ಸೊರಬ: ಚಂದ್ರಗುತ್ತಿಯ (Chandragutti) ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದ (Sri Renukamba Temple) ಕಾಣಿಕೆ ಹುಂಡಿಯ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಬುಧವಾರ (Shivamogga News) ನಡೆಯಿತು.
ಚಂದ್ರಗುತ್ತಿ ನಾಡಕಚೇರಿ ಉಪ ತಹಸೀಲ್ದಾರ್ ಹಾಗೂ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್. ಶಿವಪ್ರಸಾದ್ ಅವರ ಸಮ್ಮುಖದಲ್ಲಿ ಕಾಣಿಕೆ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಯಿತು.
ಇದನ್ನೂ ಓದಿ: Science City : ಬೆಂಗಳೂರು ವಿಮಾನ ನಿಲ್ದಾಣದ ಬಳಿ ದಕ್ಷಿಣ ಭಾರತದ ಮೊದಲ ವಿಜ್ಞಾನ ನಗರ
ಕಳೆದ ಡಿಸೆಂಬರ್ ತಿಂಗಳಲ್ಲಿ ಕಾಣಿಕೆ ಹುಂಡಿ ಎಣಿಸಿದಾಗ 31,35,360 ರೂ. ಸಂಗ್ರಹವಾಗಿತ್ತು. ಈ ಬಾರಿ ದೇವಸ್ಥಾನದ ಹುಂಡಿಯಲ್ಲಿ 22,52,700 ರೂ. ಕಾಣಿಕೆ ಸಂಗ್ರಹವಾಗಿದೆ, ಎಣಿಕೆ ಕಾರ್ಯ ನಡೆಯುವ ಕೊಠಡಿ ಸುತ್ತ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.
ಇದನ್ನೂ ಓದಿ: Karnataka Weather: ಕರುನಾಡಲ್ಲಿ ಬಿಸಿಲಿನ ಏಟು; ಕಲಬುರಗಿಯಲ್ಲಿ ತುಂಬಾ ಹೀಟು!
ಈ ಸಂದರ್ಭದಲ್ಲಿ ಶಿರಸ್ತೇದಾರ್ ಎಸ್. ನಿರ್ಮಲ ಪ್ರಭಾಕರ್, ಮುಜರಾಯಿ ಇಲಾಖೆ ವಿಷಯ ನಿರ್ವಾಹಕಿ ಎಂ.ಶೃತಿ, ಕೆನರಾ ಬ್ಯಾಂಕ್ ಶಾಖೆಯ ಸಹಾಯಕ ವ್ಯವಸ್ಥಾಪಕ ನಾಗರಾಜ್, ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರು, ಗ್ರಾಮ ಸಹಾಯಕರು, ದೇವಸ್ಥಾನದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.