Site icon Vistara News

Shivamogga News: ನೌಕರಿ ಕಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

Protest of guest lecturers demanding permanent of employment

ಸೊರಬ: ನೌಕರಿ ಕಾಯಂಗೊಳಿಸುವಂತೆ ಆಗ್ರಹಿಸಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು (Guest Lecturers) ಮಂಗಳವಾರ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿದರು.

ನೇತೃತ್ವ ವಹಿಸಿದ್ದ ಅತಿಥಿ ಉಪನ್ಯಾಸಕರ ಸಂಘದ ತಾಲೂಕು ಅಧ್ಯಕ್ಷ ಈ. ಶಿವಕುಮಾರ್ ಮಾತನಾಡಿ, 15 ರಿಂದ 20 ವರ್ಷಗಳಿಂದ ಯಾವುದೇ ಸೌಲಭ್ಯಗಳಿಲ್ಲದೆ ಕಾಯಂಗೊಳ್ಳದೆ, ತಾತ್ಕಾಲಿಕ ವ್ಯವಸ್ಥೆಯಲ್ಲಿಯೇ ಕಡಿಮೆ ಸಂಬಳದಲ್ಲಿ ಸೇವೆ ಸಲ್ಲಿಸುತ್ತಿರುವ ನಮ್ಮನ್ನು ಸರ್ಕಾರ ಕಡೆಗಣಿಸಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: CM Siddaramaiah: ಬಸವೇಶ್ವರ ಏತ ನೀರಾವರಿ ಯೋಜನೆ: 2024ರ ಸೆಪ್ಟೆಂಬರ್‌ನೊಳಗೆ ಕಾಮಗಾರಿ ಪೂರ್ಣಗೊಳಿಸಿ ಎಂದ ಸಿಎಂ

ಕಳೆದ ನ.23ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸರ್ಕಾರ ಗಮನ ನೀಡುತ್ತಿಲ್ಲ. ಬೆಳಗಾವಿಯ ಅಧಿವೇಶನಲ್ಲಿ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಂಡು ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು.

ಇದನ್ನೂ ಓದಿ: Lakshmi Hebbalkar: ಇಲಾಖೆಗೆ ಕೆಟ್ಟ ಹೆಸರು ಬರದಂತೆ ಕಾರ್ಯ ನಿರ್ವಹಿಸಿ: ಲಕ್ಷ್ಮೀ ಹೆಬ್ಬಾಳ್ಕರ್

ಪ್ರತಿಭಟನೆಯಲ್ಲಿ ಟಿ. ರಾಘವೇಂದ್ರ, ಎಸ್.ಎಂ. ನಿಲೇಶ್, ಪಿ. ಪ್ರಮೋದ್ ಕುಮಾರ್, ಗುರುದತ್ತ, ಸಿ.ಎಂ. ನಾಯ್ಕ್, ಕೌಶಿಕಾ, ಎ.ವಿ. ಪವಿತ್ರಾ, ದಿಲೀಪ್, ಮಲ್ಲಿಕ್, ವಸಂತ ಕುಮಾರ್, ಕಿರಣ್, ಜಹೀರುದ್ದೀನ್ ಸೇರಿದಂತೆ ಸೊರಬ ಹಾಗೂ ಆನವಟ್ಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಪಾಲ್ಗೊಂಡಿದ್ದರು.

Exit mobile version