Site icon Vistara News

Shivamogga News: ಸೊರಬದಲ್ಲಿ ಶೌರ್ಯ ಜಾಗರಣ ರಥಯಾತ್ರೆ

Shivamogga News Shaurya Jagarana RathaYatra in Soraba

ಸೊರಬ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಿಂದೂಗಳನ್ನು (Hindu) ಸ್ವಾಭಿಮಾನಿಗಳನ್ನಾಗಿ ಮಾಡುವ ಕೆಲಸ ಹಿಂದಿನಿಂದಲೂ ಮಾಡುತ್ತಿದೆ, ತ್ಯಾಗದ ಪರಂಪರೆ ನಮ್ಮದು ಎನ್ನುವುದನ್ನು ಇಂದಿನ ಪೀಳಿಗೆಗೆ ತಿಳಿಸಬೇಕಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಕೆ.ಆರ್. ಸುನೀಲ್ ಹೇಳಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್-ಬಜರಂಗದಳದಿಂದ ಹಮ್ಮಿಕೊಂಡ ಶೌರ್ಯ ಜಾಗರಣ ರಥಯಾತ್ರೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಹಿಂದೂ ಧರ್ಮದ ಮೇಲೆ ನೂರಾರು ವರ್ಷಗಳ ಕಾಲ ಪರಕೀಯರ ದಾಳಿ ನಡೆದಾಗಲೂ ಧರ್ಮವೂ ಈ ನೆಲದಲ್ಲಿ ನೆಲೆಯೂರಿದೆ. ಹಿಂದೂ ಧರ್ಮದ ರಕ್ಷಣೆಗಾಗಿ ಅನೇಕ ಮಹನೀಯರ ತ್ಯಾಗ ಮತ್ತು ಬಲಿದಾನವಿದೆ. ಇದನ್ನೂ ಇಂದಿನ ಪೀಳಿಗೆಗೆ ತಿಳಿಸುವುದು ಆದ್ಯ ಕರ್ತವ್ಯವಾಗಿದೆ. ಹಿಂದೂ ಸಮಾಜದ ಯುವಕರನ್ನು ಬಡಿದೆಬ್ಬಿಸಲು ಶೌರ್ಯ ಜಾಗರಣ ರಥ ಯಾತ್ರೆ ದೇಶಾದ್ಯಂತ ನಡೆಯುತ್ತಿದೆ ಎಂದರು.

ಇದನ್ನೂ ಓದಿ: BYJU’s Layoffs: ಮತ್ತೆ 5500 ಉದ್ಯೋಗ ಕಡಿತಕ್ಕೆ ಮುಂದಾದ ಬೈಜೂಸ್ ಕಂಪನಿ

ವಿಹಿಂಪ ಕ್ಷೇತ್ರೀಯ ಸತ್ಸಂಗ ಪ್ರಮುಖ್ ಮಹಾಬಲೇಶ್ವರ ರಾವ್ ಮಾತನಾಡಿ, ಭಾರತದ ಮೇಲೆ ಆಕ್ರಮಣ ನಡೆದಾಗಲೂ ಹಿಂದೂ ಧರ್ಮ ಉಳಿದಿದೆ. ಹಿಂದೂ ಧರ್ಮದ್ದು ಸೋಲಿನ ಇತಿಹಾಸವಲ್ಲ ಪರಾಕ್ರಮದ ಇತಿಹಾಸ ಎನ್ನುವುದನ್ನು ಸಮಾಜಕ್ಕೆ ತಿಳಿಸುವುದು ಅಗ್ಯವಿದೆ ಎಂದ ಅವರು, ವಿಹಿಂಪ ಸ್ಥಾಪನೆಯಾಗಿ ಅರವತ್ತು ವರ್ಷ ಹಾಗೂ ಶ್ರೀ ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮ ಮಂದಿರ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ಶೌರ್ಯ ಜಾಗರಣ ರಥಯಾತ್ರೆ ನಡೆಯುತ್ತಿದೆ ಎಂದರು.

ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್ ಮುಂಭಾಗ ಶೌರ್ಯ ಜಾಗರಣ ರಥಯಾತ್ರೆಯನ್ನು ಸ್ವಾಗತಿಸಿ, ರಾಜಬೀದಿಯಲ್ಲಿ ಡೊಳ್ಳು ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.

ಇದನ್ನೂ ಓದಿ: Asian Games 2023: ಕೇವಲ ಒಂದು ಅಂಕದ ಅಂತರದಲ್ಲಿ ವಿಷ್ಣು​ಗೆ ಕೈತಪ್ಪಿದ ಬೆಳ್ಳಿ ಪದಕ

ಬಜರಂಗದಳ ವಿಭಾಗ ಸಂಯೋಜಕ ರಾಜೇಶ್‍ಗೌಡ, ಜಿಲ್ಲಾ ಸಹ ಸಂಯೋಜಕ ಶಶಿಕುಮಾರ್, ತಾಲೂಕು ಸಹ ಸಂಯೋಜಕ ಮಣಿಕಂಠ, ನಗರ ಸಂಯೋಜಕ ಎಸ್.ಎನ್. ಶರತ್, ವಿಹಿಂಪ ಸಾಗರ ಜಿಲ್ಲಾ ಕಾರ್ಯದರ್ಶಿ ಎಚ್.ಎಲ್. ಚಂದನ್, ಜಿಲ್ಲಾ ಮಂದಿರ ಅರ್ಚಕ ಪುರೋಹಿತ ಸಂಪರ್ಕ ಪ್ರಮುಖ್ ಎಂ.ಎಸ್. ಕಾಳಿಂಗ್‍ರಾಜ್, ಮಾತೃ ಮಂಡಳಿಯ ವಾಸಂತಿ ನಾವುಡಾ, ವೀಣಾ ಶ್ರೀಧರ್, ದುರ್ಗಾ ವಾಹಿನಿ ಕೋಮಲಾ ಪುರಾಣಿಕ್, ಪ್ರಮುಖರಾದ ಡಾ.ಎಚ್.ಇ. ಜ್ಞಾನೇಶ್, ಪಾಣಿ ರಾಜಪ್ಪ, ಸಂಜೀವ್ ಆಚಾರ್, ನಾಗರಾಜ ಗುತ್ತಿ, ಸಿ.ಪಿ. ಈರೇಶ್‍ಗೌಡ, ಮಹೇಶ್ ಖಾರ್ವಿ, ಮಹೇಶ್ ಗೋಖಲೆ, ಆಶೀಕ್ ನಾಗಪ್ಪ, ನಿರಂಜನ್, ನೆಮ್ಮದಿ ಶ್ರೀಧರ್, ಅಮೃತ, ಕೆ.ವಿ. ವಿನಾಯಕ, ರಾಘು ಮಡಿವಾಳ, ಉಮಾಶಂಕರ, ಪ್ರವೀಣ, ಆನಂದ, ಅಭಿ ಹೊಯ್ಸಳ ಸೇರಿದಂತೆ ಇತರರಿದ್ದರು.

Exit mobile version