Site icon Vistara News

Shivamogga News: ವಿಜೃಂಭಣೆಯಿಂದ ನಡೆದ ಕೆಂಚನಾಲ ಮಾರಿಕಾಂಬಾ ಜಾತ್ರೆ

Kenchanala Marikamba Jatra

ರಿಪ್ಪನ್‌ಪೇಟೆ: ಸಮೀಪದ ಕೆಂಚನಾಲ ಗ್ರಾಮದಲ್ಲಿ ಮಂಗಳವಾರ ನಡೆದ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರೆಗೆ ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ (Shivamogga News) ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯು ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಶ್ರೀ ಮಾರಿಕಾಂಬಾ ಜಾತ್ರೆ ನಡೆಯುತ್ತದೆ.

ಇದನ್ನೂ ಓದಿ: Namma Metro : ವಿದ್ಯುತ್‌ ಸರಬರಾಜು ವ್ಯವಸ್ಥೆಯಲ್ಲಿ ದೋಷ; ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ವ್ಯತ್ಯಯ

ಬೆಳಗ್ಗೆಯಿಂದಲೂ ನಿರಂತರವಾಗಿ ಸುರಿಯುತ್ತಿದ್ದ ಭಾರೀ ಮಳೆಯಲ್ಲಿ ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.

ಇದನ್ನೂ ಓದಿ: Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು, ದೇವಸ್ಥಾನ ಸಮಿತಿ ಅಧ್ಯಕ್ಷರು, ಸದಸ್ಯರು, ಮುಜರಾಯಿ ಇಲಾಖೆ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಸದಸ್ಯರು ಹಾಗೂ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯ ಪಿಎಸ್‌ಐ ಎ. ಪ್ರವೀಣ್ ಹಾಗೂ ಸಿಬ್ಬಂದಿ, ಸೂಕ್ತ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಿದ್ದರು.

Exit mobile version