Shivamogga News: ಗೆಂಡ್ಲ‌ ಗ್ರಾಮದಲ್ಲಿ ಗಮನ ಸೆಳೆದ ಮಕ್ಕಳ ಸಂತೆ - Vistara News

ಶಿವಮೊಗ್ಗ

Shivamogga News: ಗೆಂಡ್ಲ‌ ಗ್ರಾಮದಲ್ಲಿ ಗಮನ ಸೆಳೆದ ಮಕ್ಕಳ ಸಂತೆ

Shivamogga News: ಸೊರಬ ತಾಲೂಕಿನ ಗೆಂಡ್ಲ‌ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಕ್ಕಳ ಸಂತೆ ಎಲ್ಲರ ಗಮನ ಸೆಳೆಯಿತು.

VISTARANEWS.COM


on

Makkala santhe in Gendla village government school
ಸೊರಬ ತಾಲೂಕಿನ ಗೆಂಡ್ಲ‌ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಕ್ಕಳ ಸಂತೆ ನಡೆಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸೊರಬ: ತಾಲೂಕಿನ ಗೆಂಡ್ಲ‌ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ (Shivamogga News) ಮಕ್ಕಳ ಸಂತೆಯು ಎಲ್ಲರ ಗಮನ ಸೆಳೆಯಿತು.

ಮಕ್ಕಳಲ್ಲಿ ವ್ಯವಹಾರ ಕೌಶಲವನ್ನು ವೃದ್ಧಿಸುವುದರ ಜತೆಗೆ ಗಣಿತದ ಮೂಲ ಕಲ್ಪನೆಗಳನ್ನು ಮೂಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಮಕ್ಕಳ ಸಂತೆಯಲ್ಲಿ ತಾಜಾ ತರಕಾರಿಗಳನ್ನು ಮಕ್ಕಳು ಅತ್ಯಂತ ಉತ್ಸಾಹದಿಂದ ಮಾರಾಟ ಮಾಡುವಲ್ಲಿ ನಿರತರಾಗಿದ್ದು ಕಂಡು ಬಂದಿತು. ಪೋಷಕರು, ಸಾರ್ವಜನಿಕರು ಮಕ್ಕಳ ಸಂತೆಗೆ ಆಗಮಿಸಿ ವಸ್ತುಗಳನ್ನು ಖರೀದಿಸಿ ಮಕ್ಕಳನ್ನು ಹುರಿದುಂಬಿಸಿದರು.

ಇದನ್ನೂ ಓದಿ: KAS: ಕೆಎಎಸ್‌ ನೇಮಕಕ್ಕೆ ದಿನಗಣನೆ ಶುರು; 504 ಹುದ್ದೆಗಳಿಗೆ ಬದಲಾಗಿ 384 ಹುದ್ದೆಗಳಿಗೆ ನೇಮಕ

ಸಂತೆಯಲ್ಲಿ ತರಕಾರಿ, ಸೊಪ್ಪು, ಹಣ್ಣುಗಳು, ದಿನಸಿ ವಸ್ತು, ಸ್ವಚ್ಛ ಹಾಗೂ ಪರಿಶುದ್ಧ ತಿಂಡಿ-ತಿನಿಸುಗಳು ಸೇರಿದಂತೆ ಹಲವು ಬಗೆಯ ವಸ್ತುಗಳನ್ನು ತಂದು ಅವುಗಳ ಪ್ರಚಾರ ಮಾಡುತ್ತಾ ಬಿರುಸಿನ ವ್ಯಾಪಾರದ ಅನುಭವ ಪಡೆದರು.

ವಿದ್ಯಾರ್ಥಿಗಳು ಸಂತೆ ಮೇಳದಲ್ಲಿ ವಿಶೇಷವಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಗಮನಾರ್ಹವಾಗಿತ್ತು. ಇದನ್ನು ಗಮನಿಸಿದ ಪೋಷಕರು, ಗ್ರಾಮಸ್ಥರು, ಸಂತೆ ಮೇಳದಲ್ಲಿ ಖರೀದಿಗೆ ಬಂದ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: Tarini Movie Kannada: ರಾಜಸ್ಥಾನ್ ಚಲನ ಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ “ತಾರಿಣಿ”

ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಜಿ. ಯಶೋಧಾ, ಮುಖ್ಯಗುರು ಸಿದ್ದಪ್ಪ, ಶಿಕ್ಷಕ ಬಸವರಾಜಪ್ಪ ಅರಣ್ಯ ಇಲಾಖೆ ನಿವೃತ್ತ ಅರಣ್ಯ ರಕ್ಷಕ ರಾಮಪ್ಪ ಜಡ್ಡಳ್ಳಿ, ಎಸ್.ಡಿ.ಎಂ.ಸಿ ಅಧ್ಯಕ್ಷ ಬಸವರಾಜಪ್ಪ, ಗ್ರಾಮಸ್ಥರಾದ ವಿರೇಶ್, ವೀರಭದ್ರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಸಿಡಿಲಿಗೆ 7 ಕುರಿಗಳು ಸಾವು, ಕೊಡಗಿನಲ್ಲಿ ಭಾರಿ ಮಳೆಗೆ ಮಗುಚಿದ ಲಾರಿ; ನಾಳೆ ಎಲ್ಲೆಲ್ಲಿ ಆರ್ಭಟ

Rain News : ರಾಜ್ಯದ ಹಲವಡೆ ವ್ಯಾಪಕ ಮಳೆಯಾಗುತ್ತಿದ್ದು, ಏ.24ರ ವರೆಗೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಕೊಡಗಿನಲ್ಲಿ ವರುಣಾರ್ಭಟಕ್ಕೆ ಚಾಲಕನ ನಿಯಂತ್ರಣ ತಪ್ಪಿದ್ದು, ಲಾರಿಯೊಂದು ತಿರುವಿನಲ್ಲಿ ಮಗುಚಿ ಬಿತ್ತು.

VISTARANEWS.COM


on

By

Karnataka Weather Forecast
Koo

ಕೊಡಗು/ಬೆಂಗಳೂರು: ಸೋಮವಾರ (ಏ.22) ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಮಡಿಕೇರಿ, ನಾಪೋಕ್ಲು, ಮೂರ್ನಾಡು ಭಾಗದಲ್ಲಿ ಭರ್ಜರಿ (Karnataka Weather Forecast) ಮಳೆಯಾಗಿದೆ. ಒಂದು ಕಡೆಗೆ ಮಳೆಯಿಂದ ಕೊಡಗಿನ ಕೃಷಿಕರಲ್ಲಿ ಮಂದಹಾಸ ಮೂಡಿದರೆ ಮತ್ತೊಂದು ಕಡೆ ಮಳೆ ಅನಾಹುತವು ಆತಂಕ ಹೆಚ್ಚಿಸಿದೆ.

ಮಡಿಕೇರಿ‌‌ ಸಮೀಪದ ಜೋಡುಪಾಲ ಬಳಿ ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು‌ ಮಗುಚಿ ಬಿತ್ತು. ಬೆಂಗಳೂರಿನಿಂದ‌‌ ಮಂಗಳೂರಿಗೆ ಲಾರಿಯಲ್ಲಿ ಜ್ಯೂಸ್ ಸಾಗಿಸಲಾಗುತ್ತಿತ್ತು. ಮಳೆಯಿಂದ ಜೋಡುಪಾಲದ ತಿರುವಿನಲ್ಲಿ ಲಾರಿಯ ವೀಲ್ ಜಾರಿ, ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಡಿಲು ಬಡಿದು 7 ಕುರಿಗಳು ಸಾವು

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ಸಿಡಿಲು ಬಡಿದು 7 ಕುರಿಗಳು ಮೃತಪಟ್ಟಿವೆ. ಹೇಮಗುಡ್ಡ ಗ್ರಾಮದ ರಾಮಣ್ಣ ಬಂಡಿ ಎಂಬುವವರಿಗೆ ಸೇರಿದ 7 ಕುರಿಗಳು ಸಿಡಿಲಿಗೆ ಬಲಿಯಾಗಿವೆ. 8ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದ ಬಿಸಿಲಿನ ತಾಪಮಾನವು ಮಳೆಯಿಂದಾಗಿ ತಣ್ಣಗಾಗಿತ್ತು. ಕೊಪ್ಪಳ‌ದಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ. ಮುಂಜಾನೆ ಮೋಡ ಕವಿದ ವಾತಾವರಣ ಇತ್ತು, ಮಧ್ಯಾಹ್ನದ ಹೊತ್ತಿಗೆ ಶುರುವಾದ ಸಣ್ಣ ಮಳೆಯು ನಂತರ ರಭಸವಾದ ಗಾಳಿಯೊಂದಿಗೆ ಗುಡುಗು ಸಿಡಿಲಿನ ಶಬ್ಧವು ಜನರನ್ನು ಬೆಚ್ಚಿ ಬೀಳಿಸಿತ್ತು.

ಇದನ್ನೂ ಓದಿ: Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

ಮುಂದಿನ 48 ಗಂಟೆಯಲ್ಲಿ ಗಾಳಿ ಜತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏ.23ರಂದು ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಕೆಲವೊಮ್ಮೆ 30-40 ಕಿ.ಮೀ ವ್ಯಾಪ್ತಿಯಲ್ಲಿ ರಭಸವಾದ ಗಾಳಿಯು ಬೀಸಲಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಕೆಲವೆಡೆ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ.

ಏ.24ರಂದು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬಿಸಿ ಗಾಳಿ ಮುನ್ನೆಚ್ಚರಿಕೆ

ಬೀದರ್‌, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂಜಾನೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆಗೆ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಈ ವಾರ ಪೂರ್ತಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast: ರಾಜ್ಯದ ಹಲವೆಡೆ ಈ ವಾರ ಪೂರ್ತಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮಳೆ ನಡುವೆಯೂ ಹಲವೆಡೆ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ.

VISTARANEWS.COM


on

By

Karnataka Weather Forecast Heavy rain In karnataka
Koo

ಬೆಂಗಳೂರು: ಮುಂದಿನ ಒಂದು ವಾರಗಳ ಕಾಲ ಮಳೆ ಅಬ್ಬರವು (Rain News) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಏಪ್ರಿಲ್‌ 22ರಂದು ಒಂದು ಅಥವಾ ಎರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಮುಂದಿನ 5 ದಿನಗಳು ಗರಿಷ್ಟ ಉಷ್ಣಾಂಶದಲ್ಲಿ ಕ್ರಮೇಣ 2-3 ಡಿ.ಸೆ ಏರಿಕೆಯಾಗುವ ಸಾಧ್ಯತೆಯಿದೆ.

ಏ.22ರಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣಒಳನಾಡಿನ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 36 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

23ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

24ರಂದು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. 25ರಿಂದ 27ರವರೆಗೆ ಮಳೆಯು ತಗ್ಗಲಿದ್ದು, ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 22 ರಿಂದ 25ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Donkey Milk: ಕತ್ತೆಗೂ ಬಂತು ಕಾಲ; ಕತ್ತೆ ಹಾಲು ಮಾರಾಟದಿಂದ ತಿಂಗಳಿಗೆ 3 ಲಕ್ಷ ರೂ. ಆದಾಯ!

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು

 1. ಹೊರಗೆ ಹೋಗುವಾಗ ಹವಾಮಾನ ಮುನ್ಸೂಚನೆ ಮೆಸೇಜ್‌ಗಳನ್ನು ಚೆಕ್‌ ಮಾಡಿ.
 2. ಮಳೆ ಸಮಯದಲ್ಲಿ ವಿಶೇಷವಾಗಿ ಹೊಲ, ತೋಟದಲ್ಲಿ ಕೆಲಸ ಮಾಡಲು ಮನೆಯಿಂದ ಹೊರಗೆ ಹೋಗಬೇಡಿ.
 3. ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.
 4. ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಪ್ರವಾಹ ಇಳಿದು ಬರದಂತಹ ತಗ್ಗು ಪ್ರದೇಶದಲ್ಲಿ ಆಶ್ರಯ ಪಡೆಯಿರಿ.‌
 5. ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರಿ.
 6. ವಿದ್ಯುತ್ ಉಪಕರಣ, ವಿದ್ಯುತ್‌ ಲೈನ್‌ಗಳು, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರಿ.
 7. ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು. ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ, ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.
 8. ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.
 9. ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು, ಇವು ಮಿಂಚನ್ನು ಆಕರ್ಷಿಸುತ್ತವೆ.
 10. ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ ಮರಗಳ ಕೆಳಗೆ ಆಶ್ರಯ ಪಡೆಯಿರಿ. ಲೋಹದ ವಸ್ತುಗಳನ್ನು ಬಳಸಬಾರದು. ಬೈಕುಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರಿ. ಸಿಡಿಲಿನ ಸಂದರ್ಭದಲ್ಲಿ ಮೊಬೈಲ್ ಫೋನ್‌ಗಳನ್ನು ಬಳಸಬೇಡಿ.
 11. ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.
 12. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ. ಬೆಂಕಿ ಮತ್ತು ವಿದ್ಯುತ್ ಸಂಪರ್ಕದಿಂದ ದೂರವಿರಿ.
 13. ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.
 14. ಸಿಡಿಲಿನ ಸಂದರ್ಭದಲ್ಲಿ, ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ವಿದ್ಯುತ್‌ ಹರಿಯುವ ಸಾಧ್ಯತೆ ಇದೆ. ಹೀಗಾಗಿ ಆಗ ಸ್ನಾನ ಮಾಡಬಾರದು, ಪಾತ್ರೆ ತೊಳೆಯಬಾರದು, ಬಟ್ಟೆ ಒಗೆಯಬಾರದು.
 15. ಗುಡುಗು ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಿ.
 16. ಗುಡುಗು ಸಿಡಿಲಿನ ಸಮಯದಲ್ಲಿ ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನ ಸಂಚಾರ ಬೇಡ.
 17. ಆಟದ ಮೈದಾನ, ಉದ್ಯಾನವನಗಳು, ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಿ. ದೋಣಿ ವಿಹಾರ ಅಥವಾ ಈಜುತ್ತಿದ್ದರೆ, ಸಾಧ್ಯವಾದಷ್ಟು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯುವುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಸಿಡಿಲಿಗೆ ಎತ್ತು ಸಾವು, ಬಿರುಗಾಳಿಗೆ ನೆಲಕಚ್ಚಿದ ಬೆಳೆಗಳು; ಏ.24ರವರೆಗೆ ಮಳೆ ಅಬ್ಬರ

Rain News : ಸಿಡಿಲಿಗೆ ಜನ-ಜಾನುವಾರಗಳು ಪ್ರಾಣ ಕಳೆದುಕೊಳ್ಳುತ್ತಿದ್ದು, ಬಿರುಗಾಳಿ ಸಹಿತ ಸುರಿದ ಮಳೆಗೆ ಅಪಾರ ಪ್ರಮಾಣದ ಬೆಳೆಗಳು ನೆಲಕಚ್ಚಿವೆ. ರಾಜ್ಯಾದ್ಯಂತ ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast Rain Effected
Koo

ಬೆಂಗಳೂರು: ರಾಜ್ಯದಲ್ಲಿ ಮಳೆ (Rain News) ಅನಾಹುತ (Karnataka Weather Forecast) ಮುಂದುವರಿದಿದ್ದು, ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಬೇಲೂರ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ರೈತ ಅಣ್ಣೆಪ್ಪ ಕಾಶಪ್ಪ ಯೆರಂಡಗೆ ಅವರಿಗೆ ಸೇರಿದ ಎತ್ತು ಸಿಡಿಲಿಗೆ ಬಲಿಯಾಗಿದೆ. ಸುದ್ದಿ ತಿಳಿದ ಹುಲಸೂರ ಠಾಣೆ ಪಿಎಸ್ಐ ನಾಗೇಂದ್ರ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹಾದ್ರಿಪುರ ಗ್ರಾಮದಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಬೆಳೆಗಳು ನೆಲಕಚ್ಚಿದವು. ಬಾಳೆ, ಹೀರೆಗಿಡ, ಅಡಿಕೆ ಬೆಳೆಗಳು ನೆಲಕ್ಕೆ ಉರುಳಿವೆ. ಶನಿವಾರ ಸಂಜೆ ಏಕಾಏಕಿ ಸುರಿದ ಮಳೆಗೆ ಗೊನೆ ಬಿಟ್ಟಿದ್ದ ಬಾಳೆ ಗಿಡಗಳು ಮುರಿದು ಹೋಗಿವೆ.

8 ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಇನ್ನೊಂದು ತಿಂಗಳಲ್ಲಿ ಕಟಾವು ಮಾಡಬೇಕಿತ್ತು. ಆದರೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ರೈತರ ಅಳಲು ತೋಡಿಕೊಂಡಿದ್ದಾರೆ. ಗ್ರಾಮದ ಸುಧಾಕರ್, ನಂಜೇಗೌಡ, ಮಂಜುನಾಥ, ಜಯರಾಮಯ್ಯ, ದೇವರಾಜಪ್ಪ, ಎಂಬ ರೈತರಿಗೆ ಸೇರಿದ ಬಾಳೆ ಗಿಡಗಳು ಸಂಪೂರ್ಣ ಹಾಳಾಗಿವೆ. ಚನ್ನರಾಯಪ್ಪ ಎಂಬ ರೈತನಿಗೆ ಸೇರಿದ ಒಂದು ಎಕರೆ ಹೀರೆಗಿಡ ನಾಶವಾಗಿದೆ.

ಹಾಸನದಲ್ಲೂ ಶನಿವಾರ ರಾತ್ರಿ ಗಾಳಿಯೊಂದಿಗೆ ಸುರಿದ ಧಾರಾಕಾರ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಫಸಲಿಗೆ ಬಂದಿದ್ದ ಅಡಿಕೆ ಗಿಡಗಳು ನಾಶವಾಗಿದ್ದವು. ರವೀಶ್ ಎಂಬುವವರಿಗೆ ಸೇರಿದ ಎರಡುವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆ ಗಿಡಗಳು, ಬಿರುಗಾಳಿ ಸಹಿತ ಸುರಿದ ಮಳೆಗೆ 350ಕ್ಕೂ ಹೆಚ್ಚು ಗಿಡಗಳು ನೆಲಕಚ್ಚಿವೆ. ಸುಮಾರು ಮೂರರಿಂದ ನಾಲ್ಕು‌ ಲಕ್ಷ ರೂ ಹಾನಿಯಾಗಿದೆ. ಫಸಲಿಗೆ ಬಂದಿದ್ದ ಅಡಿಕೆ ಗಿಡಗಳನ್ನು ಕಳೆದುಕೊಂಡು ರೈತ ರವೀಶ್ ಕಂಗಾಲಾಗಿದ್ದರು. ಸ್ಥಳಕ್ಕೆ ತಹಸೀಲ್ದಾರ್ ಮಮತಾ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Kids Summer Travel Fashion: ಬೇಸಿಗೆಯಲ್ಲಿ ಹೀಗಿರಲಿ ಚಿಣ್ಣರ ಟ್ರಾವೆಲ್‌ ಫ್ಯಾಷನ್‌

ರಾಜ್ಯದಲ್ಲಿ ಶನಿವಾರದಂದು ಕರಾವಳಿ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಭಾರಿ ಮಳೆಯು ಖಜೂರಿ 9 ಸೆಂ.ಮೀ, ಗದಗ 7 ಸೆಂ.ಮೀ ಮಳೆಯಾಗಿದೆ. ಕುಕನೂರು5, ಶಿಗ್ಗಾಂವ 5, ಸವಣೂರು 4, ಕಲಬುರಗಿ, ಶಿರಹಟ್ಟಿ, ಕುಂದಗೋಳದಲ್ಲಿ 3 ಸೆಂ.ಮೀ ಮಳೆಯಾಗಿದೆ. ಅಫಜಲಪುರ ಎಚ್‌ಎಂಎಸ್, ಆಳಂದ, ಕಲಘಟಗಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಗೋಕರ್ಣ, ಕಿರವತ್ತಿ, ಕಾರವಾರ ವೀಕ್ಷಣಾಲಯ, ಹುಬ್ಬಳ್ಳಿ, ಯಲಬುರ್ಗಾ, ಮುಂಡರಗಿ 1 ಸೆಂ.ಮೀ ಮಳೆಯಾಗಿದೆ. ಅತೀ ಗರಿಷ್ಠ ಉಷ್ಣಾಂಶ 37.4 ಡಿ.ಸೆ ಕಲಬುರಗಿಯಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಯಲ್ಲಿ ಮಳೆ ಮುನ್ಸೂಚನೆ

ಏ.22ರಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣಒಳನಾಡಿನ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಇನ್ನು ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 36 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ತಾಪಮಾನದ ಮುನ್ಸೂಚನೆ

ಏಪ್ರಿಲ್ 22 ರಿಂದ 25ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯಾದ್ಯಂತ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ಬಿರುಗಾಳಿ ಸಹಿತ ಮಳೆ ಸಾಧ್ಯತೆ

ಏಪ್ರಿಲ್‌ 22ರಂದು ಒಂದು ಅಥವಾ ಎರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಮುಂದಿನ 5 ದಿನಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಕ್ರಮೇಣ 2-3 ಡಿ.ಸೆ ಏರಿಕೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿ ಗುಡುಗು, ಸಿಡಿಲಿನ ಜತೆಗೆ ಗಾಳಿ ಮಿಶ್ರಿತ ಮಳೆ ಎಚ್ಚರಿಕೆ

Rain News : ರಾಜ್ಯದ ಹಲವೆಡೆ ಗುಡುಗು, ಸಿಡಿಲಿನ ಮಳೆಯಾಗುತ್ತಿದ್ದು, ಇನ್ನೊಂದು ವಾರ ಮುಂದುವರಿಯಲಿದೆ. ಉತ್ತರ ಕರ್ನಾಟಕದಲ್ಲಿ ವ್ಯಾಪಕ ಮಳೆಯಾದರೆ, ದಕ್ಷಿಣ ಒಳನಾಡಲ್ಲಿ ಸಾಧಾರಣವಾಗಿರಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ಬಿರುಗಾಳಿ ಸಹಿತ ಮಳೆಯಾಗುವ (Rain News) ನಿರೀಕ್ಷೆ ಇದೆ. ಗುಡುಗು, ಸಿಡಿಲಿನ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಕಲಬುರಗಿ, ವಿಜಯಪುರ ಸೇರಿ ಮಲೆನಾಡಿನ ಚಿಕ್ಕಮಗಳೂರು, ಕೊಡಗಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬೀದರ್, ಕೊಪ್ಪಳ, ಯಾದಗಿರಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳದ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಹಾಗೆ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಧ್ಯಮ ಮಳೆಯಾಗಲಿದೆ. ರಾಜ್ಯದ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

ಬಿರುಗಾಳಿ ಜತಗೆ ಗುಡುಗು ಮುನ್ನೆಚ್ಚರಿಕೆ

ಭಾನುವಾರದಂದು ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮಿಂಚು ಸಹಿತ ಗುಡುಗು ಮಳೆಯಾಗಲಿದೆ. ಇತ್ತ ಉತ್ತರ ಒಳನಾಡಿನಲ್ಲಿ 50-60 ಕಿ.ಮೀ ವೇಗದಲ್ಲಿ ಗಾಳಿ ಮಿಶ್ರಿತ ಮಳೆ ಇರಲಿದೆ. ದಕ್ಷಿಣ ಒಳನಾಡಿನಲ್ಲೂ ಗಾಳಿ ವೇಗವು 30-40 ಕಿ.ಮೀ ಇರಲಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ತಾಪಮಾನದ ಮುನ್ಸೂಚನೆ

ಮಳೆ ಮುನ್ಸೂಚನೆ ನಡುವೆಯೂ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನವು 2-3 ಡಿ.ಸೆ ಹೆಚ್ಚಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Shakti Scheme
ಕರ್ನಾಟಕ4 hours ago

Shakti Scheme: ಸಿಎಂ ಸಿದ್ದರಾಮಯ್ಯಗೆ ಫ್ರೀ ಟಿಕೆಟ್ ಹಾರ ಅರ್ಪಣೆ; ಕಾನೂನು‌ ವಿದ್ಯಾರ್ಥಿನಿಯಿಂದ ವಿಭಿನ್ನವಾಗಿ ಕೃತಜ್ಞತೆ

IPL 2024
ಕ್ರೀಡೆ5 hours ago

IPL 2024 : ಮುಂಬೈ ವಿರುದ್ಧ ರಾಜಸ್ಥಾನ್​ ತಂಡಕ್ಕೆ 9 ವಿಕೆಟ್​ ಅಮೋಘ​ ಗೆಲುವು

Gurulinga Shivacharya Swamiji
ಕರ್ನಾಟಕ5 hours ago

Gurulinga Shivacharya Swamiji: ಕಾರು ಅಪಘಾತದಲ್ಲಿ ಬಂಗರಗಾ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

Actor Darshan election campaign for Mandya Lok Sabha constituency Congress candidate star Chandru
ಮಂಡ್ಯ5 hours ago

Lok Sabha Election 2024: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಮತ ನೀಡಿ, ಗೆಲ್ಲಿಸಿ: ನಟ ದರ್ಶನ್ ಮನವಿ

Tulsi Gowda
ಪ್ರಮುಖ ಸುದ್ದಿ5 hours ago

Tulsi Gowda: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ

IPL 2024
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ತಂತ್ರಜ್ಞಾನ ಕಾಲದಲ್ಲೂ ಐಪಿಎಲ್​ ಅಂಪೈರ್ ಗಳ ಸೋಮಾರಿತನ ಆಕ್ಷೇಪಾರ್ಹ

Terrorist Attack
ದೇಶ5 hours ago

Terrorist Attack: ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು; ಉಗ್ರನ ದಾಳಿಗೆ ಸರ್ಕಾರಿ ನೌಕರ ಬಲಿ

Reliance Industries net profit of Rs 18,951 crore, declares interim dividend of Rs 10 per share
ದೇಶ5 hours ago

Reliance Industries: ರಿಲಯನ್ಸ್ ಇಂಡಸ್ಟ್ರೀಸ್‌ಗೆ 18,951 ಕೋಟಿ ರೂ. ನಿವ್ವಳ ಲಾಭ; ಷೇರಿಗೆ 10 ರೂ. ಮಧ್ಯಂತರ ಲಾಭಾಂಶ

Hardik Pandya
ಪ್ರಮುಖ ಸುದ್ದಿ5 hours ago

Hardik Pandya : ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್​​ನಲ್ಲಿ ಮತ್ತೆ ವಿಫಲ; ಬೆಂಡೆತ್ತಿದ ಅಭಿಮಾನಿಗಳು

Rain News
ಕರ್ನಾಟಕ6 hours ago

Rain News: ಪ್ರತ್ಯೇಕ ಮಳೆ ಅವಘಡ; ಬೀದರ್‌ನಲ್ಲಿ ಸಿಡಿಲು ಬಡಿದು ಇಬ್ಬರು ಯುವಕರ ದುರ್ಮರಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru karaga 2024
ಬೆಂಗಳೂರು11 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ12 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು15 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು17 hours ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ24 hours ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ3 days ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

ಟ್ರೆಂಡಿಂಗ್‌