ಸೊರಬ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಕನಕದಾಸರ ಜಯಂತಿ (Kanakadasa Jayanti) ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಕುರುಬ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಉಪನ್ಯಾಸಕ ರವಿ ಕಲ್ಲಂಬಿ ಉಪನ್ಯಾಸ ನೀಡಿ ಮಾತನಾಡಿ, ಸಮಾಜದಲ್ಲಿ ಸಮಾನತೆ ಪ್ರತಿಪಾದಿಸಿದ ದಾಸ ಶ್ರೇಷ್ಠ ಕನಕದಾಸರನ್ನು ಕೇವಲ ಒಂದು ಜಾತಿಗೆ ಸೀಮಿತವಾಗಿ ಮಾಡದೇ ಮನುಕುಲದ ಉದ್ಧಾರಕ ಎಂದು ಭಾವಿಸಬೇಕು. ಕನಕರು ಒಬ್ಬ ತತ್ವಜ್ಞಾನಿಯಾಗಿ, ಸಮಾಜ ಸುಧಾರಕರಾಗಿ, ದಾಸ ಶ್ರೇಷ್ಠರಾಗಿ, ಕೀರ್ತನೆಕಾರರಾಗಿ ಅವರು ನೀಡಿದ ಕೊಡುಗೆಗಳು ಸರ್ವಕಾಲಿಕ ಸತ್ಯವಾಗಿದೆ ಎಂದರು.
ಕಾರ್ಯಕ್ರಮವನ್ನು ಪುರಸಭೆ ಸದಸ್ಯ ಎಂ.ಡಿ. ಉಮೇಶ್ ಉದ್ಘಾಟಿಸಿ, ಮಾತನಾಡಿದರು.
ಇದನ್ನೂ ಓದಿ: INDIA GDP : 2ನೇ ತ್ರೈಮಾಸಿಕದ GDP ಶೇ. 7.6 ; ಕಳೆದ ಬಾರಿಗಿಂತ ಹೆಚ್ಚಾ, ಕಡಿಮೆನಾ?
ತಹಶೀಲ್ದಾರ್ ಹುಸೇನ್ ಸರಕಾವಸ್ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: Expensive Cities: ಜಗತ್ತಿನ ದುಬಾರಿ ನಗರಗಳಿವು; ಪಟ್ಟಿಯಲ್ಲಿ ಭಾರತದ ಯಾವ್ಯಾವ ನಗರಗಳಿವೆ?
ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಪ್ರೇಮಾ ಟೋಕಪ್ಪ, ತಾಪಂ ಇಒ ಡಾ. ಎನ್.ಆರ್. ಪ್ರದೀಪ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ಟಿ. ಬಾಲಚಂದ್ರ, ಬಿಇಒ ಟಿ.ಎಂ. ಸತ್ಯನಾರಾಯಣ, ಕಸಾಪ ತಾಲೂಕು ಅಧ್ಯಕ್ಷ ಪಾಣಿ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮೃತ್ಯುಂಜಯ ಗೌಡ, ಸ್ನೇಹ ಸುರಭಿ ಮಹಿಳಾ ಬಳಗ ಅಧ್ಯಕ್ಷೆ ಸರಸ್ವತಿ ನಾವುಡಾ, ಡಿಎಸ್ಎಸ್ ರಾಜ್ಯ ವಿಭಾಗೀಯ ಸಂಚಾಲಕ ಗುರುರಾಜ್, ತಾಲೂಕು ಸಂಚಾಲಕ ಮಹೇಶ್ ಶಕುನವಳ್ಳಿ, ಸಂಘಟನಾ ಸಂಚಾಲಕರಾದ ಹರೀಶ್ ಚಿಟ್ಟೂರು, ನಾಗರಾಜ ಹುರಳಿಕೊಪ್ಪ, ಗೃಹರಕ್ಷಕದಳದ ಘಟಕಾಧಿಕಾರಿ ಬಿ. ರೇವಣಪ್ಪ, ಕಂದಾಯ ಇಲಾಖೆಯ ಬಿ.ಜೆ. ವಿನೋದ್, ಸಮೂಹ ಸಂಪನ್ಮೂಲ ವ್ಯಕ್ತಿ ಸುಧಾ, ಸಿಆರ್‌ಪಿ ರಾಘವೇಂದ್ರ ಸೇರಿದಂತೆ ಇತರರಿದ್ದರು.