ರಿಪ್ಪನ್‌ಪೇಟೆ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ (Primary Health Centre) ವೈದ್ಯಾಧಿಕಾರಿ ಡಾ.ಅನಿಲ್‌ಕುಮಾರ್ ಸರಿಯಾಗಿ ಕರ್ತವ್ಯಕ್ಕೆ (Duty) ಹಾಜರಾಗುತ್ತಿಲ್ಲ ಎಂದು ಸಾರ್ವಜನಿಕರ ದೂರಿನನ್ವಯ ಶುಕ್ರವಾರ ಶಾಸಕ ಗೋಪಾಲಕೃಷ್ಣ ಬೇಳೂರು ಆಸ್ಪತ್ರೆಗೆ ದಿಢೀರ್ ಭೇಟಿ (Surprise Visit) ನೀಡಿದರು.
ಆಸ್ಪತ್ರೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಭೇಟಿ ನೀಡಿದ ಸಂದರ್ಭದಲ್ಲಿಯೂ ವೈದ್ಯಾಧಿಕಾರಿ ಗೈರಾಗಿರುವುದನ್ನು ಕಂಡು ಕೂಡಲೇ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಇಲ್ಲಿನ ವೈದ್ಯಾಧಿಕಾರಿಯನ್ನು ಅಮಾನತು ಪಡಿಸಿ, ವರದಿ ನೀಡುವಂತೆ ಅವರು ಸೂಚಿಸಿದರು.
ಇದನ್ನೂ ಓದಿ: Sirsi News:ಅಕ್ರಮ ದಾಸ್ತಾನು ಮಾಡಿದ್ದ 64.950 ಕೆಜಿ ತೂಕದ ಶ್ರೀಗಂಧ ವಶ
ಪ್ರಾಥಮಿಕ ಆರೋಗ್ಯ ಕೇಂದ್ರದ ಹಲವು ಸಮಸ್ಯೆಗಳ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಆಲಿಸಿದರು.
ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ, ಇದರಿಂದ ಸರಿಯಾಗಿ ಔಷಧಿ ವಿತರಣೆಯಾಗದೇ ರೋಗಿಗಳು ಖಾಸಗಿ ಮೆಡಿಕಲ್‌ಗಳಿಗೆ ಚೀಟಿ ಹಿಡಿದು ಹೋಗುವಂತಾಗಿದೆ ಎಂದು ಸಾರ್ವಜನಿಕರು ದೂರಿದರು, ಆಗ ಶಾಸಕರು ಈ ಬಗ್ಗೆ ಸಂಬಂಧಿಸಿದ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ಸ್ಥಳೀಯ ಅಸ್ಪತ್ರೆಯ ಫಾರ್ಮಾಸಿಸ್ಟ್ ಸರಿಯಾಗಿ ಕೆಲಸಕ್ಕೆ ಬಾರದಿರುವುದರ ಬಗ್ಗೆ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಇದನ್ನೂ ಓದಿ: Shivamogga News: ವಿಶ್ವ ಹಿಂದೂ ಮಹಾಸಭಾ ಗಣಪತಿ ಉತ್ಸವ ಸಮಿತಿಯಿಂದ ಸೆ.23ರಿಂದ ಸೊರಬದಲ್ಲಿ ಕಾರ್ಯಕ್ರಮ
ಈ ಸಂದರ್ಭದಲ್ಲಿ ಡಾ.ಅಂಜನಪ್ಪ, ಸಿಬ್ಬಂದಿಗಳಾದ ಗಾಯಿತ್ರಿ, ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾ.ಪಂ. ಮಾಜಿ ಸದಸ್ಯ ಚಂದ್ರು ಮೌಳಿಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ,ಕೆಂಚನಾಲ ಗ್ರಾ.ಪಂ. ಅಧ್ಯಕ್ಷೆ ಉಭೇದುಲ್ಲಾ ಷರೀಫ್, ಆಶೀಫ್, ಗಣಪತಿ, ಉಂಡಗೋಡು ನಾಗಪ್ಪ, ಶ್ರೀಧರ್, ರಮೆಶ್ ಪ್ಯಾನ್ಸಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.