Site icon Vistara News

Shivamogga News: ಪತ್ನಿಯ ಸಾವು; ಮನನೊಂದು ಬಾವಿಗೆ ಹಾರಿ ಪತಿ ಆತ್ಮಹತ್ಯೆ

Death of wife Husband committed suicide by jumping into a well

ರಿಪ್ಪನ್‌ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಮಂಡಲ ಪಂಚಾಯಿತಿ ಮಾಜಿ ಉಪ ಪ್ರಧಾನ ಹಾಗೂ ವೀರಶೈವ ಸಮಾಜದ ಹಿರಿಯ ಮುಖಂಡ ಡಿ.ಸಿ ಈಶ್ವರಪ್ಪ (76) ಶನಿವಾರ ಬೆಳಗ್ಗೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಜರುಗಿದೆ.

ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಪತ್ನಿ ನಿಧನರಾಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಅವರು ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಮೃತರಿಗೆ ಮೂರು ಜನ ಗಂಡು ಮಕ್ಕಳು ಇದ್ದು, ಮೃತರ ಅಂತ್ಯಕ್ರಿಯೆ ಬರುವೆ ಗ್ರಾಮದ ದೊಡ್ಡಿನಕೊಪ್ಪದ ಜಮೀನಿನಲ್ಲಿ ವೀರಶೈವ ಸಮಾಜದ ಸಂಪ್ರದಾಯದಂತೆ ಜರುಗಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ

ಮಂಡಲ ಪಂಚಾಯಿತಿಯ ಮಾಜಿ ಉಪಪ್ರಧಾನ ಹಾಗೂ ವೀರಶೈವ ಸಮಾಜದ ಹಿರಿಯ ಮುಖಂಡ ಡಿ.ಸಿ. ಈಶ್ವರಪ್ಪ ನಿಧನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಪಂಚಾಯಿತಿ ಮಾಜಿ ಆಧ್ಯಕ್ಷ ಕಲಗೋಡು ರತ್ನಾಕರ್, ಬಂಡಿ ರಾಮಚಂದ್ರ, ಆರ್.ಎ.ಚಾಬುಸಾಬ್ , ಎಂ.ಬಿ. ಲಕ್ಷ್ಮಣಗೌಡ ,ಅಮೀರ್ ಹಂಜಾ, ವೀರಶೈವ ಸಮಾಜದ ಉಪಾಧ್ಯಕ್ಷ ಜಿ.ಎಂ.ದುಂಡರಾಜಪ್ಪಗೌಡ, ಎಂ.ಆರ್.ಶಾಂತವೀರಪ್ಪಗೌಡ, ಆಸೀಫ್‌ ಭಾಷಾ ಸಂತಾಪ ವ್ಯಕ್ತಪಡಿಸಿದ್ದಾರೆ.

Exit mobile version