ರಿಪ್ಪನ್‌ಪೇಟೆ: ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೂರು ಗ್ರಾಮದಲ್ಲಿ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಅಕ್ರಮ ಮದ್ಯವನ್ನು (Illegal Liquor) ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಬಾಳೂರು ಗ್ರಾಮದ ಗಿರೀಶ್ ಕುಮಾರ್ ಎಂಬುವವರ ಮನೆಯ ಪಕ್ಕದ ಖಾಲಿ ಜಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿ ಗಿರೀಶ್ ಕುಮಾರ್ ಎಂಬಾತನನ್ನು ವಶಕ್ಕೆ ಪಡೆದು, ಮದ್ಯ ತುಂಬಿದ 10 ಟೆಟ್ರಾ ಪ್ಯಾಕ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ.
ದಾಳಿಯಲ್ಲಿ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್.ಪಿ. ನೇತೃತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್, ಶಿವಕುಮಾರ್, ಸಂತೋಷ್ ಮತ್ತು ಮಧುಸೂಧನ್ ಇದ್ದರು.