ಸೊರಬ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಈವರೆಗಿನ ಸಾಧನೆ, ಮಹಿಳಾ ಸಬಲೀಕರಣಕ್ಕಾಗಿ (Women Empowerment) ಮಾತೃಶ್ರೀ ಹೇಮಾವತಿ ಅಮ್ಮನವರು ನೀಡಿರುವ ವಿಶೇಷ ಯೋಜನೆಗಳಗಿದ್ದು ಅವುಗಳಲ್ಲಿ ಜ್ಞಾನ ವಿಕಾಸ ಯೋಜನೆ ಅತ್ಯಂತ ಮುಖ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸುಬ್ರಾಯ ನಾಯ್ಕ ತಿಳಿಸಿದರು.
ತಾಲೂಕಿನ ಮಾವಲಿ ವಲಯದ ಯಕ್ಷಿ ಗ್ರಾಮದಲ್ಲಿ ಹೊಸದಾಗಿ ಹುಲ್ಲೇಶ್ವರ ಜ್ಞಾನ ವಿಕಾಸ ಕೇಂದ್ರವನ್ನು ಅವರು ಉದ್ಘಾಟಿಸಿ, ಕೇಂದ್ರವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗಬೇಕಾದರೆ ಕೇಂದ್ರದಲ್ಲಿನ ಪ್ರತಿಯೊಂದು ಸದಸ್ಯರ ಹೊಂದಾಣಿಕೆ ಅತೀ ಮುಖ್ಯವಾಗಿರುತ್ತದೆ ಎಂದರು.
ಕೇಂದ್ರದಲ್ಲಿ ಪ್ರತಿ ತಿಂಗಳು ವಿವಿಧ ರೀತಿಯ ಜ್ಞಾನ ವಿಕಾಸ ಕಾರ್ಯಕ್ರಮಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಗಳನ್ನು ನೀಡುವಂತಹ ಕಾರ್ಯಕ್ರಮಗಳು ನಡೆಯುತ್ತಿರುತ್ತದೆ. ಇದರ ಸದುಪಯೋಗವನ್ನು ತಾವೆಲ್ಲರೂ ಪಡೆಯಬೇಕು.
ಇದನ್ನೂ ಓದಿ: Karnataka Drought: ಮುಂದಿನ ವಾರ ಡಿಬಿಟಿ ಮೂಲಕ ರೈತರಿಗೆ ಬರ ಪರಿಹಾರ; 2 ಸಾವಿರ ರೂ.ವರೆಗೆ ಜಮೆ
ಜ್ಞಾನ ವಿಕಾಸ ಕಾರ್ಯಕ್ರಮ ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕಲು ವೇದಿಕೆಯಾಗಿದೆ. ಪ್ರತಿಯೊಬ್ಬರೂ ಯಾವುದೇ ಸಂಕೋಚವಿಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಂಡು ಒಂದು ಉತ್ತಮ ಮಾದರಿ ಕೇಂದ್ರವಾಗಿ ಗುರುತಿಸುವಂತಾಗಬೇಕು ಎಂದರು.
ಗ್ರಾಮದ ಮುಖಂಡ ಮಂಜಪ್ಪ ಮಾತನಾಡಿದರು.
ಇದನ್ನೂ ಓದಿ: Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್: ಸಚಿವ ಮಧು ಬಂಗಾರಪ್ಪ
ಈ ಸಂದರ್ಭದಲ್ಲಿ ವಲಯ ಮೇಲ್ವಿಚಾಕಿ ರಾಧಾ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶೋಭಾ, ಸೇವಾ ಪ್ರತಿನಿಧಿ ಮಲ್ಲಮ್ಮ ಹಾಗೂ ಸದಸ್ಯರು ಉಪಸ್ಥಿತರಿದ್ದರು.