Site icon Vistara News

Shivamogga News: ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ: ಶಾಸಕ ಬೇಳೂರು ಗೋಪಾಲಕೃಷ್ಣ

Chikkajeni High School student Abhishek was felicitated for being selected at the national level in Science Exhibition

ರಿಪ್ಪನ್‌ಪೇಟೆ: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು (Talent) ಗುರುತಿಸಿ, ಅವರನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಶಾಲಾ ಶಿಕ್ಷಕರು ಹಾಗೂ ಪೋಷಕರು ಮಾಡಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಇಲ್ಲಿಗೆ ಸಮೀಪದ ಚಿಕ್ಕಜೇನಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಚಿಕ್ಕಜೇನಿ ಪ್ರೌಢಶಾಲಾ ವಿದ್ಯಾರ್ಥಿ ಅಭಿಷೇಕ್‌ ಗೆ ಸನ್ಮಾನ ಹಾಗೂ 2022- 23ನೇ ಸಾಲಿನಲ್ಲಿ ಅತ್ಯುನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಬಳಿಕ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ಎನ್.ಪಿ. ರಾಜು, ಗ್ರಾಮೀಣ ಪ್ರದೇಶದ ಬಡ ಕುಟುಂಬದ ಈ ಪ್ರತಿಭೆ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡುತ್ತಿರುವುದು ನಮ್ಮೂರಿಗೆ ಹೆಮ್ಮೆ. ಇಂತಹ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Benefits of Consuming Whole Foods: ಸಂಪೂರ್ಣ ಆಹಾರಗಳು ನಮಗೇಕೆ ಬೇಕು?

ಇದೇ ಸಂದರ್ಭದಲ್ಲಿ ಗ್ರಾ ಪಂ ಸದಸ್ಯ ಅಣ್ಣಪ್ಪ ಶೆಟ್ಟರು, ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 85 ಕ್ಕಿಂತ ಅಧಿಕ ಅಂಕ ಗಳಿಸಿದ 11 ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್ ಕೆ. ವಹಿಸಿದ್ದರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಇದನ್ನೂ ಓದಿ: ಸುಮಿತ್ ನಾಗಲ್, ರೈಬಾಕಿನಾಗೆ ಆಘಾತಕಾರಿ ಸೋಲು; ದ್ವಿತೀಯ ಸುತ್ತಿಗೆ ಲಗ್ಗೆಯಿಟ್ಟ ಬೋಪಣ್ಣ ಜೋಡಿ

ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ವೆಂಕಟಾಚಲ, ಭದ್ರಪ್ಪ ಗೌಡ, ಬಿಇಒ ಕೃಷ್ಣಮೂರ್ತಿ, ಇಸಿಒ ಕರಿಬಸಪ್ಪ , ಸಿಆರ್‌ಪಿ ಸಂತೋಷ್, ಪಿಡಿಒ ಮಂಜುಳಾ, ಎಸ್.ಡಿ.ಎಂ.ಸಿ. ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಅರವಿಂದ ಭಟ್ಟರು, ಮುಖಂಡರಾದ ಬಿ.ಜಿ. ಚಂದ್ರಮೌಳಿ, ಶಶಿಕುಮಾರ್ ಜೇನಿ, ಮುಖ್ಯಶಿಕ್ಷಕ ಶಿವಾಜಿ , ಶಿಕ್ಷಕರಾದ ಎನ್.ಡಿ. ಹೆಗಡೆ, ಶೇಖರಪ್ಪ, ವಿಜಯ ಕುಮಾರಿ, ನಿರ್ಮಲ, ಲತಾ, ಮಹೇಶ, ವೀರನ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version