ಸೊರಬ: ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಳದ ಗುಡ್ಡ, ಹೆಚ್ಚೆ, ಕಡಸೂರು, ತಟ್ಟಿಕೆರೆ, ಹಿರೇನಲ್ಲೂರು, ಸೈದೂರು, ಮಂಡಗಳಲೇ ಮತ್ತು ತಾಳಗುಪ್ಪ ಭಾಗಗಳಲ್ಲಿ ವ್ಯಾಪಕ ಮಳೆಯಿಂದ ಗ್ರಾಮದ ತಗ್ಗು ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿರುವ ಪ್ರದೇಶಗಳಿಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ, (Shivamogga News) ಪರಿಶೀಲಿಸಿದರು.
ಹಾನಿಗೊಳಗಾದವರಿಗೆ ತಕ್ಷಣವೇ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿ ರಾಜ್ಯ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: Ratna Bhandar: ಒಂದೇ ವಾರದಲ್ಲಿ ಎರಡನೇ ಬಾರಿ ತೆರೆದ ಪುರಿ ಜಗನ್ನಾಥನ ʼರತ್ನ ಭಂಡಾರʼ
ಈ ಸಂದರ್ಭದಲ್ಲಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಹಕ್ಕರೆ ಮಲ್ಲಿಕಾರ್ಜುನ್, ದೇವೇಂದ್ರಪ್ಪ, ಮಲ್ಲಿಕಾರ್ಜುನ್, ಆಗಸಹಳ್ಳಿ ಪ್ರಕಾಶ್, ಗುರುಕುಮಾರ ಪಾಟೀಲ್, ಈಶ್ವರಪ್ಪ ಚನ್ನಪಟ್ಟಣ, ಹೊಳಿಯಮ್ಮ ಹಾಗೂ ಇತರರು ಉಪಸ್ಥಿತರಿದ್ದರು.
ಇದನ್ನೂ ಓದಿ: Karnataka Rain : ಭಾರಿ ಮಳೆ ಎಫೆಕ್ಟ್; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು
ಸೊರಬ ತಾಲೂಕಿನ ಶಾಲಾ-ಕಾಲೇಜುಗಳಿಗೆ ಜು.19 ರಂದು ರಜೆ ಘೋಷಣೆ
ಸೊರಬ ಪಟ್ಟಣ ಸೇರಿ ತಾಲೂಕಿನಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತ ದೃಷ್ಠಿಯಿಂದ ಅಂಗನವಾಡಿ ಕೇಂದ್ರಗಳು ಹಾಗೂ ಶಾಲಾ- ಕಾಲೇಜುಗಳಿಗೆ ಜು. 19ರಂದು ರಜೆ ಘೋಷಣೆ ಮಾಡಿರುವುದಾಗಿ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.