ಸೊರಬ: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ (Chandragutti Sri Renukamba Temple) ಕಾಣಿಕೆ ಹುಂಡಿ ಎಣಿಕೆ (Hundi Count) ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಛೇರಿಯಲ್ಲಿ ಗುರುವಾರ ನಡೆದಿದ್ದು, ಒಟ್ಟು ಹಣ ಹುಂಡಿಯಲ್ಲಿ 31,35,360 ರೂ. ಕಾಣಿಕೆ ಸಂಗ್ರಹವಾಗಿದೆ.
ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಕಾಣಿಕೆ ಹುಂಡಿ ಎಣಿಸಿದಾಗ 25,08,680 ರೂ. ಸಂಗ್ರಹವಾಗಿತ್ತು, ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 31,35,360 ರೂ. ಕಾಣಿಕೆ ಸಂಗ್ರಹವಾಗಿದೆ.
ಹುಂಡಿ ಎಣಿಕೆ ಕಾರ್ಯಕ್ಕೆ ನೂತನ ಸಾಗರ ಉಪ ವಿಭಾಗಾಧಿಕಾರಿ ಆರ್. ಯತೀಶ್ ಭೇಟಿ ನೀಡಿ, ಪರಿಶೀಲಿಸಿದರು. ಇದಕ್ಕೂ ಮೊದಲು ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದರು.
ಇದನ್ನೂ ಓದಿ: Uttara Kannada News: ಡಿ.30ರಿಂದ ಅಶೋಕೆಯಲ್ಲಿ ಅತಿರುದ್ರಾಭಿಷೇಕ
ನೂತನ ಸಾಗರ ಉಪ ವಿಭಾಗಾಧಿಕಾರಿ ಆರ್.ಯತೀಶ್ ಅವರನ್ನು ದೇವಸ್ಥಾನದಿಂದ ಕಾರ್ಯ ನಿರ್ವಹಣಾಧಿಕಾರಿಗಳು ಗೌರವಿಸಿ, ಸನ್ಮಾನಿಸಿದರು.
ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಆಳವಡಿಸಲಾಗಿತ್ತು. ಸ್ಥಳೀಯ ಗ್ರಾ.ಪಂ. ಸದಸ್ಯ ಎಂ.ಪಿ. ರತ್ನಾಕರ್ ಎಣಿಕೆ ಕಾರ್ಯಕ್ಕೆ ಭೇಟಿ ನೀಡಿದರು.
ಇದನ್ನೂ ಓದಿ: Shivamogga News: ಚಿಕ್ಕಜೇನಿಯ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಹುಂಡಿ ಎಣಿಕೆ ಕಾರ್ಯದಲ್ಲಿ ತಾಲ್ಲೂಕು ದಂಡಾಧಿಕಾರಿ ಹುಸೇನ್ ಸರಕಾವಸ್, ಶಿರಸ್ತೇದಾರ್ ಎಸ್. ನಿರ್ಮಲ ಪ್ರಭಾಕರ್, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ವಿ.ಎಲ್. ಶಿವಪ್ರಸಾದ್, ಮುಜರಾಯಿ ಇಲಾಖೆಯ ಎಂ.ಶೃತಿ, ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಾಲಯದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.