Shivamogga News: ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು Vistara News

ಶಿವಮೊಗ್ಗ

Shivamogga News: ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳು

Shivamogga News: ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದ್ದು, ಒಟ್ಟು 11 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

VISTARANEWS.COM


on

Ripponpet Govt PU College students selected for state level in sports
ಶಿವಮೊಗ್ಗದಲ್ಲಿ ನಡೆದ ಜಿಲ್ಲಾಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು (Government PU College) ವಿದ್ಯಾರ್ಥಿಗಳು ಮತ್ತೊಮ್ಮೆ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ (Sports) ಮೇಲುಗೈ ಸಾಧಿಸುವುದರೊಂದಿಗೆ 12 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ (State Level) ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್ 23 ಮತ್ತು 24ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಾಲಕರ ವಿಭಾಗದಲ್ಲಿ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ,ಹಾಗೂ ಖೋ -ಖೋ ದಲ್ಲಿ ಒಬ್ಬ ವಿದ್ಯಾರ್ಥಿ ಸೇರಿದಂತೆ ಒಟ್ಟು 11 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: Weather Report : ಮಾಸಾಂತ್ಯದವರೆಗೂ ಮಳೆ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಗೋಪಾಲಕೃಷ್ಣ ಬೇಳೂರು, ಪ್ರಾಚಾರ್ಯ ಎ. ಮಂಜುನಾಥ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಜಿ. ಆರ್ ಕೃಷ್ಣಮೂರ್ತಿ, ಕಾಲೇಜು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಉಪನ್ಯಾಸಕರು, ಗ್ರಾಮಸ್ಥರು, ಪೋಷಕರುಗಳು ಅಭಿನಂದಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Shivamogga News: ರಿಪ್ಪನ್‌ಪೇಟೆ; ಅತ್ಯಾಚಾರ ಎಸಗಿ ನಾಪತ್ತೆಯಾಗಿದ್ದ ಆರೋಪಿ ಬಂಧನ

Shivamogga News: ಯುವತಿಯನ್ನು ಪ್ರೀತಿಸಿ, ಮದುವೆ ಆಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ವೆಸಗಿ ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Shivamogga News Arrest of the accused who went missing after raping a young woman at Ripponpet
ರಿಪ್ಪನ್‌ಪೇಟೆ ಪೊಲೀಸ್‌ ಠಾಣೆ.
Koo

ರಿಪ್ಪನ್‌ಪೇಟೆ: ಬಣ್ಣ ಬಣ್ಣದ ಮಾತುಗಳನ್ನಾಡಿ ಯುವತಿಯನ್ನು ಪ್ರೀತಿಸಿ ಮದುವೆ ಆಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್‌ಪೇಟೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ 24ನೇ ಮೈಲಿಕಲ್ಲಿನ ಪ್ರತಾಪ್ (26) ಬಂಧಿತ ಆರೋಪಿಯಾಗಿದ್ದಾನೆ.

ಕೋಡೂರು ಗ್ರಾಪಂ ವ್ಯಾಪ್ತಿಯ ಯುವತಿಯೊಬ್ಬಳ್ಳನ್ನು ಮದುವೆಯಾಗುವುದಗಿ ನಂಬಿಸಿ ನಿರಂತರ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿ ಗಂಡು ಮಗುವಿಗೆ ಜನ್ಮ ನೀಡಿದ ಮೇಲೆ ನಾನು ಯಾವುದೇ ಕಾರಣಕ್ಕೂ ಮದುವೆಯಾಗುವುದಿಲ್ಲ ಎಂದು ಪರಾರಿಯಾಗಿದ್ದನು. ಈ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: Tsunami Warning: 7.6 ತೀವ್ರತೆಯ ಭೂಕಂಪ; ಭೀಕರ ಸುನಾಮಿಯ ವಾರ್ನಿಂಗ್‌!

ಆರೋಪಿಯನ್ನು ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ನೇತೃತ್ವದ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಶಿವಕುಮಾರ್ ನಾಯ್ಕ್, ಉಮೇಶ್ ಹಾಗೂ‌ ಮಧುಸೂಧನ್ ಇದ್ದರು.

Continue Reading

ಉಡುಪಿ

Karnataka Weather: ಟಿ-20 ಕ್ರಿಕೆಟ್‌ ಪಂದ್ಯದಲ್ಲಿ ಮಳೆಯಾಟ!

Rain News : ರಾಜ್ಯದ ಹಲವೆಡೆ ಸೂರ್ಯ ಮರೆಯಾಗಿ ಮಳೆಯ ಸಿಂಚನವಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇರಲಿದೆ.

VISTARANEWS.COM


on

By

Rain disrupted for two more days
Koo

ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡು ಹಾಗೂ ಮಲೆನಾಡಲ್ಲಿ (Rain News) ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಶುಷ್ಕ ವಾತಾವರಣ ಇರಲಿದೆ. ಇತ್ತ ಬೆಂಗಳೂರಲ್ಲಿ ಮಳೆ ಸೂಚನೆ ಇದ್ದು ಟಿ-20 ಕ್ರಿಕೆಟ್‌ ಪಂದ್ಯಕ್ಕೆ ಮಳೆಯಡ್ಡಿಯಾಗುವ ಸಾಧ್ಯತೆ ಇದೆ.

ಮೈಸೂರು ಟು ಮಂಡ್ಯ ಮಳೆ

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ: Velvet Lehenga Fashion: ವಿಂಟರ್‌ ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ವೆಲ್ವೆಟ್‌ ಲೆಹೆಂಗಾ ಜಾದೂ

ಸಣ್ಣ ಪ್ರಮಾಣದಲ್ಲಿ ವರ್ಷಧಾರೆ

ಮಲೆನಾಡಿನ ಹಾಸನ ಮತ್ತು ಕೊಡಗಿನಲ್ಲಿ ಹಗುರದಿಂದ ಕೂಡಿದ ಮಳೆ ಇರಲಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಣ್ಣದಾಗಿ ಮಳೆ ಸುರಿಯಲಿದೆ. ಉತ್ತರ ಕನ್ನಡದಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಬೆಂಗಳೂರಲ್ಲಿ ಕ್ರಿಕೆಟ್‌ಗೆ ಮಳೆ ಅಡ್ಡಿ

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ಭಾರತ -ಶ್ರೀಲಂಕಾ ಟಿ-20 ಪಂದ್ಯವಿದ್ದು, ಮಳೆಯು ಅಡ್ಡಿಯಾಗುವ ಆತಂಕ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 36 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 31 ಡಿ.ಸೆ – 18 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 20 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 36 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ದಿನ ಪೂರ್ತಿ ಮರೆಯಾಗುವ ಸೂರ್ಯ; ಸಂಜೆಗೆ ಮಳೆಯ ಸಿಂಚನ

Rain News : ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ (Karnataka Weather Forecast) ಸೂಚನೆ ಇದ್ದರೆ, ಉತ್ತರ ಒಳನಾಡಿನಲ್ಲಿ ಒಣ ಹವೆ (Dry weather) ಇರಲಿದೆ.

VISTARANEWS.COM


on

By

Rain alert karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಂಕಾಗಿದ್ದ ಮಳೆಯು ಕರಾವಳಿಯಲ್ಲಿ ಮತ್ತೆ ಸಕ್ರಿಯಗೊಳ್ಳುತ್ತಿದೆ. ಉತ್ತರ ಒಳನಾಡಿನಲ್ಲಿ ಮಳೆಯು (Rain News) ಮಾಯವಾಗಿದ್ದು, ಒಣ ಹವೆ ಇರಲಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡಲ್ಲಿ ಮಳೆಯು (Karnataka Weather Forecast) ಮುಂದುವರಿಯಲಿದೆ. ಡಿ.3-4ರಂದು ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗಲಿದ್ದು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಣ್ಣದಾಗಿ ಮಳೆ ಸುರಿಯಲಿದೆ. ಉತ್ತರ ಕನ್ನಡದಲ್ಲೂ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.

ಇದನ್ನೂ ಓದಿ: Star winter Fashion: ಸೀಸನ್‌ಗೆ ತಕ್ಕಂತೆ ಬದಲಾಯ್ತು ನಟಿ ಶಾನ್ವಿ ಶ್ರೀವಾತ್ಸವ್ ವಿಂಟರ್‌ ಫ್ಯಾಷನ್‌

ಬೆಂಗಳೂರಲ್ಲಿ ಘಳಿಗೆಗೊಂದು ವಾತಾವರಣ

ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವೊಮ್ಮೆ ಸೂರ್ಯ ದರ್ಶನ ನೀಡಲಿದ್ದಾನೆ. ಅಲ್ಲಲ್ಲಿ ಸಂಜೆ ಅಥವಾ ರಾತ್ರಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಇರಲಿದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಳಗಾವಿಯಲ್ಲಿ ಮಳೆಯ ಸಿಂಚನ

ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಬೆಳಗಾವಿಯ ಗೋಕಾಕ್‌ನಲ್ಲಿ 3 ಸೆಂ.ಮೀ ಹಾಗೂ ಚಿಕ್ಕೋಡಿ, ಸಂಕೇಶ್ವರ, ಹಾಗೂ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 15.2 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಕರ್ನಾಟಕ

Congress politics: ಮಧು ಬಂಗಾರಪ್ಪಗೆ ಅಹಂ ತಲೆಗೇರಿದೆ; ಕಾಂಗ್ರೆಸ್‌ ಶಾಸಕ ಬೇಳೂರು ವಾಗ್ದಾಳಿ

Congress Politics : ಮಧು ಬಂಗಾರಪ್ಪ ಮತ್ತು ಬೇಳೂರು ಗೋಪಾಲಕೃಷ್ಣ ನಡುವಿನ ಫೈಟ್‌ ಜೋರಾಗಿದೆ. ಸಚಿವರಿಗೆ ಅಹಂಕಾರ ತಲೆಗೇರಿದೆ ಎನ್ನುವುದು ಬೇಳೂರು ಹೊಸ ಆರೋಪ.

VISTARANEWS.COM


on

Madhu Bangarappa Beluru Gopalakrishna
Koo

ಬೆಂಗಳೂರು: ಶಿವಮೊಗ್ಗ ಕಾಂಗ್ರೆಸ್‌ (Congress politics) ಒಡೆದ ಮನೆಯಾಗಿರುವುದು ಸ್ಪಷ್ಟವಾಗಿದೆ. ಶಿಕ್ಷಣ ಸಚಿವರಾಗಿರುವ ಸೊರಬ ಮಧು ಬಂಗಾರಪ್ಪ (Madhu Bangarappa) ಮತ್ತು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ (Beluru gopalakrishna) ನಡುವೆ ನೇರಾನೇರ ವಾಗ್ದಾಳಿಗಳು ನಡೆಯುತ್ತಿವೆ. ಒಂದು ಕಡೆ ಮಧು ಬಂಗಾರಪ್ಪ ಅವರು ಬೇಳೂರು ಅವರು ಇಲ್ಲದೆಯೇ ಪ್ರಗತಿ ಪರಿಶೀಲನಾ ಸಭೆ ನಡೆಸಿದರೆ, ಇತ್ತ ಬೇಳೂರು ಅವರು ಬೆಂಗಳೂರಿನಲ್ಲಿ ಮಧು ಬಂಗಾರಪ್ಪಗೆ ಅಹಂ ತಲೆಗೇರಿದೆ ಎಂದಿದ್ದಾರೆ.

ʻʻಸಚಿವರಿಗೆ ಸ್ವಲ್ಪ ಅಹಃ ಜಾಸ್ತಿ ಆಗಿದೆ. ಅಹಃ ಜಾಸ್ತಿ ಆದಾಗ ಏನು ಮಾಡೋಕೆ ಆಗಲ್ಲ. ಅಧಿಕಾರ ಬಂದ ಸಂದರ್ಭದಲ್ಲಿ ಪಿತ್ತ ನೆತ್ತಿಗೆರಿದಾಗ ಇವೆಲ್ಲವೂ ಆಗುತ್ತೆ. ಸಚಿವರು ತಾಳ್ಮೆಯಿಂದ ಕ್ಷೇತ್ರದ ಶಾಸಕರನ್ನ ಕರೆದುಕೊಂಡು ಹೋಗಬೇಕು. ಬೇರೆ ಸಚಿವರು ನೋಡಿ ಎಷ್ಟು ಚೆನ್ನಾಗಿ ಮಾತಾಡ್ತಾರೆ. ಜನರ ಜೊತೆಗೆ ಹೇಗೆ ಇರ್ತಾರೆ ಅಂತ ನೋಡಿ ಕಲಿಯಬೇಕುʼʼ ಎಂದು ಬೆಂಗಳೂರಿನಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಹೇಳಿದರು.

ಜಿಲ್ಲೆಯಲ್ಲಿ ಪಕ್ಷ ಎರಡು ಭಾಗ ಆಗಿದೆ. ಅದನ್ನು ಸರಿಪಡಿಸಬೇಕು. ಮುಂದಿನ ಚುನಾವಣೆಯಲ್ಲಿ ಏನು ಮಾಡಬೇಕು ಅಂತ ನೋಡಬೇಕು. ನಮಗೂ ಜವಾಬ್ದಾರಿ ಇದೆ, ಅವರಿಗಿಂತ ಹೆಚ್ಚು ಜವಾಬ್ದಾರಿ ಇದೆ. ನಮ ಪಕ್ಷದಲ್ಲೇ ಇದ್ದು ಹುಳುಕು ಮಾಡೋದಲ್ಲ. ಯಡಿಯೂರಪ್ಪ ಮಕ್ಕಳನ್ನು ಸೋಲಿಸಬೇಕು ಎಂದು ಬೇಳೂರು ಗೋಪಾಲಕೃಷ್ಣ ಕುಟುಕಿದ್ದಾರೆ.

ಈಶ್ವರಪ್ಪ ಅವರದು ಹರಕು ನಾಲಗೆ

ʻʻಡಿ.ಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆʼʼ ಎಂಬ ಈಶ್ವರಪ್ಪ ಹೇಳಿಕೆಗೆ ಬೇಳೂರು ಗೋಪಾಲಕೃಷ್ಣ ತಿರುಗೇಟು ನೀಡಿದ್ದು, ಈಶ್ವರಪ್ಪ ಹಿರಿಯ ನಾಯಕರು, ಅವರದ್ದು ಹರಕು ನಾಲಗೆ. ಏನ್ ಬೇಕಾದರೂ ಮಾತಾಡ್ತಾರೆ. ಅವರ ಮೇಲೆ ಕೇಸ್ ಇಲ್ವಾ..? ಕೋರ್ಟ್ ನಲ್ಲಿ ಕೇಸ್ ಇರೋರೆಲ್ಲ ಜೈಲಿಗೆ ಹೋಗ್ತಾರೆ ಅಂತ ಹೇಳೋಕೆ ಆಗುತ್ತಾ..? ಅವರ ಬಗ್ಗೆ ಮಾತಾಡೋಕೆ ಅಸಹ್ಯ ಆಗುತ್ತದೆ. ಈಶ್ವರಪ್ಪ ಅಂತ ಹೇಸಿಗೆ ಮನಸ್ಸನ್ನು ನಾನು ನೋಡಿಲ್ಲ. ಅದಕ್ಕೆ ನಾನು ಮಾತಾಡಲ್ಲʼʼ ಎಂದು ಹೇಳಿದರು.

ಇದನ್ನೂ ಓದಿ: Hosanagara News: ನೀರು, ಮೇವು ಅಭಾವವಾಗದಂತೆ ನೋಡಿಕೊಳ್ಳಿ; ಪಿಡಿಒಗಳಿಗೆ ಮಧು ಬಂಗಾರಪ್ಪ ಸೂಚನೆ

ಬಿಜೆಪಿಗೆ ಯಡಿಯೂರಪ್ಪನವರೇ ಮೋಸ ಮಾಡಿದ್ರಾ?

ʻʻಮೂರು ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಬೀಳುತ್ತೆʼʼ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬೇಳೂರು ಗೋಪಾಲಕೃಷ್ಣ ಅವರು, ʻʻಯಡಿಯೂರಪ್ಪ ಅವರು ಒಂದು ಮಾತು ತಿಳಿದುಕೊಳ್ಳಬೇಕು. ಹಿಂದೆ ಮಿಷನ್ 150 ಅಂತ ಹೇಳಿ ಯಡಿಯೂರಪ್ಪ ರಾಜ್ಯ ಓಡಾಡಿದ್ರು. ಅವರಿಗೆ ಬರೀ 65 ಸೀಟ್ ಬಂದಿದೆ. ಅವರ ನಾಯಕತ್ವದಲ್ಲೇ ಚುನಾವಣೆ ನಡೆದಿತ್ತು. ಮೋದಿ ಅವರನ್ನು ಕರ್ಕೊಂಡು ಬಂದು ರಾಜ್ಯದಲ್ಲಿ ಓಡಾಡಿದ್ದಾರೆ/ ಆದರೂ ಅಧಿಕಾರಕ್ಕೆ ಬಂದಿಲ್ಲ. ಆದರೆ, ನಮಗೆ ರಾಜ್ಯದಲ್ಲಿ 136 ಸೀಟ್ ಜನ ಬೆಂಬಲ ಕೊಟ್ಟಿದ್ದಾರೆ. ಸರ್ಕಾರಕ್ಕೆ ಯಾವುದೇ ತೊಂದರೆ ಆಗಲ್ಲʼʼ ಎಂದು ಹೇಳಿದರು.

ʻʻಯಡಿಯೂರಪ್ಪ ಅವರು ತಮ್ಮ ಮಗ ರಾಜ್ಯ ಬಿಜೆಪಿ ಅಧ್ಯಕ್ಷ ಆದ ತಕ್ಷಣವೇ ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ. ಬೊಮ್ಮಾಯಿ ಇದ್ದಾಗ 150 ಸೀಟ್ ಬರುತ್ತೆ ಅಂತ ಯಡಿಯೂರಪ್ಪ ಹೇಳಿದ್ರಲ್ಚಾ..? ಯಾಕೆ ಬರಲಿಲ್ಲ? ಹಾಗಿದ್ದರೆ ಅವರೇ ಮೋಸ ಮಾಡಿರಬೇಕು. ಯಡಿಯೂರಪ್ಪ ಅವರೇ ಬಿಜೆಪಿ ಪಕ್ಷಕ್ಕೆ ಮೋಸ ಮಾಡಿದ್ದಾರೆ. ಮಗ ಬಂದ ತಕ್ಷಣವೇ ಚುನಾವಣೆ ಆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅಂದರೆ ಬಿಜೆಪಿಗೆ ಅಪ್ಪ ಮಕ್ಕಳು ಸೇರಿ ಮೋಸ ಮಾಡಿರಬೇಕುʼʼ ಎಂದು ಹೇಳಿದ ಬೇಳೂರು ಅವರು, ʻʻಆಗಲೇ ಏನು ನಡೆಯಲಿಲ್ಲ ಈಗ ಏನ್ ನಡೆಯುತ್ತೆ..?ʼʼ ಎಂದು ಕೇಳಿದ್ದಾರೆ.

ಬೇಳೂರು ಇಲ್ಲದಾಗ ಕಚೇರಿಗೆ ಹೋದ ಮಧು ಬಂಗಾರಪ್ಪ

ಈ ನಡುವೆ, ಸಚಿವ ಮಧು ಬಂಗಾರಪ್ಪ ಅವರು ಬೇಳೂರು ಗೋಪಾಲ ಕೃಷ್ಣ ಅವರು ಇಲ್ಲದೆ ಇದ್ದಾಗ ಸಾಗರದ ಶಾಸಕರ ಕಚೇರಿಗೆ ಭೇಟಿ ನೀಡಿದ್ದಾರೆ. ಮಧು ಬಂಗಾರಪ್ಪ ಅವರು ಅಲ್ಲಿಗೆ ಭೇಟಿ ನೀಡಿದಾಗ ಬೇಳೂರು ಬೆಂಗಳೂರಿನಲ್ಲಿದ್ದರು. ಕಚೇರಿಗೆ ಭೇಟಿ ನೀಡಿದಾಗ ಅಲ್ಲಿನ ಕಚೇರಿಯಲ್ಲಿದ್ದವರು ಶಾಲು ಹಾಕಿ,ಮಾಲೆ ಹಾಕಿ ಸ್ವಾಗತಿಸಿದರು.

Continue Reading
Advertisement
Police call off protest FIR against lawyer who slapped police
ಕರ್ನಾಟಕ6 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ8 mins ago

Ladli Behna: ಒಂದೇ ಯೋಜನೆ ತಂದು ಮಧ್ಯಪ್ರದೇಶ ಗೆದ್ದ ಸಿಎಂ ಚೌಹಾಣ್;‌ ಏನಿದು ಲಾಡ್ಲಿ ಬೆಹ್ನಾ?

Bobby Deol cries after paparazzi praise him as Animal
ಬಾಲಿವುಡ್11 mins ago

Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

R Ashok
ಕರ್ನಾಟಕ24 mins ago

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Snehit Gowda and Namratha Gowda
ಬಿಗ್ ಬಾಸ್38 mins ago

BBK SEASON 10: ನಮ್ರತಾ ಮೇಲೆ ಸ್ಟ್ರಾಂಗ್​ ಫೀಲಿಂಗ್ಸ್ ಇದೆ ಎಂದ ಸ್ನೇಹಿತ್‌!

Narendra Modi
ದೇಶ46 mins ago

Election Results 2023: ಚುನಾವಣೆ ಗೆಲುವು; ಬಿಜೆಪಿ ಕಚೇರಿಯಲ್ಲಿ ಮೋದಿ ಸ್ವಾಗತಕ್ಕೆ ಸಿದ್ಧತೆ; ಸಂಭ್ರಮ

DK Shivakumar Telangana congress
ಕರ್ನಾಟಕ1 hour ago

Telangana Results 2023 : ತೆಲಂಗಾಣದಲ್ಲಿ ಗೆದ್ದ‌ ಕೈ ಶಾಸಕರೆಲ್ಲರೂ ಹೈದರಾಬಾದ್‌ಗೆ ಶಿಫ್ಟ್

MLA T.B.Jayachandra spoke at the inauguration program of the new Para Medical College at Shira
ತುಮಕೂರು1 hour ago

Tumkur News: ಪ್ಯಾರಾ ಮೆಡಿಕಲ್ ಓದಿದವರಿಗೆ ವಿಫುಲ ಅವಕಾಶ: ಶಾಸಕ ಟಿ.ಬಿ.ಜಯಚಂದ್ರ

Shivamogga News Arrest of the accused who went missing after raping a young woman at Ripponpet
ಕ್ರೈಂ1 hour ago

Shivamogga News: ರಿಪ್ಪನ್‌ಪೇಟೆ; ಅತ್ಯಾಚಾರ ಎಸಗಿ ನಾಪತ್ತೆಯಾಗಿದ್ದ ಆರೋಪಿ ಬಂಧನ

Tumkur News Students can succeed when they utilize opportunities in the right way says Dr. Suresh D S
ತುಮಕೂರು1 hour ago

Tumkur News: ವಿದ್ಯಾರ್ಥಿಗಳು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು: ಡಾ. ಸುರೇಶ್

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ6 mins ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ7 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ19 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌