Site icon Vistara News

Shivamogga News: ಪಿಯು ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

MLA Gopalakrishna Belur drive for taluk level sports event of PU colleges

ಸಾಗರ: ಪಟ್ಟಣದ ನೆಹರೂ ಮೈದಾನದಲ್ಲಿ ಗುರುವಾರ ಶಾಲಾ ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಪದವಿಪೂರ್ವ ಕಾಲೇಜುಗಳ (PU colleges) ತಾಲೂಕು ಮಟ್ಟದ ಕ್ರೀಡಾಕೂಟವನ್ನು (Taluk Level Sports) ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶೈಕ್ಷಣಿಕ ಬದುಕಿನಲ್ಲಿ ಪದವಿಪೂರ್ವ ಶಿಕ್ಷಣ ಹಂತ ಅತ್ಯಂತ ಮಹತ್ವದ್ದಾಗಿರುತ್ತದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಯಂತಹ ಚಟುವಟಿಕೆಗಳಲ್ಲಿ ಸಹ ತೊಡಗಿಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಉನ್ನತ ಸ್ಥಾನಕ್ಕೆ ತಲುಪುವ ನಿಟ್ಟಿನಲ್ಲಿ ಚಿಂತನೆ ಈ ಹಂತದಲ್ಲಿ ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Mysore Dasara 2023: ಬರ ಹಿನ್ನೆಲೆ ಸರಳವಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ

ಪದವಿಪೂರ್ವ ಕಾಲೇಜುಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುತ್ತದೆ ಎಂದು ಹೇಳಿದರು.

ಕ್ರೀಡಾ ಧ್ವಜರೋಹಣ ನೆರವೇರಿಸಿ ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ಬಿ., ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಜತೆ ದೈಹಿಕ ಶಿಕ್ಷಕರ ಕೊರತೆ ಇದೆ. ಇರುವ ಶಿಕ್ಷಕರೆ ಮಕ್ಕಳಿಗೆ ಪಠ್ಯದ ಜತೆಗೆ ಕ್ರೀಡಾ ತರಬೇತಿ ನೀಡುತ್ತಿದ್ದಾರೆ ಎಂದ ಅವರು, ಶಿಕ್ಷಣ ಮತ್ತು ಕ್ರೀಡೆ ಒಂದು ನಾಣ್ಯದ ಎರಡು ಮುಖ ಇದ್ದಂತೆ. ಕ್ರೀಡೆ ಮೂಲಕ ಉನ್ನತ ಸ್ಥಾನಕ್ಕೆ ತಲುಪಬಹುದು ಎಂದು ಹೇಳಿದರು.

ಪ್ರಾಚಾರ್ಯ ಸತ್ಯನಾರಾಯಣ ಕೆ.ಸಿ. ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಡಿವೈಎಸ್‍ಪಿ ಗೋಪಾಲಕೃಷ್ಣ ನಾಯ್ಕ್, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಇಂದೂಧರ ಗೌಡ, ಪ್ರಾಚಾರ್ಯರ ಸಂಘದ ಅಧ್ಯಕ್ಷ ಚಂದ್ರಪ್ಪ ಗುಂಡಪಲ್ಲಿ, ಅರುಣಕುಮಾರ್, ಜಿ.ಪರಮೇಶ್ವರ್, ರವೀಂದ್ರ ಕೆ.ವಿ., ಗುರುರಾಜ್ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ: World Alzheimer’s Day 2023 : ಮರೆವಿನ ಸಮಸ್ಯೆ ಕಾಡುವ ಮುನ್ನ ಈ ಸಂಗತಿಯನ್ನು ಮರೆಯಬೇಡಿ!

ಸೌಜನ್ಯ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಮಂಜಪ್ಪ ಪಿ. ಸ್ವಾಗತಿಸಿದರು. ಮಾಲಾ ವಂದಿಸಿದರು. ಡಾ. ದೇವೇಂದ್ರ ಕೆ.ಎಸ್. ನಿರೂಪಿಸಿದರು.

Exit mobile version