ರಿಪ್ಪನ್‌ಪೇಟೆ: ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ (APMC Market) ಸುಸಜ್ಜಿತ ರಸ್ತೆ, ಇನ್ನಿತರೆ ಮೂಲಭೂತ ಸೌಲಭ್ಯಗಳಿಗೆ 2.50 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ (Shivamogga News) ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಹಾಗೆಯೇ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ನುಡಿದಂತೆ ನಡೆದ ಸರ್ಕಾರವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಹಣಕಾಸಿನ ಹಾಗೂ ಅನುದಾನದ ಕೊರತೆ ಇಲ್ಲ, ರಾಜ್ಯದ ಸರ್ವಾಂಗಿಣ ಅಭಿವೃದ್ಧಿಯೇ ಸರ್ಕಾರದ ಮೂಲ ಮಂತ್ರವಾಗಿದೆ ಎಂದರು.
ಇದನ್ನೂ ಓದಿ: Sugar Side Effects: ನಾವು ಒಂದು ದಿನದಲ್ಲಿ ಹೆಚ್ಚೆಂದರೆ ಎಷ್ಟು ಸಕ್ಕರೆ ಸೇವಿಸಬಹುದು?
ಈಗಾಗಲೇ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಹಿಂದಿನ ಸರ್ಕಾರದವರು ಅನುದಾನವನ್ನು ನೀಡದೆ ಅರ್ಧಕ್ಕೆ ನಿಂತ ಹಲವು ಕಾಮಗಾರಿಗಳನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಇದನ್ನೂ ಓದಿ: Symptoms Of Mouth Cancer: ಇವು ಬಾಯಿ ಕ್ಯಾನ್ಸರ್‌ನ ಪ್ರಮುಖ ಲಕ್ಷಣಗಳು, ನಿರ್ಲಕ್ಷಿಸಬೇಡಿ
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಬಂಡಿ ರಾಮಚಂದ್ರ, ಎಚ್.ವಿ. ಈಶ್ವರಪ್ಪ ಗೌಡ , ಡಿ.ಈ. ಮಧುಸೂದನ್, ಗಣಪತಿ, ಉಬೇದುಲ್ಲಾ ಷರೀಪ್, ಕೆ.ಎಸ್.ಲೋಕಪ್ಪ ಗೌಡ, ಮಳವಳ್ಳಿ ಮಂಜುನಾಥ, ಕೆ. ದೇವರಾಜ್, ಫ್ಯಾನ್ಸಿ ರಮೇಶ್, ಚಂದ್ರಶೇಖರ್ ಮಳವಳ್ಳಿ, ಕೆ.ಸಿ. ತೇಜಮೂರ್ತಿ, ದಿವಾಕರ್, ಆಶೀಫ್ ಭಾಷಾ, ಬಿಎಸ್ಎನ್ಎಲ್ ಶ್ರೀಧರ್, ಉಲ್ಲಾಸ್ ಗವಟೂರು ಸೇರಿದಂತೆ ಪಕ್ಷದ ಮುಖಂಡರು, ಎಪಿಎಂಸಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.