Site icon Vistara News

Shivamogga News: ಮಕ್ಕಳ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು

Bala Mela programme by MLA Gopalakrishna Belur

ರಿಪ್ಪನ್‌ಪೇಟೆ: ಪ್ರತಿಯೊಂದು ಮಗುವಿನಲ್ಲಿ ತಮ್ಮದೇ ಆದ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು (Shivamogga News) ಹೇಳಿದರು.

ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಬಾಲ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ, ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: Water Crisis in Bengaluru: ನೀರು ದುರ್ಬಳಕೆ ಮಾಡಿದ್ರೆ ಹುಷಾರ್!‌ ಸೆಕ್ಯುರಿಟಿ ಫೋರ್ಸ್‌ನಿಂದ 5000 ರೂ. ದಂಡ

ರಾಜ್ಯ ಕಾಂಗ್ರೆಸ್‌ ಸರ್ಕಾರವು ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ ಹಾಗೂ ಚುನಾವಣಾ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿ ಹೇಳಿದ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದೆ. ಸರ್ಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿಗಳ ಫಲಾನುಭವಿಗಳು ಅದರ ಪ್ರಯೋಜನವನ್ನು ಪಡೆದುಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಮಿತ್ರ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಹೇಮಾವತಿ ಸತೀಶ್, ಉಪಾಧ್ಯಕ್ಷ ತಿಮ್ಮಪ್ಪ, ಸದಸ್ಯರಾದ ರಾಜೇಶ್, ರವೀಂದ್ರ, ಕವಿತಾ, ಅರುಣ್ ಕಟ್ಟೆ, ಷಣ್ಮುಖಪ್ಪ, ಪಲ್ಲವಿ ನಾಗರಾಜ್ ಹಾಗೂ ಶಾಲಾ ಅಭಿವೃದ್ಧಿ ಅಧ್ಯಕ್ಷ ಪುರುಷೋತ್ತಮ್, ಪಿಡಿಒ ಕುಶ, ಮೇಲ್ವಿಚಾರಕಿ ಚಂದ್ರಕಲಾ, ಅಂಗನವಾಡಿ ಕಾರ್ಯಕರ್ತೆ ವೀಣಾ ಹಾಗೂ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Road Accident: ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರ ಸಾವು

ಶಿಕ್ಷಕ ಶಿವಮೂರ್ತಿ ಎಂ.ಎಸ್. ಕಾರ್ಯಕ್ರಮ ನಿರೂಪಿಸಿದರು. ಕಿರಣ್ ಸ್ವಾಗತಿಸಿದರು, ಮೇದಿನಿ ವಂದಿಸಿದರು.

Exit mobile version