ರಿಪ್ಪನ್‌ಪೇಟೆ: ಈ ಬಾರಿಯ ಲೋಕಸಭಾ ಚುನಾವಣೆಯನ್ನು (Lok Sabha Election) ಸವಾಲಾಗಿ ಸ್ವೀಕರಿಸಲಾಗಿದ್ದು, ನಾನು ಮಾಡಿದ ಅಭಿವೃದ್ಧಿ ಕಾರ್ಯಗಳು ಮತದಾರರ ಮನಮುಟ್ಟಿವೆ. ಎಲ್ಲ ಸಮುದಾಯದ ಮತದಾರರು ನನಗೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ (PM Narendra Modi) ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದು ಸಂಸದ, ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ (Shivamogga News) ಹೇಳಿದರು.
ಸಮೀಪದ ಕೋಣಂದೂರಿನ ಶ್ರೀ ಶಿವಲಿಂಗೇಶ್ವರ ಬೃಹನ್ಮಠಕ್ಕೆ ಭೇಟಿ ನೀಡಿ ಶಿವಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಕೋಣಂದೂರು ಮಠದ ಷ.ಬ್ರ.ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳ ಅಶೀರ್ವಾದ ಪಡೆದರು.
ಇದನ್ನೂ ಓದಿ: LPG Aadhaar Link: ಎಲ್‌ಪಿಜಿ ಕನೆಕ್ಷನ್‌ಗೆ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ
ಬಳಿಕ ಮಾತನಾಡಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ಪುತ್ರನಿಗೆ ಹಾವೇರಿ ಕ್ಷೇತ್ರದಲ್ಲಿ ಟಿಕೆಟ್ ಸಿಗದೇ ಇರುವುದರಿಂದ ಬಿ.ಎಸ್. ಯಡಿಯೂರಪ್ಪ ಮತ್ತು ಬಿ.ವೈ. ವಿಜಯೇಂದ್ರ ವಿರುದ್ಧ ಸಲ್ಲದ ಮಾತುಗಳನ್ನಾಡುತ್ತಿದ್ದಾರೆ, ಈಶ್ವರಪ್ಪನವರು ಹಿರಿಯರಿದ್ದಾರೆ. ಅವರ ಬಗ್ಗೆ ನಮಗೆ ಗೌರವವಿದೆ ಎಂದು ಹೇಳಿದರು.
ಕೇಂದ್ರ ಸಮಿತಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಇದರಲ್ಲಿ ನಮ್ಮ ತಂದೆ ಅಥವಾ ರಾಜ್ಯಾಧ್ಯಕ್ಷರ ಪಾತ್ರ ಏನೂ ಇಲ್ಲ. ಮುಂದಿನ ದಿನಗಳಲ್ಲಿ ಈಶ್ವರಪ್ಪನವರಿಗೆ ಎಲ್ಲವೂ ಆರ್ಥವಾಗುವುದು ಎಂದ ಅವರು, ಪಶ್ಚಾತ್ತಾಪ ಪಡಬೇಕಾದ ದಿನಗಳು ದೂರವಿಲ್ಲ. ಎಲ್ಲದಕ್ಕೂ ಚುನಾವಣೆಯೇ ಉತ್ತರಿಸಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: Drink Water In Summer: ಬೇಸಿಗೆಯಲ್ಲಿ ನೀರು ಎಷ್ಟು ಮತ್ತು ಹೇಗೆ ಕುಡಿಯಬೇಕೆನ್ನುವುದು ತಿಳಿದಿರಲಿ
ಈ ಸಂದರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ, ಕೆ.ಆರ್.ಪ್ರಕಾಶ್, ಶಂಕರಯ್ಯ ಶಾಸ್ತ್ರಿ ಹಾದಿಗಲ್ಲು, ಬಿಜೆಪಿ ಮುಖಂಡರಾದ ನವೀನ್, ಕುಕ್ಕೆ ಪ್ರಶಾಂತ, ವೀರಶೈವ ಸಮಾಜದ ಉಪಾಧ್ಯಕ್ಷ ಜಿ.ಎಂ.ದುಂಡರಾಜಗೌಡ, ವೀರೇಶ್ ಆಲವಳ್ಳಿ, ಅಮೃತ ಸೇರಿದಂತೆ ಪಕ್ಷದ ಮುಖಂಡರು, ಇತರರು ಪಾಲ್ಗೊಂಡಿದ್ದರು.