ರಿಪ್ಪನ್‌ಪೇಟೆ: ಕಳೆದ ಒಂದು ವಾರದಿಂದ ಎಡಬಿಡದೇ ಸುರಿದ ಭಾರೀ ಮಳೆಯಿಂದಾಗಿ ಹೊಸನಗರ ತಾಲೂಕಿನ ಹುಂಚ ಹೋಬಳಿ ಕೋಡೂರು ಬಳಿಯ ಹುಲಗಾರ-ಮೈತಳ್ಳಿ ಸಂಪರ್ಕ ರಸ್ತೆಯಲ್ಲಿನ ದರೆ ಕುಸಿದು ಸಂಪರ್ಕ ಕಡಿತಗೊಂಡ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಶನಿವಾರ ಭೇಟಿ ನೀಡಿ, ಪರಿಶೀಲನೆ (Shivamogga News) ನಡೆಸಿದರು.
ಇದನ್ನೂ ಓದಿ: Paris Olympics: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಕನ್ನಡತಿ ಭಾವನಾ ಪ್ರದ್ಯುಮ್ನ
35ಕ್ಕೂ ಅಧಿಕ ಮನೆ, ಕೊಟ್ಟಿಗೆಗಳಿಗೆ ಹಾನಿ
ಭಾರೀ ಮಳೆಯಿಂದ ಹೊಸನಗರ ತಾಲೂಕಿನ ವಿವಿಧೆಡೆ 35ಕ್ಕೂ ಅಧಿಕ ಮನೆಗಳಿಗೆ ಮತ್ತು ಕೊಟ್ಟಿಗೆಗಳಿಗೆ ಹಾನಿ ಉಂಟಾಗಿದೆ. ಕೆಲವು ಮನೆಗಳು ಹಾಗೂ ಕೊಟ್ಟಿಗೆಗಳ ಗೋಡೆಗಳು ಕುಸಿದು ಬಿದ್ದರೆ, ಕೆಲವೊಂದು ಮನೆಗಳು ಸಂಪೂರ್ಣವಾಗಿ ನೆಲಸಮವಾಗಿವೆ. ನಿರಂತರವಾಗಿ ಹಗಲಿರುಳು ಎನ್ನದೆ ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಹಳ್ಳ-ಕೊಳ್ಳ ಮತ್ತು ಹೊಳೆಗಳಲ್ಲಿ ಯಥೇಚ್ಛವಾಗಿ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಅನೇಕ ಸಂಪರ್ಕ ರಸ್ತೆಗಳ ಸಂಪರ್ಕ ಕಡಿತಗೊಂಡಿದೆ.
ಇದನ್ನೂ ಓದಿ: King Cobra Rescue: 12 ಅಡಿ ಉದ್ದದ ದೈತ್ಯ ಕಾಳಿಂಗ ಸರ್ಪವನ್ನು ಹಿಡಿದದ್ದು ಹೇಗೆ? ವಿಡಿಯೊ ನೋಡಿ
ಈ ಸಂದರ್ಭದಲ್ಲಿ ಹೊಸನಗರ ತಹಸೀಲ್ದಾರ್ ರಶ್ಮಿ ಹಾಲೇಶ್, ತಾಲೂಕು ಪಂಚಾಯಿತಿ ಇಒ ನರೇಂದ್ರ, ರೆವಿನ್ಯೂ ಇನ್ಸ್‌ಪೆಕ್ಟರ್ ಆಪ್ರೋಜ್, ಗ್ರಾಮ ಲೆಕ್ಕಾಧಿಕಾರಿ ಜಾಕೀರ್ ಹುಸೇನ್, ಪಂಚಾಯಿತಿ ಆಭಿವೃದ್ಧಿ ಆಧಿಕಾರಿಗಳು ಮತ್ತು ಕಂದಾಯ ಹಾಗೂ ಗ್ರಾಪಂ ಸಿಬ್ಬಂದಿ ಉಪಸ್ಥಿತರಿದ್ದರು.