ಸೊರಬ: ತಾಲೂಕಿನ ಜಡೆ ವಲಯದ ಸಾಲಗಿ ಗ್ರಾಮದ ಮುತ್ತಮ್ಮ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆಯನ್ನು (Shivamogga News) ಹಸ್ತಾಂತರಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ಮನೆ ಹಸ್ತಾಂತರಿಸಿ ಮಾತನಾಡಿ, ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ವಾತ್ಸಲ್ಯ ಎಂಬ ಯೋಜನೆಯನ್ನು ಹಮ್ಮಿಕೊಂಡಿದ್ದು, 1 ಲಕ್ಷ ರೂ ವೆಚ್ಚದಲ್ಲಿ ಬಡ ವಸತಿರಹಿತರಿಗೆ ಮನೆ ನಿರ್ಮಾಣ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: Indian Coffee: ದಕ್ಷಿಣ ಭಾರತದ ಫಿಲ್ಟರ್ ಕಾಫಿ ವಿಶ್ವದಲ್ಲೇ ಟಾಪ್ 2; ಫಸ್ಟ್ ಯಾವುದು?
ಮುತ್ತಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯಿಂದ ಕಳೆದ 3 ವರ್ಷಗಳಿಂದ ನಿರಂತರವಾಗಿ ಮಾಸಿಕ ರೂ. 1000 ರಂತೆ ಮಾಸಾಶನ ನೀಡಲಾಗುತ್ತಿದೆ ಎಂದು ಇದೇ ವೇಳೆ ತಿಳಿಸಿದರು.
ಇದನ್ನೂ ಓದಿ: Money Guide: ಮಾಸಿಕ ಸಂಬಳದ ಜತೆಗೆ ಪೂರಕ ಆದಾಯ ಬೇಕೆ? ಈ ಯೋಜನೆಯಲ್ಲಿ ಹೂಡಿಕೆ ಮಾಡಿ
ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ, ಯೋಜನಾಧಿಕಾರಿ ಸುಬ್ರಾಯ ನಾಯ್ಕ, ವಲಯ ಮೇಲ್ವಿಚಾರಕ ರಾಜಪ್ಪ, ಜ್ಞಾನವಿಕಾಸ ಸಮನ್ವಯಾಧಿಕಾರಿ ಶೋಭಾ, ಒಕ್ಕೂಟ ಅಧ್ಯಕ್ಷೆ ಲೀಲಾವತಿ, ಗ್ರಾಮದ ಮುಖಂಡ ಲಕ್ಷ್ಮಣ ಕುಮಾರ್, ವಲಯದ ಸೇವಾಪ್ರತಿನಿಧಿಗಳು ಸೇರಿದಂತೆ ಪ್ರಗತಿಬಂಧು ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.