Site icon Vistara News

Shivamogga News: 8 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ

Sexual assault of an 8 year old child Accused arrested

ರಿಪ್ಪನ್‌ಪೇಟೆ: ಎಂಟು ವರ್ಷದ ಬಾಲಕಿ ಮೇಲೆ 52 ವರ್ಷದ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (Shivamogga News) ನಡೆದಿದೆ.

ಚಂದ್ರಪ್ಪ (52) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: Viral News : ಪೊಲೀಸರು ದಂಡ ಹಾಕಿದ್ದಕ್ಕೆ ಆಟೋ ರಿಕ್ಷಾಕ್ಕೇ ಬೆಂಕಿ ಹಚ್ಚಲು ಮುಂದಾದ ಚಾಲಕ!

ಭಾನುವಾರ ಸಂಜೆ ಸಮಯದಲ್ಲಿ ಆರೋಪಿ ಚಂದ್ರಪ್ಪನಿಗೆ ಸೇರಿದ ದಿನಸಿ ಅಂಗಡಿಗೆ ಚಾಕೋಲೆಟ್ ಖರೀದಿಸಲು ಬಂದ ಎಂಟು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ್ದಾನೆ. ನಂತರದಲ್ಲಿ ಈ ವಿಷಯ ಯಾರಿಗೂ ತಿಳಿಸದಂತೆ 10 ರೂ. ನೀಡಿ ನಾಳೆ ಬಾ ಮತ್ತಷ್ಟು ಚಾಕೊಲೇಟ್ ಕೊಡುತ್ತೇನೆ ಎಂದಿದ್ದಾನೆ. ಆ ನಂತರದಲ್ಲಿ ಬಾಲಕಿ ಅಳುತ್ತಾ ಮನೆಗೆ ಹೋಗಿ ಪೋಷಕರಿಗೆ ವಿಷಯವನ್ನು ತಿಳಿಸಿದ್ದಾಳೆ. ತಕ್ಷಣ ಬಾಲಕಿಯ ಪೋಷಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಚಂದ್ರಪ್ಪನನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

Exit mobile version