ಸೊರಬ: ಹತ್ತನೇ ತರಗತಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿಷಯಗಳನ್ನು ಗುರುತಿಸಿ, ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನೀಡಿ ಅವರಿಂದ ಸಹ ಉತ್ತಮ ಫಲಿತಾಂಶದೊಂದಿಗೆ (Good Result) ಮುಂದಿನ ವ್ಯಾಸಾಂಗಕ್ಕೆ ಅನುಕೂಲವಾಗುವಂತೆ ಡಾ. ಡಿ.ವೀರೇಂದ್ರ ಹೆಗ್ಗಡೆ ಮತ್ತು ಡಾ. ಹೇಮಾವತಿ ಹೆಗ್ಗಡೆಯವರು ಅವಕಾಶ ಕಲ್ಪಿಸಿದ್ದು, ಇದನ್ನು ವಿದ್ಯಾರ್ಥಿಗಳು (Students) ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ್ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸೊರಬ ತಾಲೂಕಿನ ಆಯ್ದ 6 ಪ್ರೌಢಶಾಲೆಗಳಾದ ಸರ್ಕಾರಿ ಪ್ರೌಢಶಾಲೆ ಗುಡವಿ, ಸರ್ಕಾರಿ ಪ್ರೌಢ ಶಾಲೆ ಚಿಟ್ಟೂರು, ಮಲೆನಾಡು ಪ್ರೌಢಶಾಲೆ ತತ್ತೂರು, ಶ್ರೀ ರೇಣುಕಾಂಭ ಪ್ರೌಢಶಾಲೆ ಚಂದ್ರಗುತ್ತಿ, ಶ್ರೀಮತಿ ಶಕುಂತಲಾ ಪ್ರೌಢಶಾಲೆ ಹೊಸಬಾಳೆ ಮತ್ತು ಸರ್ಕಾರಿ ಪ್ರೌಢಶಾಲೆ ಕೆರೆಹಳ್ಳಿಯಲ್ಲಿ 3 ತಿಂಗಳ ವಿಶೇಷ ಟ್ಯೂಷನ್ ಕ್ಲಾಸ್ ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: Benefits Of Amla In Winter: ಚಳಿಗಾಲದಲ್ಲಿ ನೆಲ್ಲಿಕಾಯಿ ತಿಂದರೆ ಸಿಗುವ ಪ್ರಯೋಜನಗಳು ಹಲವು
ಪ್ರೌಢಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ನಿಟ್ಟಿನಲ್ಲಿ ಮೂರು ತಿಂಗಳ ಕಾಲ ಉಚಿತವಾಗಿ ಟ್ಯೂಷನ್ ಕ್ಲಾಸ್ ಪ್ರಾರಂಭಿಸಲಾಗಿದೆ. ನಿರಂತರವಾಗಿ ಕಲಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಶಾಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಶೇಕಡಾ 100 ರಷ್ಟು ಬರುವಂತೆ ಪ್ರಯತ್ನಿಸಬೇಕು. 3 ತಿಂಗಳು ಟ್ಯೂಷನ್ ಕ್ಲಾಸ್ ನೀಡಲು ಅತಿಥಿ ಶಿಕ್ಷಕರನ್ನು ನಿಯೋಜಿಸಿದ್ದು, ಧರ್ಮಸ್ಥಳ ಸಂಸ್ಥೆಯಿಂದಲೇ ಗೌರವಧನವನ್ನು ನೀಡಲಾಗುತ್ತದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಸ್ವ-ಸಹಾಯ ಸಂಘದ ಸದಸ್ಯರ ಮಕ್ಕಳ ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣಕ್ಕೆ ಸುಜ್ಞಾನನಿಧಿ ಶಿಷ್ಯವೇತನ, ಶಾಲೆಗಳಿಗೆ ಡೆಸ್ಕ್ ಬೆಂಚ್ ಪೂರೈಕೆ, ಜ್ಞಾನದೀಪ ಶಿಕ್ಷಕರ ಒದಗಣೆ, ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ, ಕೆರೆ ಪುನಶ್ಚೇತನ, ನಿರ್ಗತಿಕರಿಗೆ ಮಾಶಾಸನ ವಿತರಣೆ, ವಿಶೇಷ ಚೇತನರಿಗೆ ಜನಮಂಗಲ ಕಾರ್ಯಕ್ರಮದಡಿಯಲ್ಲಿ ಸಲಕರಣೆ ವಿತರಣೆ, ಇನ್ನಿತರ ಸಮಾಜ ಸೇವೆಯಲ್ಲಿ ಸಂಸ್ಥೆಯು ಅನೇಕ ರೀತಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಇದರಿಂದಾಗಿ ಹೆಚ್ಚಿನ ಜನರು ಪ್ರಯೋಜನವನ್ನು ಪಡೆದುಕೊಂಡಿರುತ್ತಾರೆ ಎಂದರು.
ಇದನ್ನೂ ಓದಿ: Ragi Face Pack: ಹೊಟ್ಟೆಗೆ ರಾಗಿ ಮುದ್ದೆ! ಬ್ಯೂಟಿಗೆ ರಾಗಿ ಫೇಸ್ ಪ್ಯಾಕ್!
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಸಂಸ್ಥೆಯ ವಲಯ ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.