ರಿಪ್ಪನ್‌ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ಪುನೀತ್ ರಾಜ್ ಆಭಿಮಾನಿ ಬಳಗದ 3ನೇ ವರ್ಷದ ವಾರ್ಷಿಕೋತ್ಸವ ಮತ್ತು ನ. 1ರಂದು ಕನ್ನಡ ರಾಜ್ಯೋತ್ಸವವನ್ನು (Kannada Rajyotsava) ಈ ಬಾರಿ ಅದ್ಧೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷ ಉಲ್ಲಾಸ್ ತೆಂಕೋಲ ಮತ್ತು ಆರ್.ಎ. ಚಾಬುಸಾಬ್ ಹಾಗೂ ಮೆಣಸೆ ಆನಂದ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಿಪ್ಪನ್‌ಪೇಟೆಯ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ಟೋಬರ್ 29ರಂದು ದಿ. ಪುನೀತ್ ರಾಜ್ ಅವರ ಪುಣ್ಯಸ್ಮರಣೆಯ ಕಾರ್ಯಕ್ರಮವನ್ನು ಪಟ್ಟಣದ ಸಿದ್ಧಿ ವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದ ಅವರು, ಅ.31ರಂದು ಮಂಗಳವಾರ ಬೆಳಗ್ಗೆ 10 ಗಂಟೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾರ್ವಜನಿಕರಿಗೆ ಮತ್ತು ಶಾಲಾ ಮಕ್ಕಳಿಗಾಗಿ ಆಟೋಟ ಸ್ಫರ್ಧೆಗಳನ್ನು ಮತ್ತು ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಆರತಿ ತಟ್ಟೆ ಅಲಂಕಾರ ಹಾಗೂ ಸಂಗೀತ ಕುರ್ಚಿ ನಂತರ ಮಧ್ಯಾಹ್ನ 2 ಗಂಟೆಗೆ ಥ್ರೋಬಾಲ್ ಮತ್ತು ವಾಲಿಬಾಲ್ ಪಂದ್ಯಾವಳಿ, ಪುರುಷರಿಗಾಗಿ ವಾಲಿಬಾಲ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: iPhone: ಭಾರತದಲ್ಲಿ ಟಾಟಾದಿಂದ ಐಫೋನ್ ಉತ್ಪಾದನೆ! ಸುದ್ದಿ ಖಚಿತಪಡಿಸಿದ ಕೇಂದ್ರ
ನ. 1 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ವಿವಿಧ ಮಹಿಳಾ ಸಂಘದವರಿಂದ ಪೂರ್ಣ ಕುಂಭ ಸ್ವಾಗತದೊಂದಿಗೆ ಶಾಲಾ ಮಕ್ಕಳ ವಿವಿಧ ವೇಷ ಭೂಷಣದೊಂದಿಗೆ ಹೆಸರಾಂತ ಕಲಾ ತಂಡಗಳ ಕಲಾ ಮೆರುಗಿನೊಂದಿಗೆ ತಾಯಿ ಭುವನೇಶ್ವರಿಯ ಅಲಂಕೃತ ಭಾವಚಿತ್ರ ಮೆರವಣಿಗೆ, 10 ಗಂಟೆಗೆ ಕನ್ನಡ ದ್ವಜಾರೋಹಣ, 11 ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಜರುಗಲಿದೆ ಎಂದು ತಿಳಿಸಿದರು.
ರಾಜ್ಯೋತ್ಸವದ ಆಂಗವಾಗಿ ಶಾಲಾ ಕಾಲೇಜು ವಿದ್ಯಾಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕ ಗೋಪಾಲಕೃಷ್ಣ ಬೇಳೂರು, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.
ನಂತರ ರಾತ್ರಿ 8 ಗಂಟೆಗೆ ಖ್ಯಾತ ಗಾಯಕರಾದ ಸಾದ್ವಿನಿ ಕೊಪ್ಪ, ಮೆಹಬೂಬ್‌ಸಾಬ್, ಆಶ್ವಿನ್‌ಶರ್ಮ, ಸಾನ್ವಿ ಜಿ. ಭಟ್ ಅವರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅವರು ವಿವರಿಸಿದರು.
ಇದನ್ನೂ ಓದಿ: ICC World Cup 2023 : ಈಡನ್ ಗಾರ್ಡನ್ಸ್ನಲ್ಲಿ ಗೋಡೆ ಕುಸಿತ, ವಿಶ್ವ ಕಪ್ ಪಂದ್ಯಕ್ಕೆ ಆತಂಕ
ಸುದ್ದಿಗೋಷ್ಠಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ, ಆರ್.ಎನ್. ಮಂಜುನಾಥ, ಮಂಜುನಾಥ ಕಾಮತ್, ಜಿ.ಡಿ. ಮಲ್ಲಿಕಾರ್ಜುನ, ಆರ್.ಡಿ.ಶೀಲಾ, ಸ್ವಾತಿ,. ಲೇಖನ, ಸಾಜಿದ .ಎಸ್.ಎನ್.ಎಲ್.ಶ್ರೀಧರ್ , ಜಿ. ಎಸ್. ವರದರಾಜ್, ಪಿಯೂಸ್ ರೋಡ್ರಿಗಸ್, ನಾಗರಾಜ ಕೆದಲುಗುಡ್ಡೆ, ಇತರರು ಹಾಜರಿದ್ದರು.