ರಿಪ್ಪನ್‌ಪೇಟೆ: ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ, 45 ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರಿನ (Drinking Water) ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ ನೆರವೇರಿಸಿದರು.
ಬಳಿಕ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ 45 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿಯಿತ್ತು. ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ತಿಳಿಸಿದರು.
ಇದನ್ನೂ ಓದಿ: Radish Benefits: ಮೂಲಂಗಿಯೆಂದು ಮೂಲೆಗೆಸೆಯದಿರಿ! ಮೂಲಂಗಿ ಮಹಿಮೆಯ ತಿಳಿದುಕೊಳ್ಳಿ
ಸ್ಥಳೀಯಾಡಳಿತವು ಕಾಮಗಾರಿ ಕುರಿತು ಚರ್ಚಿಸಿ ಸಮರ್ಪಕವಾಗಿ ಕಾಮಗಾರಿ ನಿರ್ವಹಿಸುವುದರ ಬಗ್ಗೆ ಅಗಾಗ ಮಾಹಿತಿ ಪಡೆಯಬೇಕು ಎಂದು ಹೇಳಿದರು.
ಇದನ್ನೂ ಓದಿ: COP28: ಹವಾಮಾನ ಬದಲಾವಣೆಯಿಂದ ಜಾಗತಿಕ ಜಿಡಿಪಿ ನಷ್ಟ, ಏನು ಕಾರಣ?
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಆಧ್ಯಕ್ಷ ಕಲಗೋಡು ರತ್ನಾಕರ್, ಬಾಳೂರು ಗ್ರಾಮ ಪಂಚಾಯಿತಿ ಆಧ್ಯಕ್ಷ ಶ್ರೀನಿವಾಸ್ ಆಚಾರ್, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ, ಗಣಪತಿ, ಮಧುಸೂದನ್, ಆಶೀಫ್‌ಭಾಷಾ, ಪ್ರಕಾಶ ಪಾಲೇಕರ್, ಲೀಲಾವತಿ ದೊಡ್ಡಯ್ಯ, ರವೀಂದ್ರ ಕೆರೆಹಳ್ಳಿ,ಸಣ್ಣಕ್ಕಿ ಮಂಜ ಹೊಸನಗರ, ಶಶಿಕಲಾ, ರೇಖಾ, ರಾಜಪ್ಪ, ಪಿಡಿಒ ಭರತ್ ಸೇರಿದಂತೆ ಗ್ರಾಮಸ್ಥರು, ಪಕ್ಷದ ಮುಖಂಡರು, ಇತರರು ಉಪಸ್ಥಿತರಿದ್ದರು.