ಸೊರಬ: ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾ.ಪಂ, ಪುರಸಭೆ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಶ್ರೀ ಮಾಚಿದೇವ ಮಡಿವಾಳ ಸಂಘದ ಸಹಯೋಗದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ (Madivala Machideva Jayanti) ಆಚರಣೆ ಕಾರ್ಯಕ್ರಮವನ್ನು (Shivamogga News) ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಸೀಲ್ದಾರ್ ಹುಸೇನ್ ಸರ್ಕಾವಸ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಡಿವಾಳ ಮಾಚಿದೇವರ ಆದರ್ಶ ಮತ್ತು ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆಯ ಸಮಾಜವನ್ನು ಕಟ್ಟಲು ಮುಂದಾಗಬೇಕು ಎಂದು ಹೇಳಿದರು.
ಇದನ್ನೂ ಓದಿ: Job Alert: ಎನ್‌ಎಚ್‌ಐಡಿಸಿಎಲ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಹೊಂದಿದವರು ಅರ್ಜಿ ಸಲ್ಲಿಸಿ
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡ ಈಶ್ವರ ಚನ್ನಪಟ್ಟಣ, ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಗುಡ್ಡಪ್ಪ ಮಾತನಾಡಿದರು.
ಇದನ್ನೂ ಓದಿ: Business guide : ನಿಮ್ಮ ಉತ್ಪನ್ನಕ್ಕೆ ದರ ನಿಗದಿಪಡಿಸುವುದು ಹೇಗೆ?
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಾಕಪ್ಪ, ಸಮಾಜದ ಮುಖಂಡರಾದ ತುಳಜಪ್ಪ, ಸುರೇಶ್, ನಾರಾಯಣ, ಜಯಶೀಲ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎನ್.ಆರ್. ಪ್ರದೀಪ್ ಕುಮಾರ್, ಕೃಷಿ ನಿರ್ದೇಶಕ ಕುಮಾರ್, ಎ.ಇ.ಇ. ಚಂದ್ರಪ್ಪ, ಟಿ.ಎಚ್.ಒ. ವಿನಯ್ ಪಾಟೀಲ್ , ಬಿಇಒ ಸತ್ಯನಾರಾಯಣ, ನಾಗರಾಜ್ ಅನ್ವಯಕರ್, ತೋಟಗಾರಿಕಾ ಇಲಾಖೆಯ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಟಿ. ಬಾಲಚಂದ್ರ, ಸತ್ಯ ಪ್ರಕಾಶ್, ಪ್ರಭು, ವಿನೋದ ಸೇರಿದಂತೆ ಇತರರು ಉಪಸ್ಥಿತರಿದ್ದರು.