ಸೊರಬ: ರಾಜ್ಯ ಸರ್ಕಾರ (State Government) ಕಳೆದ 6 ತಿಂಗಳಿನಿಂದ ಗ್ಯಾರಂಟಿ ಯೋಜನೆಗಳನ್ನು (Guarantee schemes) ಜಾರಿಗೊಳಿಸುವ ನೆಪದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮರೆತು ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ಜೆಡಿಎಸ್ ಹಿರಿಯ ಮುಖಂಡ ಕೆ.ಅಜ್ಜಪ್ಪ ಆರೋಪಿಸಿದರು.
ಪಟ್ಟಣದ ಆಲೆಕಲ್ಲು ಸಭಾಂಗಣದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರನ್ನು ಜೆಡಿಎಸ್‌ಗೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆಗಳು ಸಂಪೂರ್ಣ ಹಳ್ಳ ಹಿಡಿದಿವೆ ಎಂದು ಆರೋಪಿಸಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ತಾಲೂಕಿನ ಮೂಡಿ, ಮೂಗೂರು ಏತ ನೀರಾವರಿ ಯೋಜನೆಗೆ 400 ಕೋಟಿ ಅನುದಾನ ನೀಡಿದ್ದರಿಂದಾಗಿ ಯೋಜನೆ ಯಶಸ್ವಿಗೊಂಡಿದೆ. ನಂತರ ಯಾವುದೇ ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳದಿರುವುದು ಸಚಿವ ಮಧು ಬಂಗಾರಪ್ಪ ರೈತರ ಮೇಲಿರುವ ಕಾಳಜಿ ಏನು ಎನ್ನುವುದನ್ನು ಎತ್ತಿ ತೋರಿಸುತ್ತದೆ ಎಂದು ಟೀಕಿಸಿದರು.
ಇದನ್ನೂ ಓದಿ: Vastu Tips: ಅದೃಷ್ಟ, ಸಂಪತ್ತು ಹೊತ್ತು ತರುವ ಬಿದಿರನ್ನು ಹೀಗೆ ಬೆಳೆಸಿ
ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಗುಂಡಿ ಬಿದ್ದಿರುವ ರಸ್ತೆಗೆ ದುರಸ್ತಿ ಮಾಡಲು ಸಹ ಸಾಧ್ಯವಾಗಿಲ್ಲ. ತಾಲೂಕಿನ ಅಭಿವೃದ್ಧಿ ಮಾಡಬೇಕು ಇಲ್ಲದಿದ್ದರೆ ಸರ್ಕಾರದ ಮತ್ತು ಶಾಸಕರ ವೈಫಲ್ಯ ಖಂಡಿಸಿ, ಜೆಡಿಎಸ್‍ನಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿವುದು ಎಂದು ಎಚ್ಚರಿಸಿದರು.
ಬಳಿಕ ಜೆ.ಡಿ.ಎಸ್ ತಾಲೂಕು ಅಧ್ಯಕ್ಷ ಚಿಮಣೂರು ಹುಚ್ಚಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ಓಂ ಪಿಕಲ್ ಗಣೇಶ್ ಅವರು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ಇದನ್ನೂ ಓದಿ: New Year 2024: ಹೊಸ ವರ್ಷದಲ್ಲಿ ಹಣ ಉಳಿತಾಯ ಮಾಡಬೇಕೆ? ಈ ಟಿಪ್ಸ್ ಫಾಲೋ ಮಾಡಿ
ಈ ಸಂದರ್ಭದಲ್ಲಿ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಸುಮಾ ಗಜಾನನ, ನಗರ ಘಟಕದ ಅಧ್ಯಕ್ಷ ಶ್ರೀಧರ್ ಶೇಟ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಜೀಜ್, ವಿಷ್ಣು ಬಿಳವಾಣಿ, ಪುಂಡಲೀಕಪ್ಪ, ದಯಾನಂದ ಯಕ್ಷಿ, ಬಸವರಾಜ, ಲೋಕೇಶ್ ಬಾಡದಬೈಲು, ಮಾರುತಿ ಸೇರಿದಂತೆ ಇತರರು ಇದ್ದರು.