Shivamogga News: ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತಿಗೆ ಶಾಸಕ ಗೋಪಾಲಕೃಷ್ಣ ಸೂಚನೆ Vistara News

ಶಿವಮೊಗ್ಗ

Shivamogga News: ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಾನತಿಗೆ ಶಾಸಕ ಗೋಪಾಲಕೃಷ್ಣ ಸೂಚನೆ

Shivamogga News: ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

VISTARANEWS.COM


on

MLA Gopalakrishna Belur surprise visit to Ripponpet Primary Health Centre
ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ (Primary Health Centre) ವೈದ್ಯಾಧಿಕಾರಿ ಡಾ.ಅನಿಲ್‌ಕುಮಾರ್ ಸರಿಯಾಗಿ ಕರ್ತವ್ಯಕ್ಕೆ (Duty) ಹಾಜರಾಗುತ್ತಿಲ್ಲ ಎಂದು ಸಾರ್ವಜನಿಕರ ದೂರಿನನ್ವಯ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ (Surprise Visit) ನೀಡಿದರು.

ಆಸ್ಪತ್ರೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಭೇಟಿ ನೀಡಿದ ಸಂದರ್ಭದಲ್ಲಿಯೂ ವೈದ್ಯಾಧಿಕಾರಿ ಗೈರಾಗಿರುವುದನ್ನು ಕಂಡು ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಇಲ್ಲಿನ ವೈದ್ಯಾಧಿಕಾರಿಯನ್ನು ಅಮಾನತು ಪಡಿಸಿ, ವರದಿ ನೀಡುವಂತೆ ಅವರು ಸೂಚಿಸಿದರು.

ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ

ಪ್ರಾಥಮಿಕ ಆರೋಗ್ಯ ಕೇಂದ್ರದ ಹಲವು ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಆಲಿಸಿದರು.

ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ, ಇದರಿಂದ ಸರಿಯಾಗಿ ಔಷಧಿ ವಿತರಣೆಯಾಗದೇ ರೋಗಿಗಳು ಖಾಸಗಿ ಮೆಡಿಕಲ್‌ಗಳಿಗೆ ಚೀಟಿ ಹಿಡಿದು ಹೋಗುವಂತಾಗಿದೆ ಎಂದು ಸಾರ್ವಜನಿಕರು ದೂರಿದರು, ಆಗ ಶಾಸಕರು ಈ ಬಗ್ಗೆ ಸಂಬಂಧಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಸ್ಥಳೀಯ ಅಸ್ಪತ್ರೆಯ ಫಾರ್ಮಾಸಿಸ್ಟ್ ಸರಿಯಾಗಿ ಕೆಲಸಕ್ಕೆ ಬಾರದಿರುವುದರ ಬಗ್ಗೆ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.

ಇದನ್ನೂ ಓದಿ: Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಡಾ.ಅಂಜನಪ್ಪ, ಸಿಬ್ಬಂದಿಗಳಾದ ಗಾಯಿತ್ರಿ, ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾ.ಪಂ. ಮಾಜಿ ಸದಸ್ಯ ಚಂದ್ರು ಮೌಳಿಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ,ಕೆಂಚನಾಲ ಗ್ರಾ.ಪಂ. ಅಧ್ಯಕ್ಷೆ ಉಭೇದುಲ್ಲಾ ಷರೀಫ್‌, ಆಶೀಫ್, ಗಣಪತಿ, ಉಂಡಗೋಡು ನಾಗಪ್ಪ, ಶ್ರೀಧರ್, ರಮೆಶ್ ಪ್ಯಾನ್ಸಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ಹಾಲುಗುಡ್ಡೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ

Shivamogga News: ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾ.ಪಂ. ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ, 45 ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ ನೆರವೇರಿಸಿದರು.

VISTARANEWS.COM


on

MLA Gopalakrishna Belur Bhumi Pooja for drinking water work in Halugudde village
ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ ನೆರವೇರಿಸಿದರು.
Koo

ರಿಪ್ಪನ್‌ಪೇಟೆ: ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದಲ್ಲಿ ಜಲಜೀವನ್‌ ಮಿಷನ್ ಯೋಜನೆಯಡಿ, 45 ಲಕ್ಷ ರೂ ವೆಚ್ಚದಲ್ಲಿ ಕುಡಿಯುವ ನೀರಿನ (Drinking Water) ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೂಮಿಪೂಜೆ ನೆರವೇರಿಸಿದರು.

ಬಳಿಕ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ 45 ಲಕ್ಷ ರೂ ಅನುದಾನ ಬಿಡುಗಡೆಯಾಗಿದ್ದು, ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿಯಿತ್ತು. ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ತಿಳಿಸಿದರು.

ಇದನ್ನೂ ಓದಿ: Radish Benefits: ಮೂಲಂಗಿಯೆಂದು ಮೂಲೆಗೆಸೆಯದಿರಿ! ಮೂಲಂಗಿ ಮಹಿಮೆಯ ತಿಳಿದುಕೊಳ್ಳಿ

ಸ್ಥಳೀಯಾಡಳಿತವು ಕಾಮಗಾರಿ ಕುರಿತು ಚರ್ಚಿಸಿ ಸಮರ್ಪಕವಾಗಿ ಕಾಮಗಾರಿ ನಿರ್ವಹಿಸುವುದರ ಬಗ್ಗೆ ಅಗಾಗ ಮಾಹಿತಿ ಪಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ: COP28: ಹವಾಮಾನ ಬದಲಾವಣೆಯಿಂದ ಜಾಗತಿಕ ಜಿಡಿಪಿ ನಷ್ಟ, ಏನು ಕಾರಣ?

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಆಧ್ಯಕ್ಷ ಕಲಗೋಡು ರತ್ನಾಕರ್, ಬಾಳೂರು ಗ್ರಾಮ ಪಂಚಾಯಿತಿ ಆಧ್ಯಕ್ಷ ಶ್ರೀನಿವಾಸ್ ಆಚಾರ್, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ, ಗಣಪತಿ, ಮಧುಸೂದನ್‌, ಆಶೀಫ್‌ಭಾಷಾ, ಪ್ರಕಾಶ ಪಾಲೇಕರ್, ಲೀಲಾವತಿ ದೊಡ್ಡಯ್ಯ, ರವೀಂದ್ರ ಕೆರೆಹಳ್ಳಿ,ಸಣ್ಣಕ್ಕಿ ಮಂಜ ಹೊಸನಗರ, ಶಶಿಕಲಾ, ರೇಖಾ, ರಾಜಪ್ಪ, ಪಿಡಿಒ ಭರತ್ ಸೇರಿದಂತೆ ಗ್ರಾಮಸ್ಥರು, ಪಕ್ಷದ ಮುಖಂಡರು, ಇತರರು ಉಪಸ್ಥಿತರಿದ್ದರು.

Continue Reading

ಉಡುಪಿ

Karnataka Weather : ನಾಳೆ ಭಾರಿ ಮಳೆ ಎಚ್ಚರಿಕೆ; ಯಾವ್ಯಾವ ಜಿಲ್ಲೆಗಳಿಗೆ ಅಲರ್ಟ್‌!

Karnataka Weather Forecast : ತಿಂಗಳಾಂತ್ಯದವರೆಗೆ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather forecast Heavy rain alert
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮೈಸೂರು ಮತ್ತು ತುಮಕೂರಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಕಲಬುರಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಉಳಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇತ್ತ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಚದುರಿದಂತೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದೆ.

ಇದನ್ನೂ ಓದಿ: Viral News: ಪತ್ನಿಯ ಬರ್ತ್‌ಡೇ, ಪತಿಗೆ ಡೆತ್‌ಡೇ: ದುಬೈಗೆ ಕರೆದೊಯ್ಯದ್ದಕ್ಕೆ ಮೂಗಿಗೆ ಗುದ್ದಿ ಗಂಡನ ಪ್ರಾಣ ತೆಗೆದ ಹೆಂಡತಿ

ಆಗೊಮ್ಮೆ ಈಗೊಮ್ಮೆ ದರ್ಶನ ಕೊಡುವ ಸೂರ್ಯ

ನ.29ರಂದು ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಕರಾವಳಿಯಲ್ಲಿ ಒಣ ಹವೆ ಇತ್ತು. ಕಡಿಮೆ ಉಷ್ಣಾಂಶ 17.3 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ಕರ್ನಾಟಕದಲ್ಲಿ ಇಂದಿನಿಂದ ಡಿಸೆಂಬರ್‌ 3ರವರೆಗೆ ಮಳೆ ಸಾಧ್ಯತೆ!

Karnataka Weather Forecast : ಇಂದಿನಿಂದ (ನ.28) ಡಿ.3ರ ವರೆಗೂ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

Girl plying in Rain
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ (Karnataka Weather Forecast) ಆಗಿದೆ. ಕರಾವಳಿಯಲ್ಲಿ ಒಣಹವೆ ಇತ್ತು. ಕಡಿಮೆ ಉಷ್ಣಾಂಶ 17.2 ಡಿ.ಸೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ದಾಖಲಾಗಿದೆ. ಮುಂದಿನ ಒಂದು ವಾರ ರಾಜ್ಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ.

ಒಳನಾಡು ಹಾಗೂ ಕರಾವಳಿ, ಮಲೆನಾಡಿನ ಕೆಲವು ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಕೆಲವೊಮ್ಮೆ ಸಾಧಾರಣದಿಂದ ಜೋರು ಮಳೆ ಸುರಿಯಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 27 ಹಾಗೂ ಕನಿಷ್ಠ ಉಷ್ಣಾಂಶ 19 ಡಿ.ಸೆ ಇರಲಿದೆ.

ನ.28 ರಿಂದ ಡಿ.3 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ಯಾದಗಿರಿ, ವಿಜಯಪುರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಬಳ್ಳಾರಿ, ಮಂಡ್ಯದಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Child trade : ಮಕ್ಕಳ ಮಾರಾಟದ ಬೃಹತ್‌ ಜಾಲ ಪತ್ತೆ;‌ ಹೊಟ್ಟೆಯಲ್ಲಿ ಇರುವಾಗಲೇ ಬುಕಿಂಗ್!

ಒಣ ಹವೆ ಮುಂದುವರಿಕೆ

ಬೀದರ್‌, ಹಾವೇರಿ, ಕಲಬುರಗಿ, ಕೊಪ್ಪಳ ಹಾಗೂ ಚಾಮರಾಜನಗರ, ಹಾಸನ, ಮೈಸೂರಿಗೆ ಯಾವುದೇ ಮಳೆಯ ಸೂಚನೆ ಇಲ್ಲ. ಬದಲಿಗೆ ಒಣಹವೆ ಮುಂದುವರಿಯಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 33 ಡಿ.ಸೆ – 24 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 20 ಡಿ.ಸೆ
ಗದಗ: 31 ಡಿ.ಸೆ – 19ಡಿ.ಸೆ
ಹೊನ್ನಾವರ: 35 ಡಿ.ಸೆ- 23 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 30 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕ್ರೈಂ

Shivamogga News: ಅಡಕೆ, ರಬ್ಬರ್‌ಶೀಟ್‌ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Shivamogga News: ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ ಹಾಗೂ ರಬ್ಬರ್ ಶೀಟ್‌ಗಳನ್ನು ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿರುವ ರಿಪ್ಪನ್‌ಪೇಟೆ ಠಾಣೆಯ ಪೊಲೀಸರು, ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿದ್ದಾರೆ.

VISTARANEWS.COM


on

Two accused were arrested for stealing betel nuts and rubber sheets in Ripponpet
ರಿಪ್ಪನ್‌ಪೇಟೆ ಠಾಣೆಯ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ, ಅಡಿಕೆ ಹಾಗೂ ರಬ್ಬರ್ ಶೀಟ್‌ಗಳನ್ನು ವಶಪಡಿಸಿಕೊಂಡಿರುವುದು.
Koo

ರಿಪ್ಪನ್‌ಪೇಟೆ: ಮನೆಯಲ್ಲಿ ಒಣಗಿಸಿಡುತಿದ್ದ ಅಡಿಕೆ (Betelnut) ಹಾಗೂ ರಬ್ಬರ್‌ಶೀಟ್‌ಗಳನ್ನು (Rubber Sheets) ಕಳ್ಳತನ ಮಾಡುತಿದ್ದ ಕಳ್ಳರ ಜಾಲವೊಂದನ್ನು ಭೇದಿಸಿರುವ ಪಟ್ಟಣ ಠಾಣೆಯ ಪೊಲೀಸರು, ಇಬ್ಬರು ಆರೋಪಿಗಳನ್ನು ಮಾಲು ಹಾಗೂ ವಾಹನ ಸಮೇತ ಬಂಧಿಸಿರುವ ಘಟನೆ ಜರುಗಿದೆ.

ರಾಘವೇಂದ್ರ ಹರತಾಳು, ಶ್ರೀಧರ್ ನಂಜವಳ್ಳಿ ಎಂಬುವವೇ ಬಂಧಿತ ಆರೋಪಿಗಳು. ಪ್ರವೀಣ್ ಶಿವಪುರ, ನಾಗಭೂಷಣ್ ಶಿವಪುರ ಮತ್ತು ಪ್ರತಾಪ್ ಎಂಬ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಈಚೆಗೆ ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಂದೂರು ಗ್ರಾಮದ ವೀರೇಶ್ ಎಂಬುವವರ ಮನೆಯಲ್ಲಿ ಒಣಗಿಸಿದ್ದ 105 ರಬ್ಬರ್ ಶೀಟ್ ಹಾಗೂ ಕ್ವಾಡ್ರಿಗಿ ಗ್ರಾಮದ ಬಾಲರಾಜ್ ಎಂಬುವವರ ಮನೆಯಲ್ಲಿ ಒಣಗಿಸಿಟ್ಟಿದ್ದ 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಅಡಿಕೆ ಕಳ್ಳತನವಾಗಿತ್ತು ಹಾಗೂ ಇನ್ನಿತರ ಕಡೆಗಳಲ್ಲಿ ರಬ್ಬರ್ ಶೀಟ್‌ಗಳ ಕಳ್ಳತನವಾಗಿತ್ತು. ಈ ಹಿನ್ನಲೆಯಲ್ಲಿ ಪಟ್ಟಣದ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ: Ind vs Aus : ಭಾರತ- ಆಸೀಸ್​ 3ನೇ ಪಂದ್ಯಕ್ಕೆ ಮಳೆಯ ಅಡಚಣೆ ಆಗಬಹುದೇ?

ಪಿಎಸ್‌ಐ ಪ್ರವೀಣ್ ಎಸ್.ಪಿ. ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತರಿಂದ ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಅಡಿಕೆ ಹಾಗೂ 50 ಸಾವಿರಕ್ಕೂ ಹೆಚ್ಚು ಮೌಲ್ಯದ ರಬ್ಬರ್ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶ ಪಡಿಸಿಕೊಳ್ಳಲಾಗಿದೆ.‌

ಇದನ್ನೂ ಓದಿ: Ind vs Aus : 3ನೇ ಪಂದ್ಯದ ವೇಳೆ ಆಟಗಾರರು ಸೃಷ್ಟಿಸಬಲ್ಲ ಕೆಲವು ಮೈಲುಗಲ್ಲುಗಳ ವಿವರ ಇಲ್ಲಿದೆ

ಕಾರ್ಯಾಚರಣೆಯಲ್ಲಿ ಠಾಣೆಯ ಸಿಬ್ಬಂದಿಗಳಾದ ಶಿವಕುಮಾರ್ ನಾಯ್ಕ್ , ಉಮೇಶ್, ಸಂತೋಷ್ ಕೊರವರ, ಮಧುಸೂಧನ್, ರಾಮಚಂದ್ರ, ಮಂಜುನಾಥ್, ಪ್ರೇಮ್ ಕುಮಾರ್ ಹಾಗೂ ಶಿವಮೊಗ್ಗ ಎಎನ್‌ಸಿ ತಂಡದ ಇಂದ್ರೇಶ್, ಗುರುರಾಜ್ ಮತ್ತು ವಿಜಯ್ ಪಾಲ್ಗೊಂಡಿದ್ದರು.

Continue Reading
Advertisement
PM Narendra Modi phone call to workers, who rescued from collapsed tunnel
ದೇಶ1 hour ago

ಸುರಂಗದಿಂದ ರಕ್ಷಿಸಲಾದ ಕಾರ್ಮಿಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ!

mantralaya mutt
ಕರ್ನಾಟಕ2 hours ago

ಮಂತ್ರಾಲಯ ಮಠಕ್ಕೆ ಭಕ್ತರೊಬ್ಬರಿಂದ ಹೆಲಿಕಾಪ್ಟರ್‌ ಕೊಡುಗೆ

Uttarakhand CM announces rs 1 lakh rupees to trapped labourers Who rescued after 17 days
ದೇಶ2 hours ago

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Maxwell
ಕ್ರಿಕೆಟ್2 hours ago

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

Siddaramaiah
ಕರ್ನಾಟಕ3 hours ago

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

Uttarkashi Tunnel Rescue and Makeshift hospital
ದೇಶ3 hours ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ3 hours ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER4 hours ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ4 hours ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್4 hours ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ20 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌