Site icon Vistara News

Shivamogga News: ಅಕ್ರಮ ಮರಳು ಸಾಗಾಟ; ಮೂರು ಟಿಪ್ಪರ್ ಲಾರಿಗಳ ವಶ

illegal transportation of sand Three tipper lorries seized in ripponpet

ರಿಪ್ಪನ್‌ಪೇಟೆ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಮೂರು ಟಿಪ್ಪರ್‌ ಲಾರಿಗಳನ್ನು ರಿಪ್ಪನ್‌ಪೇಟೆ ಠಾಣೆಯ ಪೊಲೀಸರು ವಶಪಡಿಸಿಕೊಂಡಿರುವ ಘಟನೆ (Shivamogga News) ನಡೆದಿದೆ.

ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿ ಠಾಣೆಯ ಪಿಎಸ್ಐ ಪ್ರವೀಣ್ ಎಸ್.ಪಿ. ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಅಕ್ರಮ ಮರಳು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Karnataka Weather : ಬೆಳಗಾವಿಯಲ್ಲಿ ಕನಿಷ್ಠ ಉಷ್ಣಾಂಶ ದಾಖಲು; ನಾಳೆ ಹೇಗಿರಲಿದೆ ವಾತಾವರಣ

ಅಕ್ರಮ ಮರಳು ತುಂಬಿಕೊಂಡು ಹೊಸನಗರ ತಾಲೂಕಿನ ಕೋಡೂರು ಮಾರ್ಗವಾಗಿ ಶಿವಮೊಗ್ಗ ರಸ್ತೆಯಲ್ಲಿ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಗಳನ್ನು ಠಾಣೆಯ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: Central Budget 2024: ವಿತ್ತ ಸಚಿವೆ ಮಂಡಿಸಿದ ಬಜೆಟ್‌ ತಯಾರಿಯ ಹಿಂದಿನ ಪ್ರಮುಖ ವ್ಯಕ್ತಿಗಳು ಇವರು

ಕಾರ್ಯಾಚರಣೆಯಲ್ಲಿ ಠಾಣೆಯ ಸಿಬ್ಬಂದಿಗಳಾದ ಉಮೇಶ್, ಶಿವಕುಮಾರ್ ನಾಯ್ಕ್ ಹಾಗೂ ಮಧುಸೂಧನ್ ಇದ್ದರು.

Exit mobile version