2ನೇ ವರ್ಷದ ಹಿಂದೂ ಮಹಾಸಭಾ ಗಣಪತಿಯನ್ನು (Hindu Mahasabha Ganapati) ಪ್ರತಿಷ್ಠಾಪಿಸಲಾಗಿದ್ದು, ಈ ಹಿನ್ನಲೆಯಲ್ಲಿ ಸೆ.23 ರಿಂದ 30 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ (Cultural Programme) ಹಮ್ಮಿಕೊಳ್ಳಲಾಗಿದೆ ಎಂದು ಉತ್ಸವ ಸಮಿತಿಯ ಗೌರವಾಧ್ಯಕ್ಷ ಸಂಜೀವ ಆಚಾರ್ ಹೇಳಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದೂ ಸಮಾಜವನ್ನು ಒಗ್ಗೂಡಿಸಲು ಹಾಗೂ ಯುವಕ ಜನತೆಯಲ್ಲಿ ಧರ್ಮ ಜಾಗೃತಿ ಮೂಡಿಸುವ ಕೆಲಸವನ್ನು ವಿಹಿಂಪ ಮತ್ತು ಬಜರಂಗದಳ ಮಾಡುವಲ್ಲಿ ಸದಾ ನಿರತವಾಗಿದೆ. ಗಣೇಶೋತ್ಸವ ಪ್ರಯುಕ್ತ ಸೆ.23 ರಂದು ಸಂಜೆ 6ಕ್ಕೆ ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ, ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧಾರ್ಮಿಕ ಸಭೆ ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಇದನ್ನೂ ಓದಿ: Power Generation: ರಾಜ್ಯದ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಕುಸಿದಿರುವುದು ಏಕೆ: ಅಧಿಕಾರಿಗಳಿಗೆ ಸಿಎಂ ಪ್ರಶ್ನೆ
ಸೆ. 24ರಂದು ಮಧ್ಯಾಹ್ನ 3ಕ್ಕೆ 10 ವರ್ಷದೊಳಗಿನ ಮಕ್ಕಳಿಗೆ ರಾಧ ಕೃಷ್ಣ ವೇಷ ಕಾರ್ಯಕ್ರಮ, ಸಂಜೆ 6ಕ್ಕೆ ಜಡೆ ಸಂಸ್ಥಾನ ಮಠದ ಶ್ರೀ ಡಾ. ಮಹಾಂತ ಸ್ವಾಮೀಜಿ, ಜಡೆ ಹಿರೇಮಠದ ಶ್ರೀ ಘನಬಸವ ಅಮರೇಶ್ವರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧಾರ್ಮಿಕ ಸಭೆ, ರಾತ್ರಿ 8ಕ್ಕೆ ಭಜನ ಕಾಯಕ್ರಮ ನಡೆಯಲಿದೆ. ಸೆ. 26ರಂದು ಮಧ್ಯಾಹ್ನ 1ಕ್ಕೆ ಶೌರ್ಯ ಜಾಗೃತ ರಥಯಾತ್ರೆಯು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‍ನಿಂದ ಶ್ರೀ ರಂಗನಾಥ ದೇವಸ್ಥಾನದವರೆಗೆ ನಡೆಯಲಿದೆ. ಸೆ.29ರಂದು ಬೆಳಗ್ಗೆ 9ಕ್ಕೆ ಗಣಹೋಮ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಂತರ ಅನ್ನ ಸಂತರ್ಪಣೆ ನಡೆಯಲಿದೆ ಎಂದರು.
ಸೆ. 30ರಂದು ಶ್ರೀ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯ ಮೇಳಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಶೋಭಾಯಾತ್ರೆ ಮೂಲಕ ನಡೆಯಲಿದ್ದು, ಹಿಂದೂಗಳ ವಿರಾಟ್ ಶಕ್ತಿಯನ್ನು ಈ ಮೂಲಕ ಪ್ರದರ್ಶಿಸಲು ಸರ್ವ ಹಿಂದೂ ಸಮಾಜದವರು ಪಾಲ್ಗೊಂಡು, ಎಲ್ಲಾ ಕಾರ್ಯಕ್ರಮಗಳ ಯಶಸ್ವಿಗೆ ಕಾರಣೀಕರ್ತರಾಗಲು ವಿನಂತಿಸಿದರು.
ಇದನ್ನೂ ಓದಿ: Weather report : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ತಗ್ಗದ ಅಬ್ಬರ
ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಜೆ. ನಿರಂಜನ್, ಖಜಾಂಚಿ ಶರತ್, ವಿಹಿಂಪ ಕಾರ್ಯದರ್ಶಿ ಚಂದನ್, ಬಜರಂಗದಳದ ಜಿಲ್ಲಾ ಸಹ ಸಂಯೋಜಕ ಶಶಿಕುಮಾರ್, ಪ್ರಮುಖರಾದ ಈರೇಶ್ ಶಂಕ್ರಪ್ಪ, ರಾಘವೇಂದ್ರ ಮಡಿವಾಳ, ಚಂದ್ರಪ್ಪ ಶಿಗ್ಗಾದ್ ಸೇರಿದಂತೆ ಇತರರಿದ್ದರು.
ಉಡುಪಿ
Weather report : ಉತ್ತರ ಕರ್ನಾಟಕಕ್ಕೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ತಗ್ಗದ ಅಬ್ಬರ
Rain News : ಉತ್ತರ ಒಳನಾಡಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಲ್ಲಿ ಸಾಮಾನ್ಯವಾಗಿದೆ. ಸೆ.23-24ರಂದು ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಬೆಂಗಳೂರು: ಇನ್ನರೆಡು ದಿನ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚೆನಯನ್ನು (weather report) ನೀಡಲಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಘು ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ.
ಗುಡುಗು ಜತೆಗೆ ಬಿರುಗಾಳಿ ಮುನ್ನೆಚ್ಚರಿಕೆ
ಮುಂದಿನ 48 ಗಂಟೆಯಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ಇಲ್ಲ.
ಬೆಂಗಳೂರಲ್ಲಿ ವ್ಯಾಪಕ ಮಳೆ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ: Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
ನೈರುತ್ಯ ಮುಂಗಾರು ಗುರುವಾರ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ ಕರಾವಳಿಯಲ್ಲಿ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಸೇಡಂನಲ್ಲಿ 7 ಸೆಂ.ಮೀ ಮಳೆಯಾಗಿದೆ. ಚಿಂಚೋಳಿ, ಸುಲೇಪೇಟದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಕದ್ರಾ, ಚಿತ್ತಾಪುರ, ಸೈದಾಪುರ, ಇಂಡಿಯಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಕಾರವಾರ, ಮುಧೋಳೆ ಜೇವರ್ಗಿ, ಶಹಾಪುರ, ಬೆಂಗಳೂರು ನಗರ, ಕುಣಿಗಲ್‌ನಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.
ಕ್ಯಾಸಲ್ ರಾಕ್, ಗೇರ್ಸೊಪ್ಪ, ಆಳಂದ, ನೆಲೋಗಿ, ಅಡಕಿ, ಯಡ್ರಾಮಿ, ಗುಂಡಗುರ್ತಿ ಕಟ್ಕೋಲ್ , ದೇವದುರ್ಗ , ಧಾರವಾಡ, ಕುಂದಗೋಳ , ಬೀದರ್ PTO, ಬೀದರ್, ಔರಾದ್ , ದೇವರಹಿಪ್ಪರಗಿ , ಶ್ರೀರಂಗಪಟ್ಟಣ ಹಾಗೂ ಪೊನ್ನಂಪೇಟೆ, ಬೆಂಗಳೂರು ಹಾಲ್ ವಿಮಾನ ನಿಲ್ದಾಣ ತಲಾ 1 ಸೆಂ. ಮೀ ಮಳೆಯಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ
Weather Report : ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆ ಗಸ್ತು!
Rain News : ರಾಜ್ಯದ 20 ಜಿಲ್ಲೆಗಳಲ್ಲಿ ಮಳೆರಾಯನಿಗೆ ಬಿಡುವೇ ಇರುವುದಿಲ್ಲ. ವಾರಾಂತ್ಯದವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Weather report) ನೀಡಿದೆ.
ಬೆಂಗಳೂರು: ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆರಾಯನ (Rain News) ಗಸ್ತು ಇರಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದರೆ, ಇತ್ತ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಭರ್ಜರಿ ಮಳೆಯಾಗುವ (Weather report) ಸಾಧ್ಯತೆ ಇದೆ.
ಬೆಂಗಳೂರು ಟು ಮೈಸೂರು ಭಾರಿ ಮಳೆ
ದಕ್ಷಿಣ ಒಳನಾಡಿನ ಮೈಸೂರು, ರಾಮನಗರ ಮತ್ತು ಬೆಂಗಳೂರಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ , ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಮಂಡ್ಯದಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿಯ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವಿಜಯಪುರದಲ್ಲಿ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದೆ.
ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬೆಂಗಳೂರಲ್ಲಿ ರಾತ್ರಿಗೆ ಮಳೆ ಕಾಟ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕೆಲವೆಡೆ ಬಿರುಗಾಳಿ ಸಾಧ್ಯತೆ
ಮುಂದಿನ 48 ಗಂಟೆಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ಇರಲಿದೆ. ಇನ್ನುಳಿದಂತೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
ಇದನ್ನೂ ಓದಿ: Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್‌ಟಾಕ್ ಸ್ಟಾರ್‌ಗೆ 2 ವರ್ಷ ಜೈಲು ಶಿಕ್ಷೆ!
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 29 ಡಿ.ಸೆ – 21 ಡಿ.ಸೆ
ಮಂಗಳೂರು: 30 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 22 ಡಿ.ಸೆ
ಗದಗ: 30 ಡಿ.ಸೆ – 21 ಡಿ.ಸೆ
ಹೊನ್ನಾವರ: 31 ಡಿ.ಸೆ- 24 ಡಿ.ಸೆ
ಕಲಬುರಗಿ: 32 ಡಿ.ಸೆ – 23 ಡಿ.ಸೆ
ಬೆಳಗಾವಿ: 29 ಡಿ.ಸೆ – 21 ಡಿ.ಸೆ
ಕಾರವಾರ: 31 ಡಿ.ಸೆ – 24 ಡಿ.ಸೆ
ಸೆಪ್ಟೆಂಬರ್ 22ರ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ (Karnataka Dam Water Level) ಎಷ್ಟಿದೆ? ಜಲಾಶಯದಲ್ಲಿ ಒಳಹರಿವು, ಹೊರಹರಿವು ಎಷ್ಟು ಇದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಜಲಾಶಯ | ಗರಿಷ್ಠ ಮಟ್ಟ (ಅಡಿಗಳಲ್ಲಿ) | ಇಂದಿನ ಮಟ್ಟ (ಅಡಿಗಳಲ್ಲಿ) | ಒಳ ಹರಿವು (ಕ್ಯೂಸೆಕ್) | ಹೊರ ಹರಿವು (ಕ್ಯೂಸೆಕ್) |
ಕೆಆರ್‌ಎಸ್ ಜಲಾಶಯ (KRS Dam) | 38.04 | 20.61 | 6016 | 5735 |
ಆಲಮಟ್ಟಿ ಜಲಾಶಯ (Almatti Dam) | 519.6 | 114.73 | 405 | 405 |
ಮಲಪ್ರಭಾ ಜಲಾಶಯ (Malaprabha Dam) | 633.80 | 21.44 | 0 | 194 |
ಘಟಪ್ರಭಾ ಜಲಾಶಯ (Ghataprabha Dam) | 662.91 | 42.40 | 2311 | 181 |
ತುಂಗಾಭದ್ರಾ ಜಲಾಶಯ (Tungabhadra Dam) | 497.71 | 62.92 | 4378 | 10316 |
ಭದ್ರಾ ಜಲಾಶಯ (Bhadra Dam) | 657.73 | 43.23 | 290 | 290 |
ಕಬಿನಿ ಜಲಾಶಯ (Kabini Dam) | 696.13 | 14.80 | 3166 | 4390 |
ಹಾರಂಗಿ (Harangi Dam) | 871.38 | 8.06 | 1335 | 2791 |
ಲಿಂಗನಮಕ್ಕಿ (Linganamakki Dam) | 554.44 | 68.30 | 5493 | 5393 |
ಹೇಮಾವತಿ (Hemavathi Dam) | 890.58 | 17.66 | 4986 | 1300 |
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕ್ರೈಂ
Knife attack: ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ, 6 ಮಂದಿಗೆ ಚೂರಿ ಇರಿತ
ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕರ ಗುಂಪುಗಳು ಬಡಿದಾಡಿಕೊಂಡಿವೆ. 2 ವರ್ಷಗಳಿಂದ ಪವನ್, ಕಿರಣ್ ಎಂಬಿಬ್ಬರ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಇದ್ದ ಭಿನ್ನಾಭಿಪ್ರಾಯ ನಿನ್ನೆ ಸ್ಫೋಟಗೊಂಡಿದೆ.
ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga News) ಎರಡು ಎದುರಾಳಿ ಗುಂಪುಗಳ ನಡುವೆ ಮಾರಾಮಾರಿ (Crime News) ನಡೆದಿದ್ದು, ಆರು ಮಂದಿಗೆ ಚೂರಿಯಿಂದ (Knife attack) ಇರಿಯಲಾಗಿದೆ. ಇವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ.
ಕಿರಣ್ (28), ಅರುಣ್ (24), ಕಿಶೋರ್ (26), ಅಭಿ (32), ಅಣ್ಣಪ್ಪ (24), ರಾಜು (24) ಚೂರಿ ಇರಿತಕ್ಕೊಳಗಾಗಿ ಗಾಯಗೊಂಡವರು. ಐವರಿಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗದ ಅಲ್ಕೊಳದ ವಿಶಾಲ್ ಮಾರ್ಟ್ ಬಳಿ ಎಲ್ಐಸಿ ಆಫೀಸ್ ಹಿಂಭಾಗದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕರ ಗುಂಪುಗಳು ಬಡಿದಾಡಿಕೊಂಡಿವೆ. 2 ವರ್ಷಗಳಿಂದ ಪವನ್, ಕಿರಣ್ ಎಂಬಿಬ್ಬರ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಇದ್ದ ಭಿನ್ನಾಭಿಪ್ರಾಯ ನಿನ್ನೆ ಸ್ಫೋಟಗೊಂಡಿದೆ.
ನೇತಾಜಿ ಸರ್ಕಲ್ನಲ್ಲಿ ಇದೇ ವಿಚಾರಕ್ಕೆ ಕಿರಿಕ್ ಉಂಟಾಗಿದ್ದು, ಇದರ ಬೆನ್ನಲ್ಲಿಯೇ ಪವನ್ ಮತ್ತು ಟೀಂ ವಿಶಾಲ್ ಮಾರ್ಟ್ ಸಮೀಪವಿದ್ದ ಕಿರಣ್ ಮತ್ತು ಗ್ಯಾಂಗ್ ಮೇಲೆ ಅಟ್ಯಾಕ್ ಮಾಡಿದೆ. ಕಿರಣ್ ಗ್ಯಾಂಗ್ನ ಐವರಿಗೆ ಚಾಕುವಿನಿಂದ ಇರಿಯಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪವನ್ ಮತ್ತು ತಂಡಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ
ಶಿವಮೊಗ್ಗ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಬಿಗುವಿನ ವಾತಾವಾರಣ ಉಂಟಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದ ಮಸೀದಿ ಬಳಿ ಘಟನೆ ನಡೆದಿದೆ. ಟ್ಯಾಂಕ್ ಮೊಹಲ್ಲಾದ ಕೇಸರಿ ಪಡೆ ಕೂರಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಹೊಡೆಯುವ ವಿಚಾರವಾಗಿ ಮಾತಿನ ಚಕಮಕಿ ಉಂಟಾಗಿದೆ. ಎರಡು ಕೋಮಿನ ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಚಕಮಕಿ ಉಂಟಾಗಿತ್ತು.
ಘಟನಾ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ದೌಡಾಯಿಸಿದ್ದು, ಮಾತುಕತೆ ಮೂಲಕ ಪರಿಸ್ಥಿತಿ ತಿಳಿಗೊಳಿಸಿದರು. ಘಟನೆ ಕುರಿತು ಹಾಗೂ ಕಿಡಿಗೇಡಿಗಳ ಕುರಿತು ಸ್ಥಳದಲ್ಲಿದ್ದ ಪೂಲೀಸ್ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದರು. ಸ್ಥಳದಲ್ಲಿ ಬಿಗುವಿನ ವಾತಾವರಣದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಯಿತು. ಪೊಲೀಸ್ ಭದ್ರತೆಯ ನಡುವೆ ಗಣೇಶ ಮೂರ್ತಿ ವಿಸರ್ಜನೆ ನಡೆಯಿತು.
ಇದನ್ನೂ ಓದಿ: Karwar News: ದಲಿತ ಮುಖಂಡನಿಂದ ಹಿಂದು ದೇವರ ಅವಹೇಳನ ಪ್ರಕರಣ; ವಿಡಿಯೊ ಮಾಡಿದ ಯುವಕನ ಮೇಲೆ ಹಲ್ಲೆ
-
ಪ್ರಮುಖ ಸುದ್ದಿ12 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್‌ಟಾಕ್ ಸ್ಟಾರ್‌ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ3 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ9 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ17 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕಲೆ/ಸಾಹಿತ್ಯ22 hours ago
Painting: ಕೇವಲ 328 ರೂ.ಗೆ ಖರೀದಿಸಿದ ಪೇಂಟಿಂಗ್ 1.5 ಕೋಟಿ ರೂಪಾಯಿಗೆ ಹರಾಜು!
-
ಕರ್ನಾಟಕ22 hours ago
Honey Bee Attack: ಶವ ಸಂಸ್ಕಾರಕ್ಕೆಂದು ಹೋದವರ ಮೇಲೆ ಹೆಜ್ಜೇನು ದಾಳಿ; 10 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
-
ಆರೋಗ್ಯ15 hours ago
Health Tips: ಎಳನೀರು ಒಳ್ಳೆಯದೆಂದು ಕುಡಿಯುವ ಮೊದಲು ಅದರ ಅವಗುಣಗಳೂ ಗೊತ್ತಿರಲಿ!
-
ಗ್ಯಾಜೆಟ್ಸ್6 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್